AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ವಿದ್ಯುತ್ ಪ್ರವಹಿಸುತ್ತಿದ್ದ ಕಂಬ ಮುಟ್ಟಿ ಯುವಕ ಸಾವು

ಮೂತ್ರ ವಿಸರ್ಜನೆಗೆ ಹೋದ ಸಂದರ್ಭದಲ್ಲಿ ವಿದ್ಯುತ್ ಕಂಬ ಗ್ರೌಂಡ್ ಆಗಿ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಡಾವಣೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಪೊಲೀಸರು, ಯುವಕನ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರಾವಾನೆ ಮಾಡಿದ್ದಾರೆ.

ದಾವಣಗೆರೆ: ವಿದ್ಯುತ್ ಪ್ರವಹಿಸುತ್ತಿದ್ದ ಕಂಬ ಮುಟ್ಟಿ ಯುವಕ ಸಾವು
ವಿದ್ಯುತ್​ ತಂತಿ ( ಸಂಗ್ರಹ ಚಿತ್ರ)
TV9 Web
| Edited By: |

Updated on:Oct 11, 2021 | 7:35 AM

Share

ದಾವಣಗೆರೆ: ಜಿಲ್ಲೆಯಲ್ಲಿ ತುಂತುರು ಮಳೆ ಹಿನ್ನಲೆ ಕಂಬದಲ್ಲಿಯೂ ವಿದ್ಯುತ್ ಪ್ರವಹಿಸುತ್ತಿತ್ತು. ಈ ಬಗ್ಗೆ ತಿಳಿಯದೆ ಕಂಬವನ್ನು ಮುಟ್ಟಿದ್ದ ಯುವಕ ಸಾವನ್ನಪ್ಪಿದ್ದಾನೆ. ದಾವಣಗೆರೆಯ ಯಲ್ಲಮ್ಮ ನಗರದ ಕುಂದುವಾಡ ರಸ್ತೆಯ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಭರತ್ ಕಾಲೋನಿ ಮನೋಜ್ ಮಜ್ಜಿಗೆ(23) ಮೃತ ದುರ್ದೈವಿ.

ಮೂತ್ರ ವಿಸರ್ಜನೆಗೆ ಹೋದ ಸಂದರ್ಭದಲ್ಲಿ ವಿದ್ಯುತ್ ಕಂಬ ಗ್ರೌಂಡ್ ಆಗಿ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಡಾವಣೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಪೊಲೀಸರು, ಯುವಕನ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರಾವಾನೆ ಮಾಡಿದ್ದಾರೆ.

ಮೈಸೂರು: ಸೇತುವೆ ತಡೆಗೋಡೆಗೆ ಬೈಕ್ ಡಿಕ್ಕಿ; ಸವಾರ ದುರ್ಮರಣ ಸೇತುವೆ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಬನ್ನೂರು ಮುಖ್ಯ ರಸ್ತೆಯ ಬೊಂತಗಳ್ಳಿ ಗೇಟ್ ಬಳಿ ನಡೆದಿದೆ. ಯಳಗೌಡನಹುಂಡಿಯ ನಿವಾಸಿ ಮಂಜು(30) ಮೃತಪಟ್ಟ ದುರ್ದೈವಿ. ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮೈಸೂರು: 2 ಗುಂಪುಗಳ ಮಧ್ಯೆ ಮಾರಾಮಾರಿಯಲ್ಲಿ ಯುವಕನ ಹತ್ಯೆ 2 ಗುಂಪುಗಳ ಮಧ್ಯೆ ಮಾರಾಮಾರಿಯಲ್ಲಿ ಯುವಕನನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಗುಂಡೂರಾವ್ ನಗರದಲ್ಲಿ ನಡೆದಿದೆ. ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದೆ. ಆ ಪೈಕಿ ನಂದಕಿಶೋರ್(24) ಸಾವನ್ನಪ್ಪಿದ್ದು, ಸಂಜಯ್ ಸ್ಥಿತಿ ಗಂಭೀರವಾಗಿದೆ. ಸದ್ಯ ಗಂಭೀರ ಗಾಯಗೊಂಡ ಸಂಜಯ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಸ್ನೇಹಿತರಿಗೆ ಚಾಲೆಂಜ್ ಹಾಕಿ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು; ಇನ್ನೂ ಸಿಗದ ಮೃತದೇಹ

ಅಪರಾಧ ಸುದ್ದಿ: ಹುಡುಗಾಟಿಕೆಗೆ ವಿದ್ಯುತ್ ಕಂಬ ಹತ್ತಿದ ಯುವಕ ಕರೆಂಟ್ ಹೊಡೆದು ಅಲ್ಲೆ ನೇತಾಡಿದ

Published On - 7:26 am, Mon, 11 October 21

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​