ಜಿಲ್ಲೆಯಲ್ಲಿ ಪ್ರವಾಸಿ ಸ್ಥಳಗಳನ್ನು ಬಂದ್ ಮಾಡಲ್ಲ; ಮೈಸೂರು ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ

ಕೊರೊನಾ ಸೆಕೆಂಡರಿ ಸಂಪರ್ಕ ಹೊಂದಿದವರು ಟೆಸ್ಟಿಂಗ್ ಮಾಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ .ಇದರಿಂದ ಮೈಸೂರಿನಲ್ಲಿ‌ ಕೊರೊನಾ‌ ಹೆಚ್ಚಾಗಿದೆ.

ಜಿಲ್ಲೆಯಲ್ಲಿ ಪ್ರವಾಸಿ ಸ್ಥಳಗಳನ್ನು ಬಂದ್ ಮಾಡಲ್ಲ; ಮೈಸೂರು ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ
ರೋಹಿಣಿ ಸಿಂಧೂರಿ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Apr 03, 2021 | 1:55 PM

ಮೈಸೂರು: ಕೊರೊನಾ ಸೋಂಕು ಹೆಚ್ಚಾಗಿದ್ದರೂ ಮೈಸೂರಿನ ಪ್ರವಾಸಿತಾಣಗಳನ್ನು ಬಂದ್ ಮಾಡುವುದಿಲ್ಲ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಂದಲೂ ಈ ಬಗ್ಗೆ ಸೂಚನೆ ಬಂದಿದೆ. ನಾವು ಪ್ರವಾಸಿ ತಾಣಗಳನ್ನ ಮುಚ್ಚಿದರೆ ಅದನ್ನು ನಂಬಿದವರಿಗೆ ತೊಂದರೆ ಆಗುತ್ತದೆ. ಕಳೆದ ಬಾರಿ ಕೊರೊನಾ ಬಂದಾಗ ಎಲ್ಲವು ಲಾಕ್‌ಡೌನ್‌ ಆಗಿತ್ತು. ಅದರಿಂದ ಸಾಕಷ್ಟು ಜನರಿಗೆ ಆರ್ಥಿಕ ನಷ್ಟ ಉಂಟಾಗಿದೆ. ಈ ಬಾರಿ ಪ್ರವಾಸಿ ತಾಣ ಮುಚ್ಚಿ ಕೊರೊನಾ ಕಂಟ್ರೋಲ್ ಮಾಡುವ ಸ್ಥಿತಿಯಲ್ಲಿ ನಾವಿಲ್ಲ. ಎಲ್ಲವು ಓಪನ್ ಇರುವಾಗಲೇ ನಾವು ಕೊರೊನಾ ನಿಯಂತ್ರಣ ಮಾಡಬೇಕು. ಜನರು ಈ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎಚ್ಚರಿಕೆ ನೀಡಿದ್ದಾರೆ.

ದೇಶ, ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇತ್ತ ಕೊರೊನಾ ಲಸಿಕೆ ವಿತರಣೆ ಪ್ರಕ್ರಿಯೆಗಳೂ ಭರದಿಂದ ಸಾಗುತ್ತದೆ. ಹಾಗಾದರೆ ಕೊರೊನಾ ಲಸಿಕೆ ಪಡೆದರೆ ಕೊರೊನಾ ಸೋಂಕು ತಗಲುವುದಿಲ್ಲವೇ ಎಂಬ ಅನುಮಾನ ಇನ್ನೂ ಹಲವರಿಗಿದೆ. ಈ ಪ್ರಶ್ನೆಗೆ ಹಲವು ತಜ್ಞರು, ಜನಪ್ರತಿನಿಧಿಗಳು ಉತ್ತರಿಸುತ್ತಲೇ ಇದ್ದಾರೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ‌ ಅವರು ಇಂದು ಕೊರೊನಾ ಲಸಿಕೆ ಪಡೆದವರಿಗೆ ಭರವಸೆ ತುಂಬುವ ಪ್ರಯತ್ನ ಮಾಡಿದ್ದಾರೆ.

ಈಗಾಗಲೇ ಕೊರೊನಾ ಲಸಿಕೆಯ ಎರಡು ಡೋಸೆಜ್ ಪಡೆದುಕೊಂಡವರಿಗೂ ತೆಗೆದುಕೊಂಡವರಿಗೂ ಪಾಸಿಟಿವ್ ಬರುವ ಸಾಧ್ಯತೆಯಿದೆ. ಲಸಿಕೆ ಪಡೆದೂ ಪಾಸಿಟಿವ್ ಬಂದರೆ ಅಂತವರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಪಾಸಿಟಿವ್ ಬಂದರೂ ಅಂತಹವರು ಆಸ್ಪತ್ರೆಗೆ ಹೋಗುವಂತಹ ಸಮಸ್ಯೆ ಉಂಟಾಗಿಲ್ಲ. ಜತೆಗೆ, ಎರಡು ಡೋಸೆಜ್ ತೆಗೆದುಕೊಂಡ 15 ದಿನದ ನಂತರ ಕೊರೊನಾ ಪಾಸಿಟಿವ್ ಬಂದ ಉದಾಹರಣೆ ಇಲ್ಲ. ಈ ಬಗ್ಗೆ ಯಾರಿಗು ಗೊಂದಲ ಬೇಡ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ‌ ವಿವರಿಸಿದರು.

ಕೊರೊನಾ ಸೆಕೆಂಡರಿ ಸಂಪರ್ಕ ಹೊಂದಿದವರು ಟೆಸ್ಟಿಂಗ್ ಮಾಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ .ಇದರಿಂದ ಮೈಸೂರಿನಲ್ಲಿ‌ ಕೊರೊನಾ‌ ಹೆಚ್ಚಾಗಿದೆ. ಅದರಲ್ಲೂ ಯುವಕರಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಇಂದು ಕೂಡ ಕೊರೊನಾ ಪಾಸಿಟಿವ್ ಪ್ರಕರಣ 170 ರ ಗಡಿ ದಾಟಿದೆ. ಇದರಲ್ಲಿ ನಗರ ಪ್ರದೇಶದಲ್ಲೆ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಸದ್ಯ ಪ್ರತಿದಿನ 6 ಸಾವಿರ ಜನರಿಗೆ ಕೊರೊನಾ‌ ಪರೀಕ್ಷೆ ಮಾಡಲಾಗುತ್ತಿದೆ. ಸಣ್ಣ ವಯಸ್ಸಿನವರಲ್ಲಿ ನಮಗೆ ಕೊರೊನಾ‌ ಬರಲ್ಲ ಎಂಬ ಅಸಡ್ಡೆ ಇದೆ. ಈ‌ ಕಾರಣದಿಂದ ಯುವಕರಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಅದರಲ್ಲೂ ಬೇರೆ ಕಾಯಿಲೆ ಇರುವವರು ಕೊರೊನಾ‌ ಸೋಂಕು ತಗುಲಿ ಸಾವನ್ನಪ್ಪುತ್ತಿದ್ದಾರೆ. ಪ್ರವಾಸಿ ತಾಣಗಳನ್ನು ಮುಚ್ಚುವ ಪ್ರಸ್ತಾಪವನ್ನು ನಾವು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿಲ್ಲ. ಪ್ರವಾಸಿ ತಾಣಗಳಿಂದಲೆ ಕೊರೊನಾ‌ ಹೆಚ್ಚಾಗುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿವರಿಸಿದರು.‘

ಇದನ್ನೂ ಓದಿ: ಮೈಸೂರು ಜಿಲ್ಲೆಯ ಆರೋಗ್ಯ ಸಿಬ್ಬಂದಿಗೆ ಏಪ್ರಿಲ್ 30ರವರೆಗೆ ಎಲ್ಲಾ ರಜೆ ರದ್ದು; ಕೆಲಸದ ಸ್ಥಳದಲ್ಲೇ ಊಟ, ತಿಂಡಿ

ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್