AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಶಾಮನೂರು ಶಿವಶಂಕರಪ್ಪರ ಮೆರವಣಿಗೆ ಮೂಲಕ ವೀರಶೈವ ಮಹಾಸಭಾ ಅಧಿವೇಶನಕ್ಕೆ ಚಾಲನೆ

ಶ್ರೀ ರೇಣುಕಾ ಮಂದಿರದಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಅಧ್ಯಕ್ಷರನ್ನು ಜಾನಪದ ಕಲಾ ತಂಡಗಳು ಮತ್ತು ಮಂಗಳವಾದ್ಯಗಳೊಂದಿಗೆ ಮೆರೆವಣಿಗೆ ಮೂಲಕ ಎಸ್ ನಿಜಲಿಂಗಪ್ಪ ವೇದಿಕೆಗೆ ಕರೆ ತರಲಾಯಿತು. ಇದೇ ವೇದಿಕೆಯಲ್ಲಿ ಕೆಲವು ಮುಖ್ಯ ನಿರ್ಣಯಗಳ ಮಂಡನೆ ಮಾಡಲಾಗುತ್ತದೆ.

ದಾವಣಗೆರೆ: ಶಾಮನೂರು ಶಿವಶಂಕರಪ್ಪರ ಮೆರವಣಿಗೆ ಮೂಲಕ ವೀರಶೈವ ಮಹಾಸಭಾ ಅಧಿವೇಶನಕ್ಕೆ ಚಾಲನೆ
ಶಾಮನೂರು ಶಿವಶಂಕರಪ್ಪರ ಮೆರವಣಿಗೆ ಮೂಲಕ ವೀರಶೈವ ಮಹಾಸಭಾ ಅಧಿವೇಶನಕ್ಕೆ ಚಾಲನೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಆಯೇಷಾ ಬಾನು|

Updated on: Dec 23, 2023 | 1:14 PM

Share

ದಾವಣಗೆರೆ, ಡಿ.23: ವೀರಶೈವ ಮಹಾಸಭಾದ 24ನೇ ಮಹಾ ಅಧಿವೇಶನಕ್ಕೆ (VeeraShaiva Mahasabha Adhiveshana) ದಾವಣಗೆರೆ (Davanagere) ನಗರದ ರೇಣುಕಾಮಂದಿರದಲ್ಲಿ ಚಾಲನೆ ನೀಡಲಾಯಿತು. ನಗರದ ರೇಣುಕಾಮಂದಿರದಿಂದ ಪ್ರಮುಖ ಬೀದಿಗಳಲ್ಲಿ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರನ್ನು ಮೆರವಣಿಗೆ ಮಾಡುವ ಮೂಲಕ ಮಹಾ ಆಧಿವೇಶಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ದಾವಣಗೆರೆಯ ಎಂಬಿಎ ಕಾಲೇಜ್ ಮೈದಾನದಲ್ಲಿಇಂದಿನಿಂದ ಎರಡು ದಿನಗಳ ಕಾಲ ಮಹಾ ಅಧಿವೇಶ ನಡೆಯಲಿದೆ. ಕೆಲವು ನಿರ್ಣಯಗಳನ್ನು ಸಹ ಈ ಅಧಿವೇಶನದಲ್ಲಿ ಮಂಡನೆ ಮಾಡಲಾಗುತ್ತೆ.

ಶ್ರೀ ರೇಣುಕಾ ಮಂದಿರದಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಅಧ್ಯಕ್ಷರನ್ನು ಜಾನಪದ ಕಲಾ ತಂಡಗಳು ಮತ್ತು ಮಂಗಳವಾದ್ಯಗಳೊಂದಿಗೆ ಮೆರೆವಣಿಗೆ ಮೂಲಕ ಎಸ್ ನಿಜಲಿಂಗಪ್ಪ ವೇದಿಕೆಗೆ ಕರೆ ತರಲಾಯಿತು. ಇದೇ ವೇದಿಕೆಯಲ್ಲಿ ಕೆಲವು ಮುಖ್ಯ ನಿರ್ಣಯಗಳ ಮಂಡನೆ ಮಾಡಲಾಗುತ್ತದೆ. ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಈ ಅಧಿವೇಶನಕ್ಕೆ ಆಗಮಿಸಿದ್ದಾರೆ. ಬಂದವರಿಗೆ ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಎರಡು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಒಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ನಿಜಲಿಂಗಪ್ಪ ವೇದಿಕೆ ಇನ್ನೂಂದು ಜೆ ಹೆಚ್ ಪಟೇಲ್ ವೇದಿಕೆ ಮಾಡಲಾಗಿದೆ. ಕೃಷಿ ಮತ್ತು ಕೈಗಾರಿಕೆ ಅಧಿವೇಶನ, ಶೈಕ್ಷಣಿಕ ಅಧಿವೇಶನ, ಧಾರ್ಮಿಕ ಅಧಿವೇಶನ, ಮಹಿಳಾ ಮತ್ತ ಯುವ ಅಧಿವೇಶನ, ನೌಕರರು, ಸಾಹಿತಿಗಳ ಅಧಿವೇಶ ಕಾರ್ಯಕ್ರಮ ಜರಗುತ್ತದೆ. ಒಂದೂವರೆ ಲಕ್ಷ ಜನರಿಗೆ ಊಟ ವ್ಯವಸ್ಥೆ ಮಾಡಲಾಗಿದೆ. ರಾಜ್ಯಸ ವಿವಿಧ ಮಠದ ವೀರಶೈವ ಲಿಂಗಾಯತ ಹರಚರ ಮೂರ್ತಿ ಸ್ವಾಮೀಜಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದಾರೆ.

ಇದನ್ನೂ ಓದಿ:  ದಾವಣಗೆರೆಯಲ್ಲಿ ವೀರಶೈವ ಸಮಾವೇಶಕ್ಕೂ ಮುನ್ನ ಮಹಾಸಭಾದಲ್ಲಿ ಬಣಗಳಾಗುತ್ತಾ? ಎಂಬಿ ಪಾಟೀಲ್ ಹೇಳಿದ್ದೇನು?

ವೀರಶೈವ ಮಹಾ ಅಧಿವೇಶದಲ್ಲಿ ಗಮನ ಸೆಳೆದ ಬೆಣ್ಣೆ ದೋಸೆ ಉತ್ಸವ

ಇನ್ನು ವೀರಶೈವ ಮಹಾ ಅಧಿವೇಶದಲ್ಲಿ ಬೆಣ್ಣೆ ದೋಸೆ ಉತ್ಸವ ಗಮನ ಸೆಳೆದಿದೆ. ಈ ಉತ್ಸವ ಇಂದು, ನಾಳೆ, ನಾಡಿದ್ದು ಮೂರು ದಿನಗಳ ಕಾಲ ನಡೆಯಲಿದೆ. 1924ರಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬೀದ್ರೆ ಗ್ರಾಮದ ಚನ್ನಮ್ಮ ಎಂಬ ಮಹಿಳೆ ಈ ಬೆಣ್ಣೆ ದೋಸೆಯನ್ನು ಆರಂಭ ಮಾಡಿದ್ದರು. ಈಗ ಶತಮಾನದತ್ತ ದಾವಣಗೆರೆ ಬೆಣ್ಣೆದೋಸೆ ಕಾಲಿಡುತ್ತಿದೆ . ದಾವಣಗೆರೆ ಎಂಬಿ ಕಾಲೇಜ್ ಹಾಗೂ ಗಾಜಿನ ಮನೆ ಆವರಣದಲ್ಲಿ ಬೆಣ್ಣೆ ದೋಸೆ ಉತ್ಸವ ಆರಂಭವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ