ಮೊಬೈಲ್​ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದ ಯುವತಿಗೆ ರೈಲು ಡಿಕ್ಕಿ: ಸಾವು

ಹರಿಹರ ರೈಲು ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ. ಮೊಬೈಲ್‌ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದ 23 ವರ್ಷದ ಎಂಬಿಎ ವಿದ್ಯಾರ್ಥಿನಿಗೆ ರೈಲು ಡಿಕ್ಕಿ ಹೊಡೆದಿದೆ. ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ ಮೂಲದ ಶ್ರಾವಣಿ ಮೈಸೂರಿನಲ್ಲಿ ಎಂಬಿಎ ಓದುತ್ತಿದ್ದರು ಮತ್ತು ಶುಭ ಕಾರ್ಯಕ್ಕಾಗಿ ಹರಿಹರಕ್ಕೆ ಬಂದಿದ್ದರು. ಪೊಲೀಸರು ಘಟನಾ ಸ್ಥಳ ಪರಿಶೀಲಿಸಿದ್ದಾರೆ.

ಮೊಬೈಲ್​ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದ ಯುವತಿಗೆ ರೈಲು ಡಿಕ್ಕಿ: ಸಾವು
ಮೊಬೈಲ್​ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದ ಯುವತಿಗೆ ರೈಲು ಡಿಕ್ಕಿ
Updated By: ವಿವೇಕ ಬಿರಾದಾರ

Updated on: Apr 30, 2025 | 2:54 PM

ಬೆಂಗಳೂರು, ಏಪ್ರಿಲ್​ 30: ಮೊಬೈಲ್​ನಲ್ಲಿ (Mobile) ಮಾತನಾಡುತ್ತಾ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹರಿಹರ (Harihar) ರೈಲು ನಿಲ್ದಾಣದಲ್ಲಿ ನಡೆದಿದೆ. ವಿದ್ಯಾರ್ಥಿನಿ ಶ್ರಾವಣಿ (23) ಮೃತ ದುರ್ದೈವಿ. ಬಳ್ಳಾರಿ ಮೂಲದ ಶ್ರಾವಣಿ ಮೈಸೂರಿನಲ್ಲಿ ಎಂಬಿಎ ಓದುತ್ತಿದ್ದರು.

ಶುಭ ಕಾರ್ಯಕ್ಕೆಂದು ಶ್ರಾವಣಿ ಹರಿಹರದಲ್ಲಿನ ತನ್ನ ಸಂಬಂಧಿಕರ ಮನೆಗೆ ಬಂದಿದ್ದರು. ಮಂಗಳವಾರ (ಏ.30) ರಾತ್ರಿ ಮೊಬೈಲ್​ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿದೆ. ತಲೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ವಿಭಾಗದ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರಿಹರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ನೋಡಿ: ಹಿಡಿಯುವಾಗ ಕೊರಳಿಗೆ ಸುತ್ತಿಕೊಂಡ ಕೇರೆ ಹಾವು! ಆಮೇಲೇನಾಯ್ತು? ವಿಡಿಯೋ ನೋಡಿ

ಇದನ್ನೂ ಓದಿ
ಹಣ, ಮಟನ್ ಕೊಟ್ಟರೂ ಮನೆಯ ಇ-ಸ್ವತ್ತು ಆಗುತ್ತಿಲ್ಲ: ಹೀಗೊಂದು ಲಂಚದ ಆರೋಪ!
ದಾವಣಗೆರೆ: ಅನೈತಿಕ ಸಂಬಂಧ ಆರೋಪಿಸಿ ಮಹಿಳೆ ಮೇಲೆ ಹಲ್ಲೆ, 6 ಮಂದಿ ಅರೆಸ್ಟ್​
ಪತ್ನಿ ಸಾವಿನ ನೋವಿನಲ್ಲಿ ತನ್ನಿಬ್ಬರು ಮಕ್ಕಳನ್ನು ಸಾಯಿಸಿ ತಂದೆ ಆತ್ಮಹತ್ಯೆ
ದಾವಣಗೆರೆಯಲ್ಲೊಂದು ಅಮಾನುಷ ಕೃತ್ಯ: ಮರಕ್ಕೆ ಕಟ್ಟಿ ಚಿತ್ರಹಿಂಸೆ

ಅರಣ್ಯ ವೀಕ್ಷಕ ಆತ್ಮಹತ್ಯೆ

ಮೈಸೂರು: ಸರಗೂರು ತಾಲೂಕಿನಲ್ಲಿ ಅರಣ್ಯ ಇಲಾಖೆ ಕ್ವಾರ್ಟರ್ಸ್‌ನಲ್ಲಿ ಅರಣ್ಯ ವೀಕ್ಷಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸಿಎಫ್ ಅಮೃತ ಮಾಯಪ್ಪನವರ್ ಕಿರುಕುಳದಿಂದ ಬೇಸತ್ತು ಗುಂಡ್ಲುಪೇಟೆ ತಾಲೂಕು ಬೆರಂಬಾಡಿ ಗ್ರಾಮದ ನಿವಾಸಿ ಅರಣ್ಯ ವೀಕ್ಷಕ ಪಿ.ಸುರೇಶ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸರಗೂರು ಪೊಲೀಸ್ ಠಾಣೆಯಲ್ಲಿ ಹೊಟ್ಟೆನೋವು ತಾಳಲಾರದೆ ಸಾವು ಎಂದು ಪ್ರಕರಣ ದಾಖಲಾಗಿದೆ. ಅಧಿಕಾರಿ ಕಿರುಕುಳದ ಬಗ್ಗೆ ಡೆತ್ ನೋಟ್ ಇದೆ ಸುರೇಶ್ ಪೋಷಕರು ಹೇಳಿದ್ದಾರೆ. ಹಿರಿಯ ಅಧಿಕಾರಿಗಳ ರಕ್ಷಣೆಗೆ ಪೊಲೀಸರು ಮುಂದಾಗಿದ್ದಾರೆ. ಸುರೇಶ್ ಸಾವಿಗೆ ನ್ಯಾಯ ಕೊಡಿಸಿ ಎಂದು ಕುಟುಂಬಸ್ಥರು, ಸ್ಥಳೀಯರು ಆಗ್ರಹಿಸಿದ್ದಾರೆ. ಸರಗೂರು ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ