ಇಲಿ ಜ್ವರ ದೃಢ: ಆಸ್ಪತ್ರೆಗೆ ಮಹಿಳೆ ದಾಖಲು

ವೈದ್ಯರ ತಂಡ ಮಹಿಳೆಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಟುಂಬ ಸದಸ್ಯರಿಗೆ ಇಲಿ ಜ್ವರದ ಲಕ್ಷಣ ಕಂಡುಬಂದಿಲ್ಲ.

  • TV9 Web Team
  • Published On - 14:45 PM, 26 Jan 2021
ಇಲಿ ಜ್ವರ ದೃಢ: ಆಸ್ಪತ್ರೆಗೆ ಮಹಿಳೆ ದಾಖಲು
ಸಾಂದರ್ಭಿಕ ಚಿತ್ರ

ದಾವಣಗೆರೆ: ಜಿಲ್ಲೆಯ ನ್ಯಾಮತಿ ಪಟ್ಟಣದ 48 ವರ್ಷದ ಮಹಿಳೆಯೊಬ್ಬರಿಗೆ ಇಲಿ ಜ್ವರ ದೃಢವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ನೇತ್ರತ್ವದ ವೈದ್ಯರ ತಂಡ ಮಹಿಳೆಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಟುಂಬದ ಇತರ ಸದಸ್ಯರಲ್ಲಿ ಇಲಿ ಜ್ವರದ ಲಕ್ಷಣ ಕಂಡುಬಂದಿಲ್ಲ. ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಆರೋಗ್ಯದಲ್ಲಿ ಚೇತರಿಕೆ ಕಂಡಿರುವ ಬಗ್ಗೆ ಸದ್ಯ ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ.

ಕೊಪ್ಪಳ: ಕೊರೊನಾ ಮಧ್ಯೆ ಇಲಿ ಜ್ವರ ಸಂಕಷ್ಟ, 6 ಮಂದಿಗೆ ಜ್ವರ

ಹೊತ್ತು ಗೊತ್ತಿಲ್ಲದೆ ನಿದ್ದೆ ಮಾಡುವುದು ಒಳ್ಳೆಯದಲ್ಲ; ಮಲಗುವ ವಿಧಾನವನ್ನು ಹೀಗೆ ರೂಪಿಸಿಕೊಳ್ಳಿ