AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ರಾಜ್ಯಾದ್ಯಂತ ಯಾತ್ರೆ ಮಾಡುವೆ: ಮಾಜಿ ಸಚಿವ ಶ್ರೀರಾಮುಲು

ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಕರ್ನಾಟಕದಲ್ಲಿ ಬಿಜೆಪಿಯನ್ನು ಬಲಪಡಿಸಲು ಮತ್ತು ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ರಾಜ್ಯಾದ್ಯಂತ ಯಾತ್ರೆ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿಯ ಗೆಲುವಿನ ನಂತರ, ಕರ್ನಾಟಕದಲ್ಲಿಯೂ ಪಕ್ಷಕ್ಕೆ ಬಹುಮತ ಬರುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಬಿಜೆಪಿ ನಾಯಕರು, ಹಿಂದೂ ಮುಖಂಡರು ಮತ್ತು ಕಾರ್ಯಕರ್ತರನ್ನು ಒಗ್ಗೂಡಿಸುವುದಾಗಿ ಹೇಳಿದ್ದಾರೆ.

ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ರಾಜ್ಯಾದ್ಯಂತ ಯಾತ್ರೆ ಮಾಡುವೆ: ಮಾಜಿ ಸಚಿವ ಶ್ರೀರಾಮುಲು
ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ರಾಜ್ಯಾದ್ಯಂತ ಯಾತ್ರೆ ಮಾಡುವೆ: ಮಾಜಿ ಸಚಿವ ಶ್ರೀರಾಮುಲು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Feb 08, 2025 | 7:59 PM

Share

ದಾವಣಗೆರೆ, ಫೆಬ್ರವರಿ 08: ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ಕರ್ನಾಟಕದಾದ್ಯಂತ ಯಾತ್ರೆ ಮಾಡುವೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು (Sriramulu) ಹೇಳಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು, ಹಿಂದೂ ಮುಖಂಡರನ್ನು ಒಗ್ಗೂಡಿಸಲು ಶ್ರಮಿಸುವೆ. ಯಾವುದೋ ಕಾರಣಕ್ಕೆ ನೋವಾಗಿ ಒಡೆದ ಮನಸ್ಸುಗಳ ಒಂದು ಮಾಡುವೆ ಎಂದು ಹೇಳಿದ್ದಾರೆ.

ಸಮಾನ ಮನಸ್ಕರರನ್ನು ಒಂದುಗೂಡಿಸಲು ಕೆಲಸ ಮಾಡುವೆ. ಈಗಾಗಲೇ ಎಲ್ಲಾ ಕಡೆ ಕರೆ ಮಾಡಿ ಮಾತನಾಡಿದ್ದೇನೆ, ಯಾತ್ರೆ ಮಾಡುವೆ. ನನ್ನ ಯಾತ್ರೆ ಉದ್ದೇಶದಲ್ಲಿ ಸ್ವಾರ್ಥವಿಲ್ಲ, ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾತ್ರ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಕರೆದರೆ ನಾನು ಹೋಗಿ ಮಾತನಾಡುವೆ ಎಂದಿದ್ದಾರೆ.

ಇದನ್ನೂ ಓದಿ: ದಿಲ್ಲಿ ಚುನಾವಣೆಯಲ್ಲಿ ಬಿಜೆಪಿ ಕಮಾಲ್: ಮೋದಿ, ನಡ್ಡಾಗೆ ಪತ್ರದ ಮೂಲಕ ಅಭಿನಂದನೆ ತಿಳಿಸಿದ ಯಡಿಯೂರಪ್ಪ

ಜನಾರ್ದನರೆಡ್ಡಿ, ಶ್ರೀರಾಮುಲು ಮತ್ತೆ ಒಂದಾಗುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದು, ಈ ಯಾತ್ರೆಯಲ್ಲಿ ಎಲ್ಲರು ಬರುತ್ತಾರೆ. ಒಡೆದ ಮನಸ್ಸುಗಳು ಎಂದರೆ ಎಲ್ಲಾರೂ ಸೇರುತ್ತೇ‌ವೆ ಎನ್ನುವ ಮೂಲಕ ರೆಡ್ಡಿ ಮತ್ತು ಶ್ರೀರಾಮುಲು ಒಗ್ಗಟ್ಟು ಮಂತ್ರದ ಬಗ್ಗೆ ಹೇಳಿದ್ದಾರೆ.

ಇನ್ನು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ವಿಚಾರವಾಗಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಗೆದ್ದಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಬಿಜೆಪಿಗೆ ಬಹುಮತ ಬರುತ್ತದೆ. ಭಾರತೀಯ ಜನತಾ ಪಕ್ಷ ಸಂಘಟಿಸಲು ರಾಜ್ಯಾದ್ಯಂತ ಯಾತ್ರೆ ಮಾಡುವೆ. ದೇಶ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.

ಶೀಘ್ರದಲ್ಲೇ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ: ಜನಾರ್ದನ ರೆಡ್ಡಿ

ರಾಜ್ಯ ಬಿಜೆಪಿ ಘಟಕದಲ್ಲಿ ಆಂತರಿಕ ಕಚ್ಚಾಟ ವಿಚಾರವಾಗಿ ಕೊಪ್ಪಳ ತಾಲೂಕಿನ ಇರಕಲ್ಲಗಡಾದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಪ್ರತಿಕ್ರಿಯಿಸಿದ್ದು, ಪಕ್ಷದ ಹಿರಿಯ ನಾಯಕರು ಈಗಾಗಲೇ ಬೆಂಗಳೂರಿಗೆ ಬಂದಿದ್ದಾರೆ. ಶೀಘ್ರದಲ್ಲೇ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ. ಪಕ್ಷದ ವರಿಷ್ಠರು ಒಳ್ಳೆಯ ನಿರ್ಧಾರ ಕೈಗೊಳ್ಳುತ್ತಾರೆ. ಅವಕಾಶ ಸಿಕ್ಕರೆ ರಾಜ್ಯಾಧ್ಯಕ್ಷ ಆಗ್ತೇನೆಂದು ರಾಮುಲು ಹೇಳಿಕೆ‌ ವಿಚಾರವಾಗಿ ಮಾತನಾಡಿದ್ದು, ಎಲ್ಲರಿಗೂ ಆಸೆ ಇರುತ್ತೆ, ಆದರೆ ಹಿರಿಯರು ತೀರ್ಮಾನ ಮಾಡಬೇಕು ಎಂದರು.

ಇದನ್ನೂ ಓದಿ: Delhi Assembly Poll Results; ಸಮಾಜದ ಎಲ್ಲ ವರ್ಗದವರು ಬಿಜೆಪಿಗೆ ವೋಟು ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ

ಮೂಡಾ ವಿಚಾರದಲ್ಲಿ ಇಡಿ ವಿಚಾರಣೆ ಇನ್ನು ನಡೆಯುತ್ತಿದೆ. ಹೀಗಾಗಿ ಈಗಾಗಲೇ ಅವರು‌ ವಿಜಯೋತ್ಸವ ಆಚರಣೆ ಮಾಡುವ ಅವಶ್ಯಕತೆ ಇಲ್ಲ. ಇಡಿ ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಸಿದ್ದರಾಮಯ್ಯ ಒಬ್ಬರೇ ಜೈಲಿಗೆ ಹೋಗುತ್ತಾರಾ, ಇಲ್ಲಾ ಎಷ್ಟು ಜನ ಹೋಗುತ್ತಾರೆ ಅನ್ನೋದು ಮುಂದಿನ ದಿನದಲ್ಲಿ ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ