ಡಿ. 23, 24ರಂದು ವೀರಶೈವ ಮಹಾಸಭೆಯ ಮಹಾಅಧಿವೇಶನ: ಸಚಿವ ಈಶ್ವರ ಖಂಡ್ರೆ

ದಾವಣಗೆರೆ ನಗರದ ಬಾಪೂಜಿ ಎಂಬಿಎ ಕಾಲೇಜಿನಲ್ಲಿ ಇಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಪೂರ್ವಭಾವಿ ಸಭೆ ನಡೆಯಿತು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೀರಶೈವ ಮಹಾಸಭಾ ಪ್ರಧಾನ‌ ಕಾರ್ಯದರ್ಶಿ ಈಶ್ವರ ಖಂಡ್ರೆ ಡಿಸೆಂಬರ್ 23, 24ರಂದು 24ನೇ ವೀರಶೈವ ಮಹಾಸಭೆಯ ಮಹಾಅಧಿವೇಶನ ನಡೆಯಲಿದೆ ಎಂದು ತಿಳಿಸಿದ್ದಾರೆ.

ಡಿ. 23, 24ರಂದು ವೀರಶೈವ ಮಹಾಸಭೆಯ ಮಹಾಅಧಿವೇಶನ: ಸಚಿವ ಈಶ್ವರ ಖಂಡ್ರೆ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಪೂರ್ವಭಾವಿ ಸಭೆ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on:Oct 06, 2023 | 4:28 PM

ದಾವಣಗೆರೆ, ಅಕ್ಟೋಬರ್​​ 06: ಡಿಸೆಂಬರ್ 23, 24ರಂದು 24ನೇ ವೀರಶೈವ ಮಹಾಸಭೆಯ ಮಹಾಅಧಿವೇಶನ ನಡೆಯಲಿದೆ ಎಂದು ವೀರಶೈವ ಮಹಾಸಭಾ ಪ್ರಧಾನ‌ ಕಾರ್ಯದರ್ಶಿ ಈಶ್ವರ ಖಂಡ್ರೆ (eshwar Khandre) ಹೇಳಿದ್ದಾರೆ. ನಗರದ ಬಾಪೂಜಿ ಎಂಬಿಎ ಕಾಲೇಜಿನಲ್ಲಿ ಇಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಪೂರ್ವಭಾವಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಅಧಿವೇಶನ ಎಲ್ಲ ಗುರು-ವಿರಕ್ತರನ್ನು ಒಗ್ಗೂಡಿಸಲು ವೇದಿಕೆ ಆಗಲಿದೆ. ಇದಕ್ಕಾಗಿ‌ ಕೆಲ ಸಮಿತಿ ರಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಕೊರೊನಾ ಹಾಗೂ ಚುನಾವಣೆ ಹಿನ್ನೆಲೆ ಮುಂದೂಡಲಾಗಿತ್ತು. ಪ್ರತಿ 5 ವರ್ಷಕ್ಕೊಮ್ಮೆ ಮಹಾಸಭೆಯ ಮಹಾಅಧಿವೇಶನ ನಡೆಯುತ್ತದೆ. ರೈತರು, ಮಹಿಳಾ ಗೋಷ್ಠಿ ಹಾಗೂ ವೀರಶೈವ ಪರಂಪರೆಯ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ: ಈ ಸಂಬಂಧ ನಾನು ನೀಡಿರುವ ಹೇಳಿಕೆಗೆ ಬದ್ಧ: ಶಾಸಕ ಶಾಮನೂರು

ಜಗತ್ತಿನಲ್ಲಿ ಎಲ್ಲಿಯೇ ಇರುವ ವೀರಶೈವರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಸತ್ತೂರು ಹಾಗೂ ತುಮಕೂರ ಶ್ರೀಗಳು ನೂರಾರು ಜನ‌ ಮಹಾ ಅಧಿವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಹೇಳಿಕೆ ನೀಡಲು ನಿರಾಕರಿಸಿ ಶಾಸಕ ಶಾಮನೂರು ಶಿವಶಂಕರಪ್ಪ

ಸುದ್ದಿಗೋಷ್ಠಿಯಲ್ಲಿ ಕೇವಲ ಸಚಿವ ಈಶ್ವರ ಖಂಡ್ರೆ ಮಾತ್ರ ಮಾತನಾಡಿದ್ದು, ಶಾಸಕ ಶಾಮನೂರ ಶಿವಶಂಕರಪ್ಪ ಮೌನಕ್ಕೆ ಶರಣಾಗಿದ್ದರು. ನಂತರ ಶಾಮನೂರ ಅವರ ಹೇಳಿಕೆಗೆ ಮಾಧ್ಯಮ ಪ್ರತಿನಿಧಿಗಳು ಮುಂದಾಗಿದ್ದು, ಆದರೆ ಹೇಳಿಕೆ ನೀಡಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲೇ ತುಂಬಿ ತುಳುಕುತ್ತಿದ್ದಾರೆ ಲಿಂಗಾಯತ ಅಧಿಕಾರಿಗಳು: ಪಟ್ಟಿ ವೈರಲ್

ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗುತ್ತಿದೆ. ಈ ಕುರಿತು‌ ಬೆಂಗಳೂರಿನಲ್ಲಿ‌ ನಡೆದ ಹಾನಗಲ್ ಕುಮಾರಸ್ವಾಮೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹೇಳಿದ್ದೆ. ಆ ಹೇಳಿಕೆಗೆ ನಾನು ಬದ್ದ ಎಂದು ಕಾಂಗ್ರೆಸ್ ಶಾಸಕ ಹಾಗೂ‌ ಅಖಿಲ ಭಾರತ ವೀರಶೈವ ಮಹಾ ಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದೊಂದು ಸರ್ಕಾರ ಬಂದಾಗ ಒಂದೊಂದು‌ ರೀತಿ ಇರುತ್ತದೆ. ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳು ಅನ್ಯಾಯ ಆಗುತ್ತಿರುವುದು ನಿಜ. ಅದೇ ಕಾರಣಕ್ಕೆ ಈ ವಿಚಾರ ಹೊರಗೆ ಬಂದಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:56 pm, Fri, 6 October 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ