AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಸಾವು

Contaminated Water: ಕಲುಷಿತ ನೀರು ಸೇವಿಸಿ ವಾಂತಿ, ಭೇದಿಯಾದ ಹಿನ್ನೆಲೆ ಆಗಸ್ಟ್​ 21 ರಂದು ಆಸ್ಪಸ್ಥರಾಗಿ ಮೆಗ್ಗನ್ ಆಸ್ಪತ್ರೆಗೆ ದಾಖಲಾಗಿದ್ದ ಚಂದ್ರಮ್ಮ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 7 ಜನರು ಆಸ್ಪತ್ರೆಗೆ ದಾಖಲಾಗಿದ್ದರು.

ದಾವಣಗೆರೆ: ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಸಾವು
ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಸಾವು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ಆಯೇಷಾ ಬಾನು|

Updated on: Aug 25, 2024 | 10:45 AM

Share

ದಾವಣಗೆರೆ, ಆಗಸ್ಟ್​.25: ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಂದ್ರಮ್ಮ(60) ಶಿವಮೊಗ್ಗದ ಮೆಗ್ಗಾನ್​​ ಆಸ್ಪತ್ರೆಯಲ್ಲಿ (Shimoga McGANN Hospital) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟ ಗ್ರಾಮದಲ್ಲಿ ಕಲುಷಿತ ನೀರು (Contaminated Water) ಕುಡಿದು ಗ್ರಾಮದ 7 ಜನರು ಆಸ್ಪತ್ರೆಗೆ ದಾಖಲಾಗಿದ್ದರು. 7 ಜನರಲ್ಲಿ ಚಂದ್ರಮ್ಮ (60) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಆಗಸ್ಟ್​ 21 ರಂದು ಆಸ್ಪಸ್ಥರಾಗಿ ಮೆಗ್ಗನ್ ಆಸ್ಪತ್ರೆಗೆ ಚಂದ್ರಮ್ಮ ದಾಖಲಾಗಿದ್ದರು. ವಾಂತಿ ಬೇಧಿ, ಜ್ವರದಿಂದ ಬಳಲುತ್ತಿದ್ದ ಚಂದ್ರಮ್ಮ ಅವರು ಇಂದು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ. ಇನ್ನುಳಿದ ಆರು ಜನರು ಚಿಕಿತ್ಸೆ ಪಡೆದು ಮನೆಗೆ ವಾಪಾಸ್ಸಾಗಿದ್ದಾರೆ. ಕುಡಿಯುವ ನೀರಿನ ಪೈಪ್ ಹೊಡೆದು ಚರಂಡಿ ನೀರು ಮಿಶ್ರಣವಾದ ಹಿನ್ನಲೆ ನೀರು ಕಲುಷಿತಗೊಂಡಿತ್ತು. ಘಟನೆಯಾದ ನಂತರ ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ನೀರು ಕಲುಷಿತಗೊಳ್ಳದಂತೆ ನೋಡಿಕೊಳ್ಳಲು ಜಾಗೃತಿ ಮೂಡಿಸಿದ್ದರು.

ಇದನ್ನೂ ಓದಿ: ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ

ಕಲುಷಿತ ನೀರು ಸೇವನೆ 15 ಕ್ಕೂ ಅಧಿಕ ಜನರಿಗೆ ವಾಂತಿ, ಭೇದಿ

ಇನ್ನು ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಉಬ್ಬಲಗಂಡಿ ಗ್ರಾಮದಲ್ಲಿ ನೀರು ಸೇವನೆ ಬಳಿಕ‌ 15ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ವಾಂತಿ, ಭೇದಿ ಪ್ರಕರಣಗಳು ಹೆಚ್ಚುತ್ತಲೇ ಇವೆ. ಘಟನಾ ಸ್ಥಳಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಂತಿ, ಭೇದಿ ಕಾಣಿಸಿಕೊಂಡ ಗ್ರಾಮಸ್ಥರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಬಲಗಂಡಿ ಗ್ರಾಮದ ಆರೋಗ್ಯ ಕೇಂದ್ರದಲ್ಲೂ ಚಿಕಿತ್ಸೆ ಮುಂದುವರೆದಿದೆ. ಯಾವುದೇ ರೀತಿ ಪ್ರಾಣಾಪಾಯ ಸಂಭವಿಸಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!