AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಗೇಮ್ ಚಟಕ್ಕೆ ಮಾಡಿದ್ದ ಲಕ್ಷಾಂತರ ರೂ. ಸಾಲ ತೀರಿಸಲು ವೃದ್ಧೆಯ ಕೊಂದು ಚಿನ್ನಾಭರಣ ದೋಚಿದ್ದ ಯುವಕ ಅಂದರ್

ಆನ್‌ಲೈನ್ ಗೇಮ್ ಚಟಕ್ಕೆ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ದಾವಣಗೆರೆಯ ನ್ಯಾಮತಿ ತಾಲೂಕಿನಲ್ಲಿ ವೃದ್ಧೆ ಕಮಲಮ್ಮ ಎಂಬವರನ್ನು ಹತ್ಯೆ ಮಾಡಿ, 8.44 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ಸದ್ಯ ಪೊಲೀಸರು ಆರೋಪಿ ಅಭಿಷೇಕನನ್ನು ಬಂಧಿಸಿ, ಕದ್ದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಆನ್​ಲೈನ್ ಗೇಮ್ ಚಟಕ್ಕೆ ಮಾಡಿದ್ದ ಲಕ್ಷಾಂತರ ರೂ. ಸಾಲ ತೀರಿಸಲು ವೃದ್ಧೆಯ ಕೊಂದು ಚಿನ್ನಾಭರಣ ದೋಚಿದ್ದ ಯುವಕ ಅಂದರ್
ಆರೋಪಿ ಅಭಿಷೇಕ್Image Credit source: tv9
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Feb 23, 2026 | 2:18 PM

Share

ದಾವಣಗೆರೆ, ಫೆಬ್ರವರಿ 23: ಆನ್‌ಲೈನ್ ಗೇಮ್ ವ್ಯಸನದಿಂದ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ಸಾಲ ತೀರಿಸಲು ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ ಚಿನ್ನ ದೋಚಿದ ಪ್ರಕರಣ ದಾವಣಗೆರೆ (Davanagere) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಫೆಬ್ರವರಿ 2ರಂದು ಈ ಘಟನೆ ನಡೆದಿತ್ತು. ಗ್ರಾಮದ ಒಂಟಿ ವೃದ್ಧೆ ಕಮಲಮ್ಮ (64) ಅವರನ್ನು ಮನೆಗೆ ನುಗ್ಗಿ ಹತ್ಯೆ ಮಾಡಿ, ಸುಮಾರು 8.44 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಲಾಗಿತ್ತು. ಪ್ರಕರಣ ಸಂಬಂಧ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ನಿವಾಸಿ ಅಭಿಷೇಕ (23) ಎಂಬ ಯುವಕನನ್ನು ಬಂಧಿಸಲಾಗಿದೆ.

ಪೊಲೀಸರ ತನಿಖೆಯಲ್ಲಿ ತಿಳಿದುಬಂದಿರುವ ಪ್ರಕಾರ, ಅಭಿಷೇಕ ಆನ್‌ಲೈನ್ ಗೇಮ್ ಆಡುತ್ತಾ 20ರಿಂದ 25 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಸಾಲಗಾರರ ಒತ್ತಡದಿಂದ ಮನೆ ಬಿಟ್ಟು ಸುತ್ತಾಡುತ್ತಿದ್ದ ಆತ, ರಾತ್ರಿ ವೇಳೆ ಬಸ್ ನಿಲ್ದಾಣಗಳಲ್ಲಿ ವಾಸಿಸುತ್ತಿದ್ದ. ಇದೇ ವೇಳೆ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ದೇವರ ಹಬ್ಬ ನಡೆಯುತ್ತಿರುವುದು ತಿಳಿದು ಫೆಬ್ರವರಿ 2ರಂದು ಗ್ರಾಮಕ್ಕೆ ತೆರಳಿದ್ದ.

ಹಬ್ಬಕ್ಕೆ ಚಿನ್ನಾಭರಣ ಧರಿಸಿ ದೇವಸ್ಥಾನಕ್ಕೆ ಹೋಗಿದ್ದೇ ಮುಳುವಾಯ್ತು

ಹಬ್ಬದ ನಿಮಿತ್ತ ಚಿನ್ನಾಭರಣ ಧರಿಸಿಕೊಂಡು ದೇವಾಲಯಕ್ಕೆ ಬಂದಿದ್ದ ಕಮಲಮ್ಮ ಅವರನ್ನು ಗಮನಿಸಿದ್ದ ಆತ, ಅವರ ಮನೆ ಹಿಂಬಾಗಿಲಿನಿಂದ ಒಳನುಗ್ಗಿ ಅಡಗಿ ಕುಳಿತಿದ್ದಾನೆ. ತಡರಾತ್ರಿ ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಕಮಲಮ್ಮ ಅವರ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದ.

ಕದ್ದ ಚಿನ್ನ ಅಡವಿಟ್ಟು ಸಾಲ ಪಡೆದಿದ್ದ ಖತರ್ನಾಕ್!

ದೋಚಿದ ಚಿನ್ನವನ್ನು ಶಿಕಾರಿಪುರದ ವಿವಿಧ ಬ್ಯಾಂಕ್‌ಗಳಲ್ಲಿ ಅಡವಿಟ್ಟು ಹಣ ಪಡೆದಿದ್ದ ಆತ, ಆ ಹಣದಿಂದ ಮತ್ತೆ ಆನ್‌ಲೈನ್ ಗೇಮ್ ಆಡಲು ಆರಂಭಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯರ ಸಹಕಾರ ಮತ್ತು ಸೂಕ್ತ ಮಾಹಿತಿ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಈ ಕುರಿತು ದಾವಣಗೆರೆ ಎಸ್ಪಿ ಎಚ್.ಟಿ. ಶೇಖರ ಮಾಹಿತಿ ನೀಡಿದ್ದು, ಆರೋಪಿಯಿಂದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಪ್ರಕರಣದ ಕುರಿತ ತನಿಖೆ ಮುಂದುವರಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು