ದಾವಣಗೆರೆ, ಮಾರ್ಚ್ 17: ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಹರಿಹರ (Harihar) ತಾಲೂಕಿನ ಹನಗವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ರಾಕೇಶ್ (22), ಆಕಾಶ್ (23) ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಹರಿಹರ ತಾಲೂಕು ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್ (Police) ಠಾಣಾ ವ್ಯಾಪ್ತಿ ಘಟನೆ ನಡೆದಿದೆ.
ಕಲಬುರಗಿ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಹಬಾದ್ ತಾಲೂಕಿನ ಭಂಕೂರ ಬಳಿ ನಡೆದಿದೆ. ಜಾಹೀದ್ ಪಠಾಣ್ (30), ಶಾಕೀರ್ (20) ಮೃತ ದುರ್ದೈವಿಗಳು. ಓರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವೀಫ್ಟ್ ಮತ್ತು ಸ್ಕಾರ್ಪಿಯೋ ಕಾರು ಮಧ್ಯೆ ಅಪಘಾತ ಸಂಭವಿಸಿದೆ. ಸ್ವೀಫ್ಟ್ ಕಾರಿನಲ್ಲಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಮೃತರು ಉತ್ತರಪ್ರದೇಶ ಮೂಲದವರಾಗಿದ್ದು, ರಂಜಾನ್ ಹಬ್ಬ ಹಿನ್ನಲೆಯಲ್ಲಿ ಬಟ್ಟೆ ವ್ಯಾಪಾರ ಮುಗಿಸಿಕೊಂಡು ವಾಪಾಸು ತೆರಳುತ್ತಿದ್ದರು. ಶಹಬಾದ್ ಕಡೆಯಿಂದ ಕಲಬುರಗಿಗೆ ಬರುತ್ತಿದ್ದ ಸ್ಕಾರ್ಪಿಯೋ ಕಾರು ಬರುತ್ತಿತ್ತು. ಕಲಬುರಗಿಯಿಂದ ಯಾದಗಿರಿಗೆ ಕಡೆಗೆ ಸ್ವೀಫ್ಟ್ ಕಾರು ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರು: 2024ರ ಮೊದಲ ಎರಡು ತಿಂಗಳಲ್ಲಿ ಅಪಘಾತದಿಂದ 174 ಜನ ಸಾವು
ಬೆಂಗಳೂರು: ನೆಲಮಂಗಲ ತಾಲೂಕಿನ ಬೂದಿಹಾಳದಲ್ಲಿ ರಿಯಾಬ್ ಸೆಂಟರ್ನಲ್ಲಿದ್ದ ವ್ಯಕ್ತಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾನೆ. ಹುಲ್ಲೇಗೌಡನಹಳ್ಳಿ ಹರೀಶ್ (33) ಮೃತ ದುರ್ದೈವಿ. ಕುಡಿತದ ಚಟ ಬಿಡಿಸುವ ಉದ್ದೇಶದಿಂದ ರಿಯಾಬ್ ಸೆಂಟರ್ಗೆ ಸೇರಿಸಲಾಗಿತ್ತು. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಮೈಸೂರು ರಸ್ತೆಯಲ್ಲಿ ಆಯಿಲ್ ಲೀಕ್ ಆಗಿದ್ದು, ಇದರಿಂದ ಬೈಕ್ ಸ್ಕಿಡ್ ಆಗಿ ಪಲ್ಟಿಯಾಗಿವೆ. 10ಕ್ಕೂ ಹೆಚ್ಚು ವಾಹನಗಳು ಪಲ್ಟಿಯಾಗಿವೆ. ಸ್ಥಳಕ್ಕೆ ಚಿಕ್ಕಪೇಟೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ