ದಾವಣಗೆರೆ: ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ(Karnataka Assembly Elections 2023) ರಾಜಕೀಯ ನಾಯಕರು ಮತ್ತಷ್ಟು ಅಲರ್ಟ್ ಆಗಿದ್ದಾರೆ. ಇರುವ ಕಡಿಮೆ ಸಮಯದಲ್ಲೇ ಮತದಾರರ ಮನಸ್ಸು ಗೆಲ್ಲಬೇಕೆಂದು ಸರ್ಕಸ್(Sarees) ಮಾಡುತ್ತಿದ್ದಾರೆ. ಮತ್ತೊಂದೆಡೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು ಯಾವುದನ್ನೂ ಲೆಕ್ಕಿಸದೆ ಗಿಫ್ಟ್ ಪಾಲಿಟಿಕ್ಸ್ ಮುಂದುವರೆದಿದೆ. ಆದ್ರೆ ಶಾಸಕ ಶಾಮನೂರು ಶಿವಶಂಕರಪ್ಪ(Shamanur Shivashankarappa) ನೀಡಿದ ಸೀರೆಗಳಿಗೆ ಬೆಂಕಿ ಇಟ್ಟು ದಾವಣಗೆರೆ ದಕ್ಷಿಣ ಕ್ಷೇತ್ರದ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ನಿಮ್ಮ 60 ರೂಪಾಯಿ ಸೀರೆ ಉಟ್ಟುಕೊಳ್ಳುವಷ್ಟು ನಿರ್ಗತಿಕರಲ್ಲ ಎಂದು ರಸ್ತೆಯಲ್ಲಿ ಸೀರೆಗಳಿಗೆ ಬೆಂಕಿ ಇಟ್ಟು ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಶಾಸಕ ಎಸ್ ಎಸ್ ಮಲ್ಲಿಕಾರ್ಜುನ ಭಾವಚಿತ್ರ ವಿರುವ ಬ್ಯಾಗ್ ನಲ್ಲಿ ಸೀರೆಗಳನ್ನು ಹಂಚಲಾಗಿತ್ತು.
ದಾವಣಗೆರೆ ದಕ್ಷಿಣ ಹಾಗೂ ಉತ್ತರ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಸೀರೆ ಹಂಚಿ ಮತ ಹಾಕುವಂತೆ ಓಲೈಸಲಾಗಿತ್ತು. ಆದ್ರೆ ಕೆಲ ಮಹಿಳೆಯರು ರಸ್ತೆಯಲ್ಲಿ ಸೀರೆ ಸುಟ್ಟು ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಅಭಿವೃದ್ಧಿ ಮಾಡಿಲ್ಲ ಈಗ ಸೀರೆ ಹಂಚುತ್ತಿದ್ದಾರೆ ಎಂದು ಗರಂ ಆಗಿದ್ದಾರೆ. ಇನ್ನು ಮತ್ತೊಂದೆಡೆ ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ: ಜೆಡಿಎಸ್ ಎಂಎಲ್ಎಗೆ ಬಿಗ್ ಶಾಕ್: ಗೌರಿಶಂಕರ್ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ
ಇನ್ನು ಮತ್ತೊಂದೆಡೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಅವರ ಪ್ರತ್ರ, ದಾವಣಗೆರೆ ಉತ್ತರ ಕ್ಷೇತ್ರದ ಮಾಜಿ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ಕೆಟಿಜೆ ನಗರದ ಠಾಣೆಯಲ್ಲಿ FIR ದಾಖಲಾಗಿದೆ.
ಎಸ್.ಎಸ್ & SSM ಅಭಿಮಾನಿ ಬಳಗದ ಹೆಸರಿನಲ್ಲಿ ಜನರಿಗೆ ಗಿಫ್ಟ್ ಹಂಚಿಕೆ ಮಾಡಲಾಗುತ್ತಿತ್ತು. ದಾಳಿ ನಡೆಸಿ 7.19 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದಾವಣಗೆರೆಯಲ್ಲಿ FIR ದಾಖಲಾಗಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಮಾಹಿತಿ ನೀಡಿದರು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:39 am, Thu, 30 March 23