ಪಂಚಮಸಾಲಿ 3ನೇ ಗುರುಪೀಠ ಸ್ಥಾಪನೆಗೆ ನಮ್ಮ ವಿರೋಧವಿಲ್ಲ: ವಚನಾನಂದ ಸ್ವಾಮೀಜಿ

ನಿರಾಣಿ ಅವರು 75 ಸಾವಿರ ಪಂಚಮಸಾಲಿ ಸಮಾಜದವರಿಗೆ ಉದ್ಯೋಗ ನೀಡಿದ್ದಾರೆ. ಅಂದರೆ ಮೂರು ಲಕ್ಷ ಜನ ಅವರ ಹೆಸರು ಹೇಳಿಕೊಂಡು ಊಟ ಮಾಡುತ್ತಿದ್ದಾರೆ. ಹೀಗಾಗಿ ಸಚಿವ ನಿರಾಣಿ ವಿರುದ್ಧ ಆರೋಪ ಸರಿಯಲ್ಲ ಎಂದು ವಚನಾನಂದ ಸ್ವಾಮೀಜಿ ಹೇಳಿದ್ದಾರೆ.

ಪಂಚಮಸಾಲಿ 3ನೇ ಗುರುಪೀಠ ಸ್ಥಾಪನೆಗೆ ನಮ್ಮ ವಿರೋಧವಿಲ್ಲ: ವಚನಾನಂದ ಸ್ವಾಮೀಜಿ
ವಚನಾನಂದ ಸ್ವಾಮೀಜಿ
Follow us
TV9 Web
| Updated By: preethi shettigar

Updated on:Jan 23, 2022 | 3:43 PM

ದಾವಣಗೆರೆ: ಪಂಚಮಸಾಲಿ ಸಮಾಜಕ್ಕೆ(Panchamasali community) ಮೂರನೇ ಗುರುಪೀಠ ಸ್ಥಾಪನೆಗೆ ನಮ್ಮ ಕಡೆಯಿಂದ ಯಾವುದೇ ವಿರೋಧವಿಲ್ಲ. ಮೂರನೇ ಪೀಠದ ಸ್ಥಾಪನೆಯಿಂದ ನಮ್ಮ ಮಠಕ್ಕೆ ಭಕ್ತರ ಸಂಖ್ಯೆ ಕೂಡ ಕಡಿಮೆ ಆಗುತ್ತದೆ ಎಂಬ ಭಯ ನಮಗಿಲ್ಲ ಎಂದು ಪರೋಕ್ಷವಾಗಿ ಜಯಮೃತ್ಯುಂಜಯ ಸ್ವಾಮೀಜಿ (jaya mruthyunjaya swamiji) ವಿರುದ್ಧ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಪಂಚಮಸಾಲಿ ಸಮಾಜದ ಜನ ಹೆಚ್ಚಾಗಿದ್ದಾರೆ. ಇಲ್ಲಿ ಪಂಚಮಸಾಲಿ ಸ್ವಾಮೀಜಿಗಳು ಸೇರಿ ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟ ರಚನೆ ಮಾಡಿಕೊಂಡಿದ್ದಾರೆ. ಬಬಲೇಶ್ವರದ ಮಹಾದೇವ ಶಿವಾಚಾರ್ಯ ಸ್ವಾಮೀಜಿ ಇದರ ನೇತೃತ್ವ ವಹಿಸಿದ್ದಾರೆ ಎಂದು ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.

ಇತ್ತೀಚಿಗೆ ಬಬಲೇಶ್ವರದ ಮಹಾದೇವ ಶಿವಾಚಾರ್ಯ ಸ್ವಾಮೀಜಿಗಳು ತಮ್ಮ ಹರಿಹರ ಮಠಕ್ಕೂ ಭೇಟಿ ನೀಡಿ ನಮ್ಮ ಜೊತೆ ಮಾತಾಡಿದ್ದಾರೆ. ಇನ್ನು ಮಠಗಳು ಸಚಿವ ನಿರಾಣಿ ಬಳಸಿಕೊಂಡಿವೆ ಎಂಬ ಮಾತು ತಪ್ಪು. ಪಂಚಮಸಾಲಿ ಸಮಾಜಕ್ಕೆ ಸಚಿವ ನಿರಾಣಿ ಅನ್ಯಾಯ ಮಾಡಿಲ್ಲ. ಸಚಿವ ನಿರಾಣಿ ಅವರು ಮೂರನೇ ಪೀಠಕ್ಕೆ ಸ್ಥಾಪನೆಗೆ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅದು ತಪ್ಪು.  ನಿರಾಣಿ ಅವರನ್ನು ಎಲ್ಲ ಮಠಗಳು ಬಳಸಿಕೊಂಡಿವೆ ಎಂದು ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ನಿರಾಣಿ ಅವರು 75 ಸಾವಿರ ಪಂಚಮಸಾಲಿ ಸಮಾಜದವರಿಗೆ ಉದ್ಯೋಗ ನೀಡಿದ್ದಾರೆ. ಅಂದರೆ ಮೂರು ಲಕ್ಷ ಜನ ಅವರ ಹೆಸರು ಹೇಳಿಕೊಂಡು ಊಟ ಮಾಡುತ್ತಿದ್ದಾರೆ. ಹೀಗಾಗಿ  ಸಚಿವ ನಿರಾಣಿ ವಿರುದ್ಧ ಆರೋಪ ಸರಿಯಲ್ಲ ಎಂದು ಪರೋಕ್ಷವಾಗಿ ಪಂಚಮಸಾಲಿ ಸಮಾಜದ ಮುಖಂಡ ವಿಜಯಾನಂದ ಕಾಶಪ್ಪನವರಗೆ ವಚನಾನಂದ ಸ್ವಾಮೀಜಿ ಉತ್ತರಿಸಿದ್ದಾರೆ.

ಪಂಚಮಸಾಲಿ 3ನೇ ಪೀಠವಾದರೆ ತಪ್ಪೇನಲ್ಲ: ಸಚಿವ ಮುರುಗೇಶ್ ನಿರಾಣಿ ಸ್ಪಷ್ಟನೆ

ಪಂಚಮಸಾಲಿ 3ನೇ ಪೀಠವಾದರೆ ತಪ್ಪೇನಲ್ಲ. ನನ್ನಲ್ಲಿ ಎರಡು ಪೀಠಗಳು ಒಂದೇ ಎಂಬ ಭಾವನೆ ಇದೆ. ಮೂರನೇ ಪೀಠದ ಬಗ್ಗೆ ನನಗೆ ಗೊತ್ತಿಲ್ಲ. ಆದರೆ, 3ನೇ ಪೀಠ ಆದರೆ ತಪ್ಪಲ್ಲ, ಪಂಚಮಸಾಲಿ ಸಮಾಜ ದೊಡ್ಡದಿದೆ. ಇದಕ್ಕೆ ನಾವು ಸಹಮತ ವ್ಯಕ್ತಪಡಿಸಬೇಕು. ಸ್ವಾಮೀಜಿಗಳು ಆಪಾದನೆ ಬಿಟ್ಟು ಜವಾಬ್ದಾರಿ ತೆಗೆದುಕೊಳ್ಳಲಿ. ಅವರೇ ಮುಂದೆ ನಿಂತು ಪೀಠ ರಚನೆಯ ಜವಾಬ್ದಾರಿ ತೆಗೆದುಕೊಳ್ಳಬೇಕು. ಪ್ರತಿಷ್ಠೆಗಾಗಿ ಬರೀ ಅಪಾದನೆ ಮಾಡಬಾರದು ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.

ವೀರಶೈವ ಲಿಂಗಾಯತ ಪಂಚಮಸಾಲಿ ಹೆಸರಲ್ಲಿ ಮೂರನೆ ಪೀಠದ ಹಿಂದೆ ಮುರುಗೇಶ್ ನಿರಾಣಿ ಕೈವಾಡವಿದೆ ಎಂಬ ಕಾಶಪ್ಪನವರ್ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಬಾಗಲಕೋಟೆಯಲ್ಲಿ ಸಚಿವ‌ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಮಾಜಕ್ಕಾಗಿ ನಿರಾಣಿ ಕುಟುಂಬ ಏನು ಮಾಡಿದೆ ಅನ್ನೋದು ರಾಜ್ಯದ ಜನತೆಗೆ ಗೊತ್ತಿದೆ. ನನ್ನಲ್ಲಿ ಎರಡು ಪೀಠಗಳು ಒಂದೇ ಎಂಬ ಭಾವನೆ ಇದೆ. ಮೂರನೇ ಪೀಠದ ಬಗ್ಗೆ ನನಗೆ ಗೊತ್ತಿಲ್ಲ. ಆದರೆ, ಮೂರನೇ ಪೀಠ ಆದ್ರೆ ತಪ್ಪಲ್ಲ, ಸಮಾಜ ದೊಡ್ಡದಿದೆ. ಇದಕ್ಕೆ ನಾವು ಸಹಮತ ವ್ಯಕ್ತಪಡಿಸಬೇಕು. ಸ್ವಾಮೀಜಿಗಳು ಆಪಾದನೆ ಬಿಟ್ಟು ಅವರೇ ಮುಂದೆ ನಿಂತು ಪೀಠ ರಚನೆಯ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಪಂಚಮಸಾಲಿ 3ನೇ ಪೀಠದ ವಿಚಾರದಲ್ಲಿ ಆರೋಪ ಪ್ರತ್ಯಾರೋಪ ವಿಚಾರವಾಗಿ ಬಾಗಲಕೋಟೆಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಮುರುಗೇಶ್ ನಿರಾಣಿ, 3ನೇ ಪೀಠಕ್ಕೂ ನನಗೂ ಸಂಬಂಧ ಇಲ್ಲ. ಪಂಚಮಸಾಲಿ 3ನೇ ಪೀಠ ಆದರೆ ಅವರು ಏನಾದರೂ ಸಹಾಯ ಸಹಕಾರ ಕೇಳಿದರೆ ಆಗ ನನ್ನ ಅಳಿಲು ಸೇವೆ ಮಾಡಲು ಸಿದ್ದನಿದ್ದೇನೆ. ನಾನು ಸಿಎಂ ಸ್ಥಾನದ ಕನಸು ಕಂಡಿಲ್ಲ. ನಮ್ಮ ಪಕ್ಷ ಏನು ಜವಾಬ್ದಾರಿ ಕೊಡುತ್ತದೋ ಅದನ್ನು ಮಾಡುತ್ತೇನೆ. ಯಾರೋ ತಾವೇ ಕಲ್ಪನೆ ಮಾಡಿಕೊಂಡು ನನ್ನ ಬಗ್ಗೆ ಏನೇನೋ ಹೇಳಬಾರದು. ಟಿವಿಯಲ್ಲಿ, ಪತ್ರಿಕೆಯಲ್ಲಿ ಬರಲು ನನ್ನ ಮೇಲೆ ಆಪಾದನೆ ಮಾಡಬಾರದು. ಪಂಚಮಸಾಲಿ ಸಮಾಜವನ್ನು ಒಡೆಯುವ ಕೆಲಸಕ್ಕೆ ನನಗೆ ಸಮಯವಿಲ್ಲ. ಸಮಾಜ ಒಡೆಯುವ ಹುನ್ನಾರ ಮಾಡಿದವರು ಯಾರೆಂದು ನಿಮಗೆ ಗೊತ್ತು ಎಂದಿದ್ದಾರೆ.

ನಾನು ವಿಜಯಪುರ, ಬಾಗಲಕೋಟೆ ಜಿಲ್ಲೆಯ ನೀರು ಕುಡಿದಿದ್ದೇನೆ. ಬೇರೆ ಬೇರೆಯವರು ಏನು ಮಾತಾಡ್ತಿದ್ದಾರೆ ಎಂಬುದು ನನಗೆ ಗೊತ್ತಿದೆ. ನಾನು ಸುಮ್ಮನಿರುತ್ತೇನೆ ಎಂದರೆ ಅದು ನನ್ನ ಅಸಮರ್ಥತೆ ಅಲ್ಲ. ಟೀಕೆ, ಟಿಪ್ಪಣಿಗಳಿದ್ದರೆ ಹೇಳಲಿ. ನಾನು ನನ್ನ ತಪ್ಪು ತಿದ್ದಿಕೊಳ್ಳುತ್ತೇನೆ ಎಂದು ಬಾಗಲಕೋಟೆಯಲ್ಲಿ ಮುರಗೇಶ್ ನಿರಾಣಿ ಆಕ್ರೋಶ ಹೊರಹಾಕಿದ್ದಾರೆ.

ಪಂಚಮಸಾಲಿ ಮೂರನೇ ಪೀಠದ ಬಗ್ಗೆ ಸಮಾಜದ ಜನ ತೀರ್ಮಾನಿಸಿದ್ದಾರೆ. ಮೂರನೇ ಪೀಠದ ಬಗ್ಗೆ ತೀರ್ಮಾನಿಸಿಲ್ಲ. ನಾನು ಯಾವತ್ತಾದ್ರೂ ಸಿಎಂ ಆಗ್ತೀನಿ ಅಂತ ಹೇಳಿದ್ದೀನಾ? ತಾವೇ ಕಲ್ಪನೆ ಮಾಡಿಕೊಂಡು ಮಾತನಾಡ್ತಿದ್ದಾರೆ. ಸಮಯ ನಿಗದಿ ಮಾಡಿದರೆ ನಾನೇ ಶ್ರೀಗಳನ್ನು ಭೇಟಿಯಾಗ್ತೇನೆ ಎಂದು ಬಾಗಲಕೋಟೆಯಲ್ಲಿ ಸಚಿವ‌ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಇದನ್ನೂ ಓದಿ: Siddaganga Mutt: ನಾಳೆ ಶಿವಕುಮಾರ ಸ್ವಾಮೀಜಿ 3ನೇ ವರ್ಷದ ಪುಣ್ಯಸ್ಮರಣೆ: ಸರಳ ಆಚರಣೆಗೆ ಸಿದ್ದಗಂಗೆ ಮಠ ನಿರ್ಧಾರ

ಪಂಚಮಸಾಲಿ ಮೀಸಲಾತಿ: ಸರ್ಕಾರಕ್ಕೆ ಲೈಫ್​ಲೈನ್ ನೀಡಿದ್ದೇವೆ ಎಂದ ವಚನಾನಂದ ಸ್ವಾಮೀಜಿ

Published On - 2:49 pm, Sun, 23 January 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ