ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿದ್ದ ಕೊರೊನಾ ಹಾವಳಿ ನಿಧಾನವಾಗಿ ತಗ್ಗತ್ತಿದೆ. ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ ಸಾವಿರದ ಆಸುಪಾಸಿನಲ್ಲಿ ಹೊಸ ಪ್ರಕರಣ ಪತ್ತೆ ಆಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1194 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,09,469 ಕ್ಕೇರಿದೆ.
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿರುವುದು ನಿಟ್ಟುಸಿರು ಬಿಡುವಂತೆ ಮಾಡಿದೆ.
ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,009 ಜನರ ಸಾವನಪ್ಪಿದ್ದಾರೆ. ಸೋಂಕಿತರ ಪೈಕಿ 8,82,944 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 14,497 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 219 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿತ್ಯ ರಾಜ್ಯದಲ್ಲಿ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿರುವುದು ಜನರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.
ಬೆಂಗಳೂರಿನಲ್ಲಿಂದು 659 ಹೊಸ ಕೊರೊನಾ ಕೇಸ್ ಪತ್ತೆ ಆಗಿದೆ. 5 ಜನರ ಪೈಕಿ ಇಬ್ಬರು ಬೆಂಗಳೂರಿನಲ್ಲೇ ಮೃತಪಟ್ಟಿದ್ದಾರೆ. ರಾಮನಗರದಲ್ಲಿ ಅತಿ ಕಡಿಮೆ ಎಂದರೆ 1 ಕೊರೊನಾ ಕೇಸ್ ಪತ್ತೆ ಆಗಿದೆ. ಇನ್ನು ಭಾರತದಲ್ಲೂ ಸಕ್ರಿಯ ಕೊರೊನಾ ಪ್ರಕರಣ ಇಳಿಮುಖವಾಗಿದೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.95.51ಕ್ಕೆ ಏರಿಕೆಯಾಗಿದ್ದು ಒಂದು ಖುಷಿಯಾದರೆ ಇನ್ನೊಂದು ಕೊರೊನಾ ಸೋಂಕಿತರ ಸಂಖ್ಯೆ 1 ಕೋಟಿ ದಾಟಿದ್ದರೂ ಸಕ್ರಿಯ ಪ್ರಕರಣಗಳು ತೀವ್ರ ಇಳಿಮುಖವಾಗಿದ್ದು ಸಂತಸದ ಸಂಗತಿ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳು 3.05ಲಕ್ಷ; ಚೇತರಿಕೆ ಪ್ರಮಾಣದಲ್ಲಿ ಗಣನೀಯ ಏರಿಕೆ
Published On - 8:30 pm, Sun, 20 December 20