AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ ಸೀರೆಗಳಿಗೆ ಬೆಂಕಿ ಇಟ್ಟ ಮಹಿಳೆಯರು

ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ ಸೀರೆಗಳಿಗೆ ಬೆಂಕಿ ಇಟ್ಟು ದಾವಣಗೆರೆ ದಕ್ಷಿಣ ಕ್ಷೇತ್ರದ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ ಸೀರೆಗಳಿಗೆ ಬೆಂಕಿ ಇಟ್ಟ ಮಹಿಳೆಯರು
ಸೀರೆ ಸುಟ್ಟು ಮಹಿಳೆಯರು
ಆಯೇಷಾ ಬಾನು
|

Updated on:Mar 30, 2023 | 11:42 AM

Share

ದಾವಣಗೆರೆ: ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ(Karnataka Assembly Elections 2023) ರಾಜಕೀಯ ನಾಯಕರು ಮತ್ತಷ್ಟು ಅಲರ್ಟ್ ಆಗಿದ್ದಾರೆ. ಇರುವ ಕಡಿಮೆ ಸಮಯದಲ್ಲೇ ಮತದಾರರ ಮನಸ್ಸು ಗೆಲ್ಲಬೇಕೆಂದು ಸರ್ಕಸ್(Sarees) ಮಾಡುತ್ತಿದ್ದಾರೆ. ಮತ್ತೊಂದೆಡೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು ಯಾವುದನ್ನೂ ಲೆಕ್ಕಿಸದೆ ಗಿಫ್ಟ್ ಪಾಲಿಟಿಕ್ಸ್ ಮುಂದುವರೆದಿದೆ. ಆದ್ರೆ ಶಾಸಕ ಶಾಮನೂರು ಶಿವಶಂಕರಪ್ಪ(Shamanur Shivashankarappa) ನೀಡಿದ ಸೀರೆಗಳಿಗೆ ಬೆಂಕಿ ಇಟ್ಟು ದಾವಣಗೆರೆ ದಕ್ಷಿಣ ಕ್ಷೇತ್ರದ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ನಿಮ್ಮ 60 ರೂಪಾಯಿ ಸೀರೆ ಉಟ್ಟುಕೊಳ್ಳುವಷ್ಟು ನಿರ್ಗತಿಕರಲ್ಲ ಎಂದು ರಸ್ತೆಯಲ್ಲಿ ಸೀರೆಗಳಿಗೆ ಬೆಂಕಿ ಇಟ್ಟು ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಶಾಸಕ ಎಸ್ ಎಸ್ ಮಲ್ಲಿಕಾರ್ಜುನ ಭಾವಚಿತ್ರ ವಿರುವ ಬ್ಯಾಗ್ ನಲ್ಲಿ ಸೀರೆಗಳನ್ನು ಹಂಚಲಾಗಿತ್ತು.

ದಾವಣಗೆರೆ ದಕ್ಷಿಣ ಹಾಗೂ ಉತ್ತರ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಸೀರೆ ಹಂಚಿ ಮತ ಹಾಕುವಂತೆ ಓಲೈಸಲಾಗಿತ್ತು. ಆದ್ರೆ ಕೆಲ ಮಹಿಳೆಯರು ರಸ್ತೆಯಲ್ಲಿ ಸೀರೆ ಸುಟ್ಟು ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಅಭಿವೃದ್ಧಿ ಮಾಡಿಲ್ಲ ಈಗ ಸೀರೆ ಹಂಚುತ್ತಿದ್ದಾರೆ ಎಂದು ಗರಂ ಆಗಿದ್ದಾರೆ. ಇನ್ನು ಮತ್ತೊಂದೆಡೆ ಶಾಸಕರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಇದನ್ನೂ ಓದಿ: ಜೆಡಿಎಸ್‌ ಎಂಎಲ್​ಎಗೆ ಬಿಗ್ ಶಾಕ್: ಗೌರಿಶಂಕರ್ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್‌ ಆದೇಶ

ಶಾಸಕ ಶಾಮನೂರು ಶಿವಶಂಕರಪ್ಪ, ಪುತ್ರ ಮಲ್ಲಿಕಾರ್ಜುನ್ ವಿರುದ್ಧ FIR

ಇನ್ನು ಮತ್ತೊಂದೆಡೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಅವರ ಪ್ರತ್ರ, ದಾವಣಗೆರೆ ಉತ್ತರ ಕ್ಷೇತ್ರದ ಮಾಜಿ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಎಫ್​​ಐಆರ್​ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ಕೆಟಿಜೆ ನಗರದ ಠಾಣೆಯಲ್ಲಿ FIR ದಾಖಲಾಗಿದೆ.

ಎಸ್​.ಎಸ್ & SSM ಅಭಿಮಾನಿ ಬಳಗದ ಹೆಸರಿನಲ್ಲಿ ಜನರಿಗೆ ಗಿಫ್ಟ್​ ಹಂಚಿಕೆ ಮಾಡಲಾಗುತ್ತಿತ್ತು. ದಾಳಿ ನಡೆಸಿ 7.19 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದಾವಣಗೆರೆಯಲ್ಲಿ FIR​​​ ದಾಖಲಾಗಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಮಾಹಿತಿ ನೀಡಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:39 am, Thu, 30 March 23

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ