AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೋಷಿ ರಮೇಶ್​ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹ

Ramesh Jarkiholi CD Controversy: ಈ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಈಗ ರಮೇಶ್ ಜಾರಕಿಹೊಳಿ ತಮ್ಮ ತಪ್ಪಿಲ್ಲದಿದ್ದರೂ ನೈತಿಕ ಹೊಣೆಗಾರಿಕೆಯಿಂದ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ, ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು.

ನಿರ್ದೋಷಿ ರಮೇಶ್​ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹ
ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ರಮೇಶ್​ ಜಾರಕಿಹೊಳಿ
Skanda
| Edited By: |

Updated on:Mar 04, 2021 | 4:11 PM

Share

ಬೆಂಗಳೂರು: ಅಶ್ಲೀಲ ವಿಡಿಯೋ ಕಾರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಸ್ವಾಮೀಜಿ, ರಮೇಶ್ ಜಾರಕಿಹೊಳಿ ನಿರ್ದೋಷಿಯಾಗಿದ್ರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ ಇಷ್ಟು ತರಾತುರಿಯಲ್ಲಿ ಅವರ ರಾಜಿನಾಮೆ ಅಂಗೀಕರಿಸಬಾರದಿತ್ತು. ಹೀಗಾಗಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಈಗ ರಮೇಶ್ ಜಾರಕಿಹೊಳಿ ತಮ್ಮ ತಪ್ಪಿಲ್ಲದಿದ್ದರೂ ನೈತಿಕ ಹೊಣೆಗಾರಿಕೆಯಿಂದ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ, ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು. ಹೀಗೆ ಏಕಾಏಕಿ ರಾಜೀನಾಮೆ ಅಂಗೀಕರಿಸಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Valmiki Prasannananda Swamiji letter

ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಬೆಂಬಲಿಗರು ಮಾನಸಿಕ ಹಿಂಸೆ ನೀಡ್ತಿದ್ದಾರೆ, ಮಾರ್ಚ್​ 9ರಂದು ವಿಚಾರಣೆಗೆ ಹಾಜರಾಗ್ತೀನಿ: ದಿನೇಶ್ ಕಲ್ಲಹಳ್ಳಿ

ಸಂತ್ರಸ್ತ ಯುವತಿ ತಮ್ಮದು ಸಹಮತ ಸೆಕ್ಸ್​ ಎಂದು ಹೇಳಿದರೆ.. ನಾನು ಕಾನೂನು ಹೋರಾಟ ನಡೆಸುತ್ತೇನೆ -ದಿನೇಶ್ ಕಲ್ಲಹಳ್ಳಿ

Published On - 3:40 pm, Thu, 4 March 21

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ