Amit Shah: ಮಾರ್ಚ್​ 12 ರಂದು ಅಮಿತ್​ ಶಾ ಮಧ್ಯ ಕರ್ನಾಟಕ ದಾವಣಗೆರೆಗೆ ಭೇಟಿ

ಮಾರ್ಚ್​ 12ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಈ ವೇಳೆ 53 ಸಾವಿರ ಫಲಾನುಭವಿಗಳಿಗೆ ವಿವಿಧ ಇಲಾಖೆಯ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ.

Amit Shah: ಮಾರ್ಚ್​ 12 ರಂದು ಅಮಿತ್​ ಶಾ ಮಧ್ಯ ಕರ್ನಾಟಕ ದಾವಣಗೆರೆಗೆ ಭೇಟಿ
ಕೇಂದ್ರ ಗೃಹಸಚಿವ ಅಮಿತ್ ಶಾ
Follow us
ವಿವೇಕ ಬಿರಾದಾರ
|

Updated on:Mar 04, 2023 | 10:32 AM

ದಾವಣಗೆರೆ: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Election) ಹತ್ತಿರವಾಗುತ್ತಿದ್ದು, ರಾಜಕೀಯ ನಾಯಕರು ಪ್ರಚಾರವನ್ನು ಜೋರಾಗಿ ನಡೆಸಿದ್ದಾರೆ. ಮತದಾರರನ್ನು ತಮ್ಮತ್ತ ಸೆಳೆಯಲು ವಿವಿಧ ಗಿಫ್ಟ್​​ಗಳು, ಭಾಗ್ಯಗಳನ್ನು ಘೋಷಿಸುತ್ತಿದ್ದಾರೆ. ರಾಜ್ಯ ಬಿಜೆಪಿ (Karnataka BJP) ನಾಲ್ಕು ದಿಕ್ಕಿನಿಂದ ವಿಜಯ ಸಂಕಲ್ಪ ರಥಯಾತ್ರೆ (Vijay Sankalpa Rathyatra) ಪ್ರಾರಂಭಿಸಿದೆ. ಈ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲು ಕೇಂದ್ರ ನಾಯಕರು ರಾಜ್ಯಕ್ಕೆ ಬಂದು ಹೋಗಿದ್ದಾರೆ. ಬಿಜೆಪಿ ಹೈ ಕಮಾಂಡ್​​ ರಾಜ್ಯ ಪ್ರವಾಸ ಮಾಡುತ್ತಿದ್ದು, ಮತಗಳ ಕ್ರೋಢೀಕರಣಕ್ಕೆ ಟೊಂಕ ಕಟ್ಟಿ ನಿಂತಿದ್ದಾರೆ. ಶತಾಯಗತಾಯ ಈ ಬಾರಿ ಪೂರ್ಣ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ರಾಜ್ಯ ಸುತ್ತುತ್ತಿದ್ದಾರೆ. ಅದರಂತೆ ಈಗ ಮತ್ತೆ ಮಾರ್ಚ್​ 12ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ.

ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮ ವಸತಿ ಶಾಲೆ ಮೈದಾನದಲ್ಲಿ ನಡೆಯುವ 53 ಸಾವಿರ ಫಲಾನುಭವಿಗಳಿಗೆ ವಿವಿಧ ಇಲಾಖೆಯ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ದಾವಣಗೆರೆ, ವಿಜಯನಗರ, ಗದಗ, ಧಾರವಾಡ ಸೇರಿದಂತೆ 12 ಜಿಲ್ಲೆಗಳ 53 ಸಾವಿರ ಫಲಾನುಭವಿಗಳು ಸಮಾವೇಶದಲ್ಲಿ ಸೇರುವ ನಿರೀಕ್ಷೆ ಇದೆ. ಅಮಿತ್ ಶಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖರು ಸಾಥ್ ನೀಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 am, Sat, 4 March 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ