AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಚನಾನಂದ ಸ್ವಾಮೀಜಿ, ಮಠದ ಟ್ರಸ್ಟ್​​ ನಡುವೆ ಹೊಸ ಸಂಘರ್ಷ: ಡಿಸಿ, ಎಸ್ಪಿಗೆ ದೂರು

ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಮತ್ತು ಮಠದ ಟ್ರಸ್ಟ್ ನಡುವೆ ಹೊಸ ಸಂಘರ್ಷ ಶುರುವಾಗಿದೆ. ಮಠದಿಂದ ಉಚ್ಛಾಟನೆಗೊಂಡರೂ, ಸ್ವಾಮೀಜಿ ಬಸವ ಜಯಂತಿ ಆಚರಣೆಗೆ ಮುಂದಾಗಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಟ್ರಸ್ಟ್, ದಾವಣಗೆರೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗೆ ಲಿಖಿತ ದೂರು ನೀಡಿದೆ. ಸ್ವಾಮೀಜಿಗೆ ಬಸವ ಜಯಂತಿ ಆಚರಿಸುವ ನೈತಿಕ ಹಕ್ಕಿಲ್ಲ ಎಂದು ಟ್ರಸ್ಟ್ ಆರೋಪಿಸಿದೆ. ಮಠದಲ್ಲಿ ಅಹಿತಕರ ಘಟನೆಗಳಾದರೆ ಸ್ವಾಮೀಜಿಯೇ ಹೊಣೆ ಎಂದು ಎಚ್ಚರಿಕೆ ನೀಡಿದೆ.

ವಚನಾನಂದ ಸ್ವಾಮೀಜಿ, ಮಠದ ಟ್ರಸ್ಟ್​​ ನಡುವೆ ಹೊಸ ಸಂಘರ್ಷ: ಡಿಸಿ, ಎಸ್ಪಿಗೆ ದೂರು
ವಚನಾನಂದ ಸ್ವಾಮೀಜಿ, ಮಠದ ಟ್ರಸ್ಟ್​​ ನಡುವೆ ಹೊಸ ಸಂಘರ್ಷImage Credit source: Tv9 Kannada
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Apr 22, 2026 | 5:28 PM

Share

ದಾವಣಗೆರೆ, ಏಪ್ರಿಲ್​​ 22: ಹರಿಹರ ಪಂಚಮಸಾಲಿ ಪೀಠದಲ್ಲಿ ಟ್ರಸ್ಟ್ ಹಾಗೂ ವಚನಾನಂದ ಸ್ವಾಮೀಜಿ ನಡುವಿನ ಸಂಘರ್ಷ ಮತ್ತೊಂದು ಹಂತ ತಲುಪಿದೆ. ಉಚ್ಛಾಟನೆ ಮಾಡಲಾಗಿದ್ದರೂ ಪಂಚಮಸಾಲಿ ಪೀಠದಲ್ಲಿ ಬಸವ ಜಯಂತಿ ಆಚರಣೆಗೆ ನಿರ್ಧಾರ ಹಿನ್ನೆಲೆ ಈ ಬಗ್ಗೆ ದಾವಣಗೆರೆ ಡಿಸಿ, ಎಸ್​ಪಿಗೆ ಮಠದ ಟ್ರಸ್ಟ್​​ನಿಂದ ಲಿಖಿತ ದೂರು ನೀಡಲಾಗಿದೆ. ಏ.13ರಂದು ಮಠದಿಂದ ವಚನಾನಂದಶ್ರೀ ಉಚ್ಚಾಟನೆ ಮಾಡಲಾಗಿದೆಯಾದರೂ ಅವರು ಮಠದಲ್ಲಿಯೇ ಇದ್ದಾರೆ. ಅಲ್ಲದೇ ಏ.24ರಂದು ಬಸವ ಜಯಂತಿ ಆಚರಿಸಲು ಮುಂದಾಗಿದ್ದಾರೆ. ಬಸವ ಜಯಂತಿ ಮಾಡುವ ನೈತಿಕತೆ ವಚನಾನಂದ ಸ್ವಾಮೀಜಿಗೆ ಇಲ್ಲ ಎಂದು ಆರೋಪಿಸಲಾಗಿದೆ.

ಮಠದಲ್ಲಿ ಏನಾದರೂ ಅಹಿತಕರ ಘಟನೆ ನಡೆದರೆ ಉಸ್ತುವಾರಿ ಡಾ.ರಾಜಕುಮಾರ ಮತ್ತು ಲೆಕ್ಕ ಕೊಡಿ ಅಭಿಯಾನದ ಅಧ್ಯಕ್ಷ ಸಿರಿಗೆರೆ ಪರಮೇಶ್ವರ ಗೌಡ ಕಾರಣ. ಹೀಗಾಗಿ ಮಠದಲ್ಲಿ ಬಸವ ಜಯಂತಿ ಆಚರಣೆಗೆ ಅವಕಾಶ ನೀಡದಂತೆ ಆಗ್ರಹಿಸಿ ಪಂಚಮಸಾಲಿ ಗುರುಪೀಠದ ಟ್ರಸ್ಟ್​ನ ಪ್ರಧಾನ ಧರ್ಮದರ್ಶಿ ಉಮಾಪತಿ,ಕಾರ್ಯದರ್ಶಿ ಜ್ಯೋತಿ ಪ್ರಕಾಶ್​ರಿಂದ ಡಿಸಿ ಮತ್ತು ಎಸ್​ಪಿಗೆ ದೂರು ನೀಡಲಾಗಿದೆ. ಮತ್ತೊಂದೆಡೆ ಪೀಠದಿಂದ ಉಚ್ಛಾಟಿತ ವಚನಾನಂದ ಶ್ರೀಗಳಿಗೂ ಟ್ರಸ್ಟ್​​ ಈ ಬಗ್ಗೆ ಪತ್ರ ಮುಖೇನ ಎಚ್ಚರಿಸಿದೆ.

ಇದನ್ನೂ ಓದಿ: ಉಚ್ಛಾಟಿತ ವಚನಾನಂದ ಶ್ರೀಗೆ ಮತ್ತೊಂದು ಸಂಕಷ್ಟ, ಧ್ಯಾನದ ಮೊರೆ ಹೋದ ಸ್ವಾಮೀಜಿ

ಶ್ರೀಗಳಿಗೆ ಟ್ರಸ್ಟ್​​ ಬರೆದ ಪತ್ರದಲ್ಲೇನಿದೆ?

ಏಪ್ರಿಲ್​​ 24ರಂದು ಶ್ರೀಪೀಠದಲ್ಲಿ ಶ್ರೀ ಬಸವ ಜಯಂತಿಯನ್ನು ಮತ್ತು ಬೃಹತ್ ರಾಜ್ಯ ಸಮಾವೇಶ ಅದ್ದೂರಿಯಲ್ಲಿ ಆಚರಣೆ ಮಾಡುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ಪ್ರಕಟಿಸಿರುವುದನ್ನ ಗಮನಿಸಿದ್ದೇವೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕರೆ ನೀಡುತ್ತಿರುವುದು ಕೂಡ ಕಂಡುಬಂದಿದೆ. ಆದರೆ ಈಗಾಗಲೇ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ದಿಂದ ಪದಚ್ಯುತಿ (ಉಚ್ಛಾಟನೆ) ಮಾಡಲಾಗಿರುತ್ತದೆ. ಗೌರವಪೂರ್ವಕವಾಗಿ ಮಠವನ್ನ ತ್ಯಜಿಸಲು ಹೇಳಿದ್ದೇವೆ ಆದರೆ ತಾವು ಇಲ್ಲಿವರೆಗೂ ನಮ್ಮ ವಿರುದ್ಧವೇ ಬಾಯಿಗೆ ಬಂದಂತೆ ಮಾತನಾಡುತ್ತಾ ಚಾರಿತ್ರವಧೆ ಮಾಡುತ್ತಾ ಬಂದಿದ್ದೀರಿ. ಉಚ್ಛಾಟನೆಗೊಂಡಿರುವ ತಾವು ಕಾರ್ಯಕ್ರಮಗಳನ್ನು ಶ್ರೀಪೀಠದಲ್ಲಿ ಮಾಡಲು ಯಾವುದೇ ನೈತಿಕ ಹಕ್ಕು ಇರುವುದಿಲ್ಲ. ಆದ ಕಾರಣ ಯಾವುದೇ ಸಭೆ ಸಮಾರಂಭ ಪತ್ರಿಕಾಗೋಷ್ಠಿ ಮಾಡಬಾರದೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತಾ, ಶ್ರೀಪೀಠದಲ್ಲಿ ಯಾವುದೇ ಅಹಿತಕರ ಘಟನೆ, ಗಲಾಟೆ, ಶ್ರೀಪೀಠದ ಆಸ್ತಿಗೆ ಹಾನಿಯದಲ್ಲಿ ತಾವುಗಳು, ಶ್ರೀಪೀಠದ ಅನಮಾತುನಲ್ಲಿರುವ ಆಡಳಿತಾಧಿಕಾರಿ ಡಾ.ರಾಜ್ ಕುಮಾರ್ ಮತ್ತು ಜಿ. ಪರಮೇಶ್ ಗೌಡ್ರು ಹೊಳೆಸಿರಿಗೆರಿ ನೇರವಾಗಿ ಹೊಣೆಯಾಗಿರುತ್ತೀರಿ ಎಂದು ತಮಗೆ ತಿಳಿಯಬಯಸುತ್ತೇವೆ ಎಂದು ಟ್ರಸ್ಟ್​​ ಹೇಳಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ