ದಾವಣಗೆರೆ: ಸ್ಪೆಷಲ್ ಡ್ರೈವ್‌ಗೂ ಮುನ್ನ ದೇಶದಲ್ಲಿ 60 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದನ್ನು ಸೋನಿಯಾ ಗಾಂಧಿ ನೀಡಿದ್ದಾರಾ. ವಿರೋಧ ಪಕ್ಷ ಕಾಂಗ್ರೆಸ್‌ಗೆ ಲಸಿಕೆ ಜ್ವರ ಬಂದಿದೆ ಎಂದು ಕೊರೊನಾ ವಿಚಾರವಾಗಿ ವಿರೋಧ ಪಕ್ಷಗಳ ವಾದಕ್ಕೆ ಸಂಬಂಧಪಟ್ಟಂತೆ ದಾವಣಗೆರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಬಳಿಕ ಪಂಜಾಬ್ ಮುಖ್ಯಮಂತ್ರಿ ವಿಚಾರವಾಗಿ ಮಾತನಾಡಿದ ಅವರು, ಇದ್ದ ಒಬ್ಬ ಮುಖ್ಯಮಂತ್ರಿಯನ್ನೂ ಕಾಂಗ್ರೆಸ್ ತೆಗೆದುಹಾಕಿದೆ. ಪಂಜಾಬ್ ಸಿಎಂ ರನ್ನು ತೆಗೆದುಹಾಕಿ ಕಾಂಗ್ರೆಸ್ ಗೊಂದಲದಲ್ಲಿದೆ. ಅಮರೀಂದರ್ ಸಿಂಗ್ ಸಮರ್ಥ ಮುಖ್ಯಮಂತ್ರಿಯಾಗಿದ್ದರು. ರಾಹುಲ್, ಸೋನಿಯಾಗಿಂತ ಕ್ಯಾಪ್ಟನ್ ಅಮರೀಂದರ್ ಸಿಂಗ್ ಜನಪ್ರಿಯತೆ ಪಡೆಯುತ್ತಿದ್ದರು. ಹೀಗಾಗಿ ಅವರನ್ನು ಸಿಎಂ ಸ್ಥಾನದಿಂದ ತೆಗೆದುಹಾಕಿದ್ದಾರೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಆಗಲು ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ
ಮುಖ್ಯಮಂತ್ರಿ ಆಗಲು ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿಯಿದೆ. ಹೀಗಾಗಿಯೇ ಹೈಕಮಾಂಡ್ ಓಲೈಸಲು ಹೇಳಿಕೆ ನೀಡುತ್ತಿದ್ದಾರೆ ಎಂದು ದಾವಣಗೆರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಯಾರು ಸಿಎಂ ಆಗಿರುತ್ತಾರೋ ಅವರ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ
ಸಿಎಂ ಬೊಮ್ಮಾಯಿ ನೇತೃತ್ವದಲ್ಲಿಯೇ ಚುನಾವಣೆ ನಡೆಯುತ್ತದೆ. ಇದನ್ನೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟವಾಗಿ ಹೇಳಿದ್ದಾರೆ. ಇನ್ನು ಪಕ್ಷ ಸಂಘಟನೆ ವಿಚಾರದಲ್ಲಿ ಬಿಎಸ್‌ವೈಗೆ ಪೂರ್ಣ ಸ್ವಾತಂತ್ರ್ಯ ಇದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಮೋದಿ ಹುಟ್ಟುಹಬ್ಬದಂದು ಎರಡೂವರೆ ಕೋಟಿ ಡೋಸ್ ಲಸಿಕೆ
ಮೋದಿ ಹುಟ್ಟುಹಬ್ಬದಂದು ದೇಶಾದ್ಯಂತ ಎರಡೂವರೆ ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ನಿನ್ನೆ ಒಂದೇ ದಿನ 80 ಲಕ್ಷ ಡೋಸ್ ಕೊವಿಡ್ ಲಸಿಕೆ ನೀಡಲಾಗಿದೆ. ಕರ್ನಾಟಕದಲ್ಲಿಯೇ 28 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಮೊದಲ ಹಂತದಲ್ಲಿ ಶೇ.70ರಷ್ಟು ಲಸಿಕೆ ನೀಡಲಾಗಿದ್ದು, ಎರಡನೇ ಹಂತದಲ್ಲಿ ಶೇಕಡಾ 30 ರಷ್ಟು ಲಸಿಕೆ ನೀಡಲಾಗಿದೆ. ಅತ್ಯಂತ ಮುಂದುವರಿದ ದೇಶಗಳು ಈ ಸಾಧನೆ ಮಾಡಿಲ್ಲ. ಇನ್ನು ಸಂಕಷ್ಟದ ಸ್ಥಿತಿಯಲ್ಲಿ ದೇಶದಲ್ಲಿ ಯಾರೂ ಹಸಿವಿನಿಂದ ಸತ್ತಿಲ್ಲ. ಇದು ಭಾರತದ ಸಾಧನೆ ಎಂದು ಕಾಂಗ್ರೆಸ್ ಲಸಿಕೆ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಅನಧಿಕೃತ ದೇಗುಲಗಳ ತೆರವು
ರಾಜ್ಯದಲ್ಲಿ ಅನಧಿಕೃತ ದೇಗುಲಗಳ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ಸ್ಥಳೀಯ ಅಧಿಕಾರಿಗಳು ತರಾತುರಿಯಲ್ಲಿ ಒಡೆಯಲು ಮುಂದಾಗಿದ್ದಾರೆ. ಈಗಾಗಲೇ ಅದನ್ನು ತಡೆ ಹಿಡಿಯಲಾಗಿದೆ. ಸಿಎಂ ಬೊಮ್ಮಾಯಿ ಜತೆ ನಿನ್ನೆ ಈ ಬಗ್ಗೆ ಮಾತನಾಡಿದ್ದೇವೆ. ಮತ್ತೆ ದೇಗುಲಗಳನ್ನು ಒಡೆಯಬಾರದು ಎಂದು ಹೇಳಿದ್ದೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ:
ಗಣಿ ಕ್ಷೇತ್ರದಲ್ಲಿ ಹಲವು ಬದಲಾವಣೆಗೆ ಕೇಂದ್ರದ ಚಿಂತನೆ: ಸುಳಿವು ನೀಡಿದ ಸಚಿವ ಪ್ರಲ್ಹಾದ ಜೋಶಿ
ದಾವಣಗೆರೆಯಲ್ಲಿಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ; ಮೂರು ಪ್ರಮುಖ ನಿರ್ಣಯ ಸಾಧ್ಯತೆ
Published On - 11:19 am, Sun, 19 September 21