Voter ID Scam: ದಾವಣಗೆರೆ ಜಿಲ್ಲೆಯಲ್ಲೂ ಕೆಲ ಮತದಾರರ ಹೆಸರು ಡಿಲೀಟ್ ಆಗಿವೆ: ಡಿಸಿ ಶಿವಾನಂದ ಕಾಪಶಿ

ದಾವಣಗೆರೆ ಜಿಲ್ಲೆಯಲ್ಲೂ ಕೆಲ ಮತದಾರರ ಹೆಸರು ಡಿಲೀಟ್ ಆಗಿವೆ ಎಂದು ದೂರು ಬಂದಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದ್ದಾರೆ

Voter ID Scam: ದಾವಣಗೆರೆ ಜಿಲ್ಲೆಯಲ್ಲೂ ಕೆಲ ಮತದಾರರ ಹೆಸರು ಡಿಲೀಟ್ ಆಗಿವೆ: ಡಿಸಿ  ಶಿವಾನಂದ ಕಾಪಶಿ
ಜಿಲ್ಲಾಧಿಕಾರಿ ಶಿವಾನಂದ ಕಾಪಶಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 26, 2022 | 2:11 PM

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲೂ ಕೆಲ ಮತದಾರರ ಹೆಸರು (Voters) ಡಿಲೀಟ್ ಆಗಿವೆ ಎಂದು ದೂರು ಬಂದಿದೆ, ಮತದಾರರ ಹೆಸರು ಡಿಲೀಟ್ ಆದ​ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಎಲ್​ಒಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ. ಮತದಾರರ ಹೆಸರು ಡಿಲೀಟ್​ ಆಗದ ರೀತಿ ಕ್ರಮ ಕೈಗೊಳ್ಳುತ್ತೇವೆ. ಜಿಲ್ಲೆಯಲ್ಲಿ ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಣೆ ಆರಂಭವಾಗಿದೆ. ಜಿಲ್ಲೆಯಲ್ಲಿ 30 ಸಾವಿರ ಹೊಸ ಮತದಾರರ ಸೇರ್ಪಡೆಯಾಗಿದೆ ಎಂದು ಶಿವಾನಂದ ಕಾಪಶಿ ಸ್ಪಷ್ಟನೆ ನೀಡಿದ್ದಾರೆ.

Voter ID Scam: ಚಿಲುಮೆ ಸಂಸ್ಥೆಯಿಂದ ಬಿಬಿಎಂಪಿ ಅಧಿಕಾರಿಗಳು ಲಕ್ಷಾಂತರ ಹಣ ಪಡೆದಿರುವ ಆರೋಪ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆಯಲ್ಲಿ (Voter ID Scam) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವೋಟರ್ ಐಡಿ ಪರಿಷ್ಕರಣೆಗೆ ಅನುಮತಿ ನೀಡಲು ಬಿಬಿಎಂಪಿ (BBMP) ಅಧಿಕಾರಿಗಳು ಚಿಲುಮೆ ಸಂಸ್ಥೆಯಿಂದ ಲಕ್ಷಾಂತರ ಹಣ ಪಡೆದಿರುವ ಆರೋಪ ಕೇಳಿಬಂದಿದೆ. ಹಣ ಪಾವತಿ ಮಾಡಿದ ಮೇಲೆಯೇ ಬಿಬಿಎಂಪಿ ಅಧಿಕಾರಿಗಳು ಅನುಮತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಚಿಲುಮೆ ಸಂಸ್ಥೆ ಅನುಮತಿ ಪಡೆದು ಮೂರೇ ತಿಂಗಳಲ್ಲಿ ಮತದಾರರ ಸಂಪೂರ್ಣ ಮಾಹಿತಿ ಸಂಗ್ರಹಿಸಿತ್ತು. ಮಾಹಿತಿ ಸಂಗ್ರಹಿಸಲು ಹಲವು ಸಂಘ ಸಂಸ್ಥೆಗಳಿಗೆ ಹಣ ಪಾವತಿ ಮಾಡಿದೆ. ಚಿಲುಮೆ ಸಂಸ್ಥೆ ಬಿಎಂಪಿ ಚುನಾವಣೆ ಬರ್ತಿದೆ ಎಂಬ ಕಾರಣಕ್ಕೆ ಐದು ಸಾವಿರ ಸಿಬ್ಬಂದಿಗಳನ್ನು ಸರ್ವೆಗೆ ನೇಮಿಸಿತ್ತು.

ಬಿಬಿಎಂಪಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಚಿಲುಮೆ ಸಂಸ್ಥೆಗೆ ಐಡಿ ಕಾರ್ಡ್ ಹಂಚಿಕೆ

ಬಿಬಿಎಂಪಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಚಿಲುಮೆ ಸಂಸ್ಥೆಗೆ ಐಡಿ ಕಾರ್ಡ್ ಹಂಚಿಕೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಬಯಲಾಗಿದೆ. ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಚಿಲುಮೆ ಸಂಸ್ಥೆಗೆ ಐಡಿ ಕಾರ್ಡ್ ನೀಡಲು ಒತ್ತಡ ಹಾಕಿದ್ದರು. ಚಿಲುಮೆ ಸಂಸ್ಥೆಯ ಜೊತೆಗೆ ಬಿಬಿಎಂಪಿ ಹಿರಿಯ ಅಧಿಕಾರಿಗಳ ವೈಯಕ್ತಿಕ ವ್ಯವಹಾರದ ಹಿನ್ನೆಲ್ಲೆ ಆರ್​​ಒಗಳ ಮೇಲೆ ಹಿರಿಯ ಅಧಿಕಾರಿಗಳು ಒತ್ತಡ ಹಾಕಿದ್ದರು. ಐಡಿ ಕಾರ್ಡ್ ವಿತರಣೆ ಮಾಡಲು ಆರ್​​ಒಗಳಿಗೆ ಅಧಿಕಾರಿಗಳು ಮೌಖಿಕ ಸೂಚನೆ ನೀಡಿದರು. ಹೀಗಾಗಿ ಆರ್​​​ಒಗಳು ಐಡಿ ಕಾರ್ಡ್ ವಿತರಣೆ ಮಾಡಿದ್ದಾರೆಂದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Published On - 2:07 pm, Sat, 26 November 22

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ