Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ವೀರಶೈವ-ಲಿಂಗಾಯತ ರಾಷ್ಟ್ರೀಯ ಅಧಿವೇಶನಕ್ಕೆ ದಿನಾಂಕ ನಿಗದಿ, ಚುನಾವಣೆ ಹೊಸ್ತಿಲಲ್ಲಿ ಸಮುದಾಯ ಒಗ್ಗೂಡಿಸಲು ಮಹತ್ವದ ಪ್ರಯತ್ನ

ಕೆಲ ವರ್ಷಗಳ ಹಿಂದೆ ವೀರಶೈವರು ಮತ್ತು ಲಿಂಗಾಯತರು ಬೇರೆ ಎಂಬ ಮಾತು ಕೇಳಿಬಂದಾಗ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ಪಕ್ಷಕ್ಕಿಂತಲೂ ಸಮಾಜ ಮೊದಲು ಎಂಬ ನಿಲುವು ತಳೆದರು.

ದಾವಣಗೆರೆ: ವೀರಶೈವ-ಲಿಂಗಾಯತ ರಾಷ್ಟ್ರೀಯ ಅಧಿವೇಶನಕ್ಕೆ ದಿನಾಂಕ ನಿಗದಿ, ಚುನಾವಣೆ ಹೊಸ್ತಿಲಲ್ಲಿ ಸಮುದಾಯ ಒಗ್ಗೂಡಿಸಲು ಮಹತ್ವದ ಪ್ರಯತ್ನ
ಶಾಮನೂರು ಶಿವಶಂಕರಪ್ಪ
Follow us
TV9 Web
| Updated By: Rakesh Nayak Manchi

Updated on:Nov 18, 2022 | 6:19 AM

ದಾವಣಗೆರೆ: ಹೇಳಿ ಕೇಳಿ ಇದು ವಿಧಾನಸಭೆ ಚುನಾವಣೆಯ ವರ್ಷ. ಈಗ ನಡೆಯುವುದೇ ವಿದ್ಯಮಾನ ಮಹತ್ವ ಪಡೆದುಕೊಳ್ಳುತ್ತದೆ. ರಾಜ್ಯದ ಬಲಿಷ್ಠ ಸಮಾಜಗಳಲ್ಲಿ ಒಂದಾದ ಲಿಂಗಾಯತ ಸಮುದಾಯವು ಬೃಹತ್ ಅಧಿವೇಶ ನಡೆಸಲು ಮುಂದಾಗಿದೆ. ಇದಕ್ಕೆ ದಾವಣಗೆರೆಯೇ ವೇದಿಕೆ ಆಗಲಿದೆ. ವೀರಶೈವ ಮಹಾಸಭೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸಮಾವೇಶದಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಾರೆ. ಪ್ರಸ್ತುತ ಅವರು ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾವೇಶ ಉದ್ಘಾಟಿಸಲಿದ್ದಾರೆ.

ದಾವಣಗೆರೆಯ ಎಂಬಿಎ ಕಾಲೇಜು ಮೈದಾನದಲ್ಲಿ ಡಿ 24 ರಿಂದ 26ರ ವರೆಗೆ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ 23ನೇ ಅಧಿವೇಶನ ನಡೆಯಲಿದೆ. ಸಮಾವೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. 2011ರಲ್ಲಿ ಮೈಸೂರಿನಲ್ಲಿ ಮಹಾಸಭಾದ 22ನೇ ಅಧಿವೇಶನವು ಸುತ್ತೂರು ಶ್ರೀಗಳ ನೇತೃತ್ವದಲ್ಲಿ ಬಹಳ ಅದ್ಧೂರಿಯಾಗಿ ನಡೆದಿತ್ತು. ಈ ಹಿಂದೆ ಬೆಳಗಾವಿ, ಬೀದರ್‌ ನಗರಗಳಲ್ಲಿಯೂ ವಿಜೃಂಭಣೆಯಿಂದ ಅಧಿವೇಶನ ನಡೆದಿತ್ತು. ದಾವಣಗೆರೆಯಲ್ಲಿ ಇದೇ ಮೊದಲ ಬಾರಿಗೆ ಅಧಿವೇಶನವನ್ನು ಆಯೋಜಿಸಲಾಗಿದೆ.

ವಿಜೃಂಭಣೆ, ಅದ್ಧೂರಿ ಮತ್ತು ಯಶಸ್ವಿಯಾಗಿ ಅಧಿವೇಶನ ನಡೆಯಬೇಕಿದೆ ಎಂದು ಸಮುದಾಯದ ಮುಖಂಡರು ಬಯಸಿದ್ದಾರೆ. ಸ್ವಾಗತ, ವೇದಿಕೆ, ಊಟೋಪಚಾರ ಸೇರಿದಂತೆ ಆಗಬೇಕಿರುವ ಅತ್ಯಗತ್ಯ ಕೆಲಸಗಳ ನಿರ್ವಹಣೆಗಾಗಿ ಸಮಿತಿಗಳನ್ನು ರಚಿಸಿ, ಜವಾಬ್ದಾರಿ ಹಂಚಿಕೆ ಮಾಡಲು ಮುಂದಾಗಿದ್ದಾರೆ. ಅಧಿವೇಶನಕ್ಕೆ ಬಂದವರಿಗೆ ವಸತಿಗಾಗಿ ಹೋಟೆಲ್, ಕಾಲೇಜು, ಕ್ಯಾಂಪಸ್ ಇತ್ಯಾದಿ ಕಟ್ಟಡಗಳನ್ನು ಗುರುತಿಸಲಾಗುವುದು. ಎಂಬಿಎ ಕಾಲೇಜು ಮೈದಾನದಲ್ಲಿ ಕೃಷಿ, ಆಟೊಮೊಬೈಲ್ ಇತರೆ ವಸ್ತುಗಳ ಪ್ರದರ್ಶನಕ್ಕೂ ಅವಕಾಶ ಮಾಡಿಕೊಡಲಾಗುವುದು. ಅಧಿವೇಶನದ ಮೊದಲ ದಿನ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಅದ್ಧೂರಿ ಮೆರವಣಿಗೆ ನಡೆಸಲು ತೀರ್ಮಾನಿಸಲಾಗಿದೆ.

ಕೆಲ ವರ್ಷಗಳ ಹಿಂದೆ ವೀರಶೈವರು ಮತ್ತು ಲಿಂಗಾಯತರು ಬೇರೆ ಎಂಬ ಮಾತು ಕೇಳಿಬಂದಾಗ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ಪಕ್ಷಕ್ಕಿಂತಲೂ ಸಮಾಜ ಮೊದಲು ಎಂಬ ನಿಲುವು ತಳೆದರು. ವೀರಶೈವ- ಲಿಂಗಾಯತ ಒಂದೇ ಎಂಬ ಹೇಳಿಕೆಗೆ ಗಟ್ಟಿಯಾಗಿ ನಿಂತಿದ್ದರು. ಅವರು ಅಂದು ನಿಲುವು ಸಡಿಲಿಸಿದ್ದರೆ ವೀರಶೈವರು ಮತ್ತು ಲಿಂಗಾಯತರು ಪ್ರತ್ಯೇಕ ಸಮುದಾಯ ಎಂದಾಗುತ್ತಿತ್ತು. ರಾಜಕೀಯವಾಗಿಯೂ ಹಲವು ಬೆಳವಣಿಗೆಗಳಿಗೆ ಇದು ಕಾರಣವಾಗುತ್ತಿತ್ತು.

ಶಾಮನೂರು ಶಿವಶಂಕರಪ್ಪ ಅವರು ತಮ್ಮ ಹೇಳಿಕೆಗೆ ಗಟ್ಟಿಯಾಗಿ ನಿಂತಿದ್ದನ್ನು ಕಂಡು ಅನೇಕರು ಅಕ್ಷರಶಃ ದಂಗಾಗಿ ಹೋದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಹ ಸಮಾಜದ ವಿಷಯವಾಗಿ ಶಾಮನೂರು ಶಿವಶಂಕರಪ್ಪ ಅವರ ನಿರ್ಧಾರ, ನಿರ್ಣಯಕ್ಕೆ ಬೆಂಬಲ ಇದೆ ಎಂದು ಸಹಕರಿಸಿದ್ದರು. ನಂತರದ ದಿನಗಳಲ್ಲಿ ಲಿಂಗಾಯತ ಸ್ವಾಮೀಜಿಗಳು ಅಂದಿನ ಸಿಎಂ ಸಿದ್ದರಾಮಯ್ಯ ಅವರನ್ನು ‘ಸಮಾಜ ಒಡೆಯಲು ಯತ್ನಿಸಿದ ಖಳನಾಯಕ’ ಎಂದು ಹೇಳುತ್ತಿದ್ದರು. ಈಗ ಮತ್ತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯು ಹತ್ತಿರಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿಯೇ ಮಹಾಸಭಾ ಆಯೋಜಿಸಿರುವ ಮೂರು ದಿನಗಳ ಅಧಿವೇಶನಕ್ಕೆ ವಿಶೇಷ ಮಹತ್ವ ಬಂದಿದೆ.

ಉಪಪಂಗಡಗಳು ಹೋಗಬೇಕು: ಶಾಮನೂರು

ಅಧಿವೇಶನ ಕುರಿತು ‘ಟಿವಿ9’ಗೆ ಮಾಹಿತಿ ನೀಡಿದ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಘಟಕದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ‘ನಮ್ಮಲ್ಲಿರುವ ಉಪಪಂಗಡಗಳು ಹೋಗಬೇಕು. ನಾವು ಎಲ್ಲರೂ ಒಂದು ಎಂದು ಆಗಬೇಕು. ನಮ್ಮ ಜನಸಂಖ್ಯೆ 2 ಕೋಟಿ ಇದೆ. ಹೆಣ್ಣು-ಗಂಡು ಕೊಡೋದು, ತೆಗೆದುಕೊಳ್ಳೋದು ಮಾಡಬೇಕು. ಸಮುದಾಯದಲ್ಲಿ ಒಗ್ಗಟ್ಟು ಬರುತ್ತದೆ’ ಎಂದು ಅಭಿಪ್ರಾಯಪಟ್ಟರು.

ದಾವಣಗೆರೆ ಜಿಲ್ಲಾ ಘಟಕದ ದೇವರಮನೆ ಶಿವಕುಮಾರ್ ಮಾತನಾಡಿ, ‘ಸಮಾವೇಶದಲ್ಲಿ ಎಲ್ಲ ಸ್ವಾಮೀಜಿಗಳು ಪಾಲ್ಗೊಳ್ಳುತ್ತಾರೆ. ನಮ್ಮ ಸಮಾಜಕ್ಕೆ ಕೇಂದ್ರ ಸರ್ಕಾರದಿಂದ ಒಬಿಸಿ ಸಿಗಬೇಕು. ಕರ್ನಾಟಕ ಸರ್ಕಾರವು ಎಲ್ಲ ವೀರಶೈವ ಲಿಂಗಾಯತ ಉಪ ಪಂಗಡಗಳಿಗೆ ಮೀಸಲಾತಿ ಕೊಡಬೇಕು ಎಂದು ನಿರ್ಣಯಗಳನ್ನು ಸಭೆಯಲ್ಲಿ ಮಂಡಿಸುತ್ತೇವೆ. ಅಧಿವೇಶನದಲ್ಲಿ ಸುಮಾರು ಒಂದು ಲಕ್ಷ ಜನರು ಸೇರುವ ನಿರೀಕ್ಷೆಯಿದೆ’ ಎಂದರು. ‘ದಾವಣಗೆರೆ ಮಹಾ ನಗರದಲ್ಲಿ 10 ಸಾವಿರ ಅಡಿ ಜಾಗ ಇದೆ. ಅಲ್ಲಿ ಮಹಿಳಾ ವಸತಿ ನಿಲಯ ಮಾಡುತ್ತೇವೆ’ ಎಂದು ಘೋಷಿಸಿದರು.

ವರದಿ: ಬಸವರಾಜ್ ದೊಡ್ಮನಿ ಟಿವಿ9 ದಾವಣಗೆರೆ

Published On - 5:55 am, Fri, 18 November 22

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ