ಕೊರೊನಾದಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರಕ್ಕೆ ದಾವಣಗೆರೆ ಪಾಲಿಕೆಯಿಂದ ಉಚಿತ ವಾಹನ
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮೂರು ಮುಕ್ತಿ ವಾಹನಗಳಿದ್ದು, ಇವುಗಳಲ್ಲಿ ಒಂದನ್ನು ಕೊರೊನಾ ಸೋಂಕಿನಿಂದ ಮೃತಪಟ್ಟವರನ್ನು ಅಂತ್ಯಸಂಸ್ಕಾರಕ್ಕೆ ತೆಗೆದುಕೊಂಡು ಹೋಗಲು ಮೀಸಲಿಡಲಾಗಿದೆ. ಈ ಬಗ್ಗೆ ಮಹಾನಗರ ಪಾಲಿಕೆ ಮೇಯರ್ ಎಸ್.ಟಿ.ವೀರೇಶ್ ಬಗ್ಗೆ ಮಾಹಿತಿ ನೀಡಿದ್ದಾರೆ.
ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಹೆಚ್ಚು ಜನರು ಮೃತಪಡುತ್ತಿದ್ದಾರೆ. ಬೆಡ್ಗಳು ಸಿಗದೆ, ಆಕ್ಸಿಜನ್ ಸಿಗದೆ ಹೆಚ್ಚು ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಮೃತದೇಹವನ್ನು ದಹನ ಮಾಡಲು ಚಿತಾಗಾರಗಳ ಮುಂದೆ ಆ್ಯಂಬುಲೆನ್ಸ್ಗಳು ಸಾಲುಗಟ್ಟಿ ನಿಲ್ಲುತ್ತಿವೆ. ಈ ಮದ್ಯೆ ಅದೆಷ್ಟೋ ಮೃತದೇಹವನ್ನು ಚಿತಾಗಾರಕ್ಕೆ ಕೊಂಡೊಯ್ಯಲು ಆ್ಯಂಬುಲೆನ್ಸ್ಗಳು ಸಿಗುತ್ತಿಲ್ಲ. ಸಿಕ್ಕ ಆ್ಯಂಬುಲೆನ್ಸ್ ಚಾಲಕರು ಮನಸ್ಸಿಗೆ ಬಂದಷ್ಟು ಹಣವನ್ನು ಕೇಳುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ನಡುವೆ ದಾವಣಗೆರೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರಕ್ಕೆ ಪಾಲಿಕೆಯಿಂದ ಉಚಿತ ವಾಹನ ನೀಡಿದೆ.
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮೂರು ಮುಕ್ತಿ ವಾಹನಗಳಿದ್ದು, ಇವುಗಳಲ್ಲಿ ಒಂದನ್ನು ಕೊರೊನಾ ಸೋಂಕಿನಿಂದ ಮೃತಪಟ್ಟವರನ್ನು ಅಂತ್ಯಸಂಸ್ಕಾರಕ್ಕೆ ತೆಗೆದುಕೊಂಡು ಹೋಗಲು ಮೀಸಲಿಡಲಾಗಿದೆ. ಈ ಬಗ್ಗೆ ಮಹಾನಗರ ಪಾಲಿಕೆ ಮೇಯರ್ ಎಸ್.ಟಿ.ವೀರೇಶ್ ಬಗ್ಗೆ ಮಾಹಿತಿ ನೀಡಿದ್ದಾರೆ.
ಪಾಲಿಕೆಯ ಕಾರ್ಯಪಾಲಕ ಇಂಜಿನಿಯರ್ ನೇತ್ರತ್ವದಲ್ಲಿ ತಲಾ ಎಂಟು ಜನರ ಮೂರು ತಂಡ ರಚನೆ ಮಾಡಲಾಗಿದೆ. ಸೋಂಕಿತರ ಮನೆಗಳಿಗೆ ಸ್ಯಾನಿಟೈಸೇಷನ್ ಮಾಡಲಾಗುವುದು. ಈಗಾಗಲೇ ನಿಗದಿಯಾದ ಮದುವೆಗಳಿಗೆ ಅನುವು ಮಾಡಿಕೊಡಲಾಗಿದೆ. ಕೊವಿಡ್ ನಿಯಮ ಪಾಲನೆ ಮಾಡದೆ ಇದ್ದರೆ ಸೂಕ್ತ ದಂಡ ಹಾಗೂ ಕೇಸ್ ಬುಕ್ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಸ್.ಟಿ. ವೀರೇಶ್ ತಿಳಿಸಿದರು.
ಇದನ್ನೂ ಓದಿ
ಕುಂದಾನಗರಿಯಲ್ಲಿ ಆಕ್ಸಿಜನ್ಗಿಲ್ಲ ಕೊರತೆ; ಕೊರೊನಾ ಸೋಂಕು ತಡೆಯಲು ಸಕಲ ಸಿದ್ಧತೆ ಮಾಡಿಕೊಂಡಿರುವ ಜಿಲ್ಲಾಡಳಿತ
ಕೆಎಸ್ಪಿ ಕ್ಲಿಯರ್ ಪಾಸ್ ಪಡೆಯುವುದು ಹೇಗೆ? ಮಾಹಿತಿ ಇಲ್ಲಿದೆ
(Davangere Municipal Corporation provided free vehicle for funeral of deceased from Corona)