ಬಳ್ಳಾರಿ: ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ ಎಸ್ಎಸ್ ನಕುಲ್ ಅವರನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಪ್ತ ಕಾರ್ಯದರ್ಶಿಯಾಗಿ ನಿಯೋಜನೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಎಸ್.ಎಸ್. ನಕುಲ್ ಅವರು ಸದ್ಯ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2019ರ ಜೂನ್ 19ರಂದು ಅವರು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಇದಕ್ಕೂ ಮೊದಲು ಅವರು, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ನಕುಲ್ ತಮ್ಮ ಕೆಲಸದ ಮೂಲಕವೇ ಬಳ್ಳಾರಿಯಲ್ಲಿ ಹೆಸರು ಮಾಡಿದ್ದಾರೆ. ಗರ್ಭಿಣಿ ಪತ್ನಿಯನ್ನು ಜಿಲ್ಲಾ ಹೆರಿಗೆ ಆಸ್ಪತ್ರೆಗೆ ದಾಖಲು ಮಾಡಿ ಎಲ್ಲರಿಗೂ ಮಾದರಿ ಆಗಿದ್ದರು.
New Delhi: Karnataka cadre IAS officer SS Nakul appointed as private secretary to Finance Minister Nirmala Sitharaman.
— ANI (@ANI) December 17, 2020
ಎಸ್ಎಸ್ ನಕುಲ್ ಕುಶಾಲನಗರದವರು. ಮೈಸೂರಿನಲ್ಲಿ ಬಿಇ ಪದವಿ ಹೊಂದಿದ್ದರು. 2010ರಲ್ಲಿ ಐಎಎಸ್ ಪಾಸ್ ಮಾಡಿದ್ದ ಇವರು, 31 ನೇ ರ್ಯಾಂಕ್ ಪಡೆದು ಭೇಷ್ ಎನಿಸಿಕೊಂಡಿದ್ದರು.
ಫೋರ್ಬ್ಸ್ ಶಕ್ತಿಶಾಲಿ ಮಹಿಳಾ ಪಟ್ಟಿಯಲ್ಲಿ 41ನೇ ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್!
Published On - 9:26 pm, Thu, 17 December 20