ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಆಪ್ತ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್​ ನಿಯೋಜನೆ

ನಕುಲ್​ ತಮ್ಮ ಕೆಲಸದ ಮೂಲಕವೇ ಬಳ್ಳಾರಿಯಲ್ಲಿ ಹೆಸರು ಮಾಡಿದ್ದಾರೆ. ಗರ್ಭಿಣಿ ಪತ್ನಿಯನ್ನು ಜಿಲ್ಲಾ ಹೆರಿಗೆ ಆಸ್ಪತ್ರೆಗೆ ದಾಖಲು ಮಾಡಿ ಎಲ್ಲರಿಗೂ ಮಾದರಿ ಆಗಿದ್ದರು. 

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಆಪ್ತ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್​ ನಿಯೋಜನೆ
ಎಸ್​ಎಸ್​ ನಕುಲ್​
Rajesh Duggumane

| Edited By: Ghanashyam D M | ಡಿ.ಎಂ.ಘನಶ್ಯಾಮ

Dec 17, 2020 | 9:26 PM

ಬಳ್ಳಾರಿ: ಕರ್ನಾಟಕ ಕೇಡರ್​ನ ಐಎಎಸ್​ ಅಧಿಕಾರಿ ಎಸ್​ಎಸ್​ ನಕುಲ್​ ಅವರನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರ ಆಪ್ತ ಕಾರ್ಯದರ್ಶಿಯಾಗಿ ನಿಯೋಜನೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಎಸ್​​.ಎಸ್​. ನಕುಲ್​ ಅವರು ಸದ್ಯ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2019ರ ಜೂನ್​ 19ರಂದು ಅವರು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಇದಕ್ಕೂ ಮೊದಲು ಅವರು, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ನಕುಲ್​ ತಮ್ಮ ಕೆಲಸದ ಮೂಲಕವೇ ಬಳ್ಳಾರಿಯಲ್ಲಿ ಹೆಸರು ಮಾಡಿದ್ದಾರೆ. ಗರ್ಭಿಣಿ ಪತ್ನಿಯನ್ನು ಜಿಲ್ಲಾ ಹೆರಿಗೆ ಆಸ್ಪತ್ರೆಗೆ ದಾಖಲು ಮಾಡಿ ಎಲ್ಲರಿಗೂ ಮಾದರಿ ಆಗಿದ್ದರು.

ಎಸ್​ಎಸ್​ ನಕುಲ್​ ಕುಶಾಲನಗರದವರು. ಮೈಸೂರಿನಲ್ಲಿ ಬಿಇ ಪದವಿ ಹೊಂದಿದ್ದರು. 2010ರಲ್ಲಿ ಐಎಎಸ್​ ಪಾಸ್​ ಮಾಡಿದ್ದ ಇವರು, 31 ನೇ ರ್ಯಾಂಕ್​ ಪಡೆದು ಭೇಷ್​ ಎನಿಸಿಕೊಂಡಿದ್ದರು.

ಫೋರ್ಬ್ಸ್ ಶಕ್ತಿಶಾಲಿ ಮಹಿಳಾ ಪಟ್ಟಿಯಲ್ಲಿ 41ನೇ ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್!

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada