ಬಂಡವಾಳ ಆಕರ್ಷಣೆ ಮಂಚೂಣಿಯಲ್ಲಿ ಕರ್ನಾಟಕ, ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಂದ!

ಮುಂದಿನ‌ ದಿನಗಳಲ್ಲಿ ಕಂಪನಿಗಳು ಹೂಡಿಕೆ ಮಾಡಲಿರುವ ಬಂಡವಾಳದಿಂದ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿ ಆಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರ ಆಸಕ್ತಿಯಿಂದ ಸರ್ಕಾರ ಬೃಹತ್ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತಿದೆ.

ಬಂಡವಾಳ ಆಕರ್ಷಣೆ ಮಂಚೂಣಿಯಲ್ಲಿ ಕರ್ನಾಟಕ, ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಂದ!
ಲುಲು ಗ್ರೂಪ್ ಚೇರ್ಮನ್​ರೊಂದಿಗೆ ಕರ್ನಾಟಕ ನಿಯೋಗ ಚರ್ಚೆ
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:May 26, 2022 | 12:42 AM

ದಾವೋಸ್: ಇಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆ (World Economic Forum) ಫಲಪ್ರದವಾಗಿದ್ದು, ಕರ್ನಾಟಕ ಬಂಡವಾಳ (investment) ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ನೇತೃತ್ವದಲ್ಲಿ ಪ್ರಥಮ ಬಾರಿಗೆ 2 ಮಹತ್ವದ ಕಂಪನಿಗಳ ಜತೆ ಒಟ್ಟು ೫೨ ಸಾವಿರ ಕೋಟಿ ರೂಪಾಯಿ ಮೊತ್ತದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.ಇದು ಕರ್ನಾಟಕ ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ. ಇತ್ತೀಚಿನ ದಿನಗಳ ರಾಜ್ಯಕ್ಕೆ ಹರಿದು ಬರುತ್ತಿರುವ ಬಹುದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಇನ್ನೂ ಹಲವಾರು ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿವೆ.

ಮುಂದಿನ‌ ದಿನಗಳಲ್ಲಿ ಕಂಪನಿಗಳು ಹೂಡಿಕೆ ಮಾಡಲಿರುವ ಬಂಡವಾಳದಿಂದ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿ ಆಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರ ಆಸಕ್ತಿಯಿಂದ ಸರ್ಕಾರ ಬೃಹತ್ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತಿದೆ.

ಕರ್ನಾಟಕಕ್ಕೆ ದಾವೋಸ್ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದೆ

ನವೀಕರಿಸಬಹುದಾದ ಇಂಧನ ವಲಯದಲ್ಲಿ ರೆನ್ಯೂ ಪವರ್ ಕಂಪನಿ 50,000 ಕೋಟಿ ರೂ.ಗಳ ಬಂಡವಾಳ ಹೂಡಲು ಕರ್ನಾಟಕ ಸರ್ಕಾರದದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಕರ್ನಾಟಕದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ.

ಮೆ. ಲುಲು ಗ್ರೂಪ್ ಇಂಟರ್ ನ್ಯಾಷನಲ್ ಸಂಸ್ಥೆಯು ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಯಿತು. ಇವೆರಡೂ ಒಪ್ಪಂದಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿವೆ.

ಕರ್ನಾಟಕದಲ್ಲಿ ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ಪೂರಕವಾಗಿ ಎರಡು ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಸಂಶೋಧನೆಗೆ ಹೆಚ್ಚು ಪ್ರೋತ್ಸಾಹವನ್ನು ನೀಡುವ ಆರ್ ಎಂಡ್ ಡಿ ಪಾಲಿಸಿ, ಹೆಚ್ಚು ಉದ್ಯೋಗವನ್ನು ಒದಗಿಸುವ ಉದ್ಯಮಗಳಿಗೆ ಹೆಚ್ಚು ಉತ್ತೇಜನಕಾರಿ ನೀತಿಗಳನ್ನು ಜಾರಿಗೆ ತರಲಾಗಿದೆ. ಎರಡೂ ನೀತಿಗಳ ಲಾಭಗಳನ್ನು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂಸ್ಥೆಗಳು ಪಡೆದುಕೊಳ್ಳಬಹುದಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದೇ ಸಂದರ್ಭದಲ್ಲಿ ನವೆಂಬರ್ ನಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಪಾಲ್ಗೊಳ್ಳುವಂತೆ ಹೂಡಿಕೆದಾರರಿಗೆ ಕರ್ನಾಟಕ ಸರ್ಕಾರದಿಂದ ಆಹ್ವಾನ ನೀಡಲಾಯಿತು.

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವ ಸಂಸ್ಥೆಗಳು

ಮೆ. ಲುಲು ಗ್ರೂಪ್ ಇಂಟರ್ನ್ಯಾಷನಲ್

ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದೆ. 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ರೆನ್ಯೂ ಪವರ್ ಪ್ರೈ.ಲಿ. 

ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಕಂಪನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು 2 ಹಂತಗಳಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದು, ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

Discussion with Axis Bank MD Amitabh Choudhry

ಆ್ಯಕ್ಸಿಸ್ ಬ್ಯಾಂಕ್ ಎಮ್ ಡಿ ಅಮಿತಾಬ್ ಚೌಧುರಿ ಜೊತೆ ಬೊಮ್ಮಾಯಿ ಚರ್ಚೆ

ಮೊದಲ ಹಂತದಲ್ಲಿ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳಿಗೆ 11,900 ಕೋಟಿ ರೂ.ಗಳ ಬಂಡವಾಳ ಹೂಡಿ, ಮುಂದಿನ 2 ವರ್ಷಗಳಲ್ಲಿ ಯೋಜನೆಗಳು ಕಾರ್ಯಾರಂಭ ಮಾಡಲಾಗುತ್ತದೆ.

ಎರಡನೇ ಹಂತದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಥಾಪಿಸಲು 37,500 ಕೋಟಿ ರೂ.ಗಳ ಬಂಡವಾಳವನ್ನು ಹೂಡಿಕೆ ಮಾಡಲಾಗುತ್ತದೆ. ಈ ಎರಡು ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿದ ಸಂಸ್ಥೆಗಳು:

ಸೀಮೆನ್ಸ್ ಸಂಸ್ಥೆ

ಬೆಂಗಳೂರಿನಲ್ಲಿ 2 ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳಲಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕಗಳನ್ನು ಕರ್ನಾಟಕ ಸರ್ಕಾರ ಒದಗಿಸುವ ಭರವಸೆ ನೀಡಿದೆ. ‘ಬಿಯಾಂಡ್ ಬೆಂಗಳೂರು’ ಯೋಜನೆಯಡಿ ತುಮಕೂರು, ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರ್ಕಾರ ಮತ್ತು ಸೀಮೆನ್ಸ್ ಸಂಸ್ಥೆ ಮಾತುಕತೆ ನಡೆಸಿತು.

ದಸ್ಸಾಲ್ಸ್ ಸಿಸ್ಟಮ್ಸ್

ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ, ವಿದ್ಯಾರ್ಥಿಗಳಿಗೆ ಕೈಗಾರಿಕೆ 4.0, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ, ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಉತ್ಸಾಹ ತೋರಿದೆ.

ನೆಸ್ಲೆ ಸಂಸ್ಥೆ

ನಂಜನಗೂಡಿನಲ್ಲಿ ನೆಸ್ಲೆ ಇನ್ಸೆಂಟ್ ಕಾಫಿ ಕಾರ್ಖಾನೆಯನ್ನು ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಲೆ ಸಂಸ್ಥೆ ಮುಂದಾಗಿದೆ.

ಮೆಗಾ ಡಾಟಾ ಸೆಂಟರ್

ಭಾರ್ತಿ ಎಂಟರ್ ಪ್ರೈಸಸ್ ನ ಅಧ್ಯಕ್ಷ ಹಾಗೂ ಸಿಇಓ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಐಕಿಯ ಸ್ಟೋರ್

ಇಂಗ್ಕಾ ಗ್ರೂಪ್ (ಐಕಿಯ) ಸಿ.ಇ.ಓ. ಜೆಸ್ಪರ್ ಬ್ರಾಡಿನ್ ಅವರು ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಜೂನ್‍ನಲ್ಲಿ ನಾಗಸಂದ್ರದಲ್ಲಿ ಸ್ಟೋರ್ ತೆರೆಯಲಿದ್ದು, ಉದ್ಘಾಟನೆಗೆ

ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಇದೇ ಸಂದರ್ಭದಲ್ಲಿ ಐಕಿಯದ ಭಾರತೀಯ ಕೇಂದ್ರ ಕಚೇರಿಯೂ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತು ಸಹ ಚರ್ಚಿಸಲಾಯಿತು.

ಆಕ್ಸಿಸ್ ಬ್ಯಾಂಕ್ 

ಆಕ್ಸಿಸ್ ಬ್ಯಾಂಕ್ ಸಂಸ್ಥೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಸಲಹೆ ನೀಡಲಾಗಿದೆ.

ನೋಕಿಯಾ ಸಂಸ್ಥೆ 

ಕರ್ನಾಟಕದಲ್ಲಿ ಟೆಲಿಕಾಂ ಉತ್ಪನ್ನಗಳ ತಯಾರಿಕೆ ಅವಕಾಶಗಳನ್ನು ಬಳಸಿಕೊಳ್ಳಲು ನೋಕಿಯಾ ಸಂಸ್ಥೆಯ ಮುಖ್ಯಸ್ಥರಿಗೆ ಸಲಹೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ಕುರಿತ ಗೋಷ್ಠಿಯಲ್ಲಿ ಭಾಗವಹಿಸಿ ಈಶ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಚರ್ಚಿಸಿ, ರಾಜ್ಯದಲ್ಲಿ ಪರಿಸರ ಹಾಗೂ ಮಣ್ಣಿನ ಸಂರಕ್ಷಣೆ ಕುರಿತು ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ, ಬಿಟಿ, ಉನ್ನತ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಮೊದಲಾದ ಹಿರಿಯ ಅಧಿಕಾರಿಗಳು ರಾಜ್ಯದ ತಂಡದಲ್ಲಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:28 am, Thu, 26 May 22

ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
Budget Session 2025: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಮಾತು
Budget Session 2025: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಮಾತು
ನಮ್ಮ ಮನೆಯಲ್ಲಿ ನಾನು ಆಸ್ತಿಕ ಅದರೆ ನಮ್ಮ ತಂದೆ ನಾಸ್ತಿಕ: ಯತೀಂದ್ರ
ನಮ್ಮ ಮನೆಯಲ್ಲಿ ನಾನು ಆಸ್ತಿಕ ಅದರೆ ನಮ್ಮ ತಂದೆ ನಾಸ್ತಿಕ: ಯತೀಂದ್ರ
ಮನೆಯೊಡತಿ ಸಾವಿನ ಸುದ್ದಿ ತಿಳಿದು ಸಾಕು ನಾಯಿಯ ಮೂಕರೋಧನೆ
ಮನೆಯೊಡತಿ ಸಾವಿನ ಸುದ್ದಿ ತಿಳಿದು ಸಾಕು ನಾಯಿಯ ಮೂಕರೋಧನೆ
ಸಿದ್ದರಾಮಯ್ಯರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಇಡಿ ಯತ್ನ: ಯತೀಂದ್ರ
ಸಿದ್ದರಾಮಯ್ಯರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಇಡಿ ಯತ್ನ: ಯತೀಂದ್ರ