Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಜಿಲ್ಲೆಯ ಆರೋಗ್ಯ ವ್ಯವಸ್ಥೆಗೆ ಸೋಮವಾರವೇ 10 ಕೋಟಿ ರೂಪಾಯಿ ಮಂಜೂರು: ಡಿಸಿಎಂ ಅಶ್ವತ್ಥ್ ನಾರಾಯಣ

ಹೊಸದಾಗಿ‌ 3 ಕೋಟಿ‌ ಡೋಸ್​ ಲಸಿಕೆ ಖರೀದಿಗೆ ಕ್ರಮ‌ ಕೈಗೊಳ್ಳಲಾಗಿದೆ. ಇನ್ನೂ 2 ಕೋಟಿ ಡೋಸ್ ಖರೀದಿಗೆ ಟೆಂಡರ್ ಕರೆದಿದ್ದೇವೆ. 2 ಕೋಟಿ ಡೋಸ್​ ಖರೀದಿಗೆ ಗ್ಲೋಬಲ್​ ಟೆಂಡರ್​ ಕರೆಯಲಾಗಿದೆ.

ಹಾಸನ ಜಿಲ್ಲೆಯ ಆರೋಗ್ಯ ವ್ಯವಸ್ಥೆಗೆ ಸೋಮವಾರವೇ 10 ಕೋಟಿ ರೂಪಾಯಿ ಮಂಜೂರು: ಡಿಸಿಎಂ ಅಶ್ವತ್ಥ್ ನಾರಾಯಣ
ಉಪ ಮುಖ್ಯಮಂತ್ರಿ, ಡಾ. ಸಿ.ಎನ್ ಅಶ್ವತ್ಥ್ ನಾರಾಯಣ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Aug 21, 2021 | 10:03 AM

ಹಾಸನ: ಜಿಲ್ಲೆಯ ಸಮಸ್ಯೆಗಳ ಬಗ್ಗೆ ದೇವೇಗೌಡರು ತಿಳಿಸಿದ್ದರು. ಸ್ಥಳೀಯ ಶಾಸಕರು ಆಕ್ಸಿಜನ್ ಸಮಸ್ಯೆ​​ ಬಗ್ಗೆ ಗಮನ ಸೆಳೆದಿದ್ದರು. ಹಾಸನ ಜಿಲ್ಲೆಗೆ ಶೀಘ್ರದಲ್ಲೇ 50 ವೆಂಟಿಲೇಟರ್​ಗಳ ವ್ಯವಸ್ಥೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಅಶ್ವತ್ಥ್​ ನಾರಾಯಣ ಹೇಳಿದ್ದಾರೆ. ಹಾಸನದಲ್ಲಿ ಲಭ್ಯವಿರುವ ವೆಂಟಿಲೇಟರ್​ಗಳ ಬಗ್ಗೆ ಮಾಹಿತಿಯನ್ನೂ ಅವರು ನೀಡಿದ್ದಾರೆ.

ಹಾಸನ ವೈದ್ಯಕೀಯ ಕಾಲೇಜಿನಲ್ಲಿ 70 ವೆಂಟಿಲೇಟರ್ ಇವೆ. ಆರೋಗ್ಯ ಸಚಿವರು ಹೇಳಿದಂತೆ 50 ವೆಂಟಿಲೇಟರ್ ಕೊಡುತ್ತೇವೆ. ಹಾಸನ ಜಿಲ್ಲೆಗೆ 10 ಕೋಟಿ ಮಂಜೂರು ಮಾಡುವ ವ್ಯವಸ್ಥೆ ಮಾಡುತ್ತೇವೆ. ಸೋಮವಾರ 10 ಕೋಟಿ ಹಣ ಮಂಜೂರು ಮಾಡುತ್ತೇವೆ. ಹಾಸನ ಜಿಲ್ಲೆಗೆ ಎಷ್ಟು ಬೇಕಿದ್ದರೂ ಔಷಧ ಪೂರೈಸುತ್ತೇವೆ ಎಂದು ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

2ನೇ ಅಲೆ ಆರಂಭದಲ್ಲಿ ಆಕ್ಸಿಜನ್ ಭಾರಿ ಪ್ರಮಾಣದಲ್ಲಿ ಬಳಕೆಯಾಗಿದೆ. ಹಾಗಾಗಿ ನಮಗೆ ಆಕ್ಸಿಜನ್​​ ನಿರ್ವಹಣೆ ದೊಡ್ಡ ಸವಾಲಾಗಿತ್ತು. ಆದರೂ ಅದನ್ನ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ಚಾಮರಾಜನಗರ ಜಿಲ್ಲಾ ಆಸ್ಪತ್ರೆ ಘಟನೆಯೊಂದನ್ನು ಹೊರತುಪಡಿಸಿ, ಯಾವುದೇ ಖಾಸಗಿ ಆಸ್ಪತ್ರೆಗಳಿಗೂ ಸಮಸ್ಯೆ ಆಗದಂತೆ ಕ್ರಮ ಕೈಗೊಂಡಿದ್ದೇವೆ ಎಂದು ಹಾಸನದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥ್​ ನಾರಾಯಣ ಮಾತನಾಡಿದ್ದಾರೆ.

ಲಸಿಕೆ ಖರೀದಿಗೆ ಕ್ರಮ ಹೊಸದಾಗಿ‌ 3 ಕೋಟಿ‌ ಡೋಸ್​ ಲಸಿಕೆ ಖರೀದಿಗೆ ಕ್ರಮ‌ ಕೈಗೊಳ್ಳಲಾಗಿದೆ. ಇನ್ನೂ 2 ಕೋಟಿ ಡೋಸ್ ಖರೀದಿಗೆ ಟೆಂಡರ್ ಕರೆದಿದ್ದೇವೆ. 2 ಕೋಟಿ ಡೋಸ್​ ಖರೀದಿಗೆ ಗ್ಲೋಬಲ್​ ಟೆಂಡರ್​ ಕರೆಯಲಾಗಿದೆ ಎಂದು ಹಾಸನದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥ್​ ನಾರಾಯಣ ಮಾಹಿತಿ ನೀಡಿದ್ದಾರೆ.

ಖಾಸಗಿಯಾಗಿಯೂ ಲಸಿಕೆ ಖರೀದಿಸುವ ಪ್ರಯತ್ನ ನಡೆದಿದೆ. ಒಂದೂವರೆ ಕೋಟಿ ಡೋಸ್ ಲಸಿಕೆ ಖರೀದಿಗೆ ಪ್ರಯತ್ನ ಮಾಡಿದ್ದೇವೆ. ಸದ್ಯ ಆರೋಗ್ಯಕ್ಕೆ ನಮ್ಮ ಮೊದಲ ಆದ್ಯತೆ. ಎಲ್ಲೆಡೆ ಸಿಬ್ಬಂದಿ, ಸೌಲಭ್ಯ, ಆಕ್ಸಿಜನ್ ಸಿಗುವಂತೆ ವ್ಯವಸ್ಥೆ ಮಾಡುತ್ತೇವೆ ಎಂದು ಡಿಸಿಎಂ ಡಾ.ಅಶ್ವತ್ಥ್​​ ನಾರಾಯಣ ಹೇಳಿದ್ದಾರೆ.

ಹಾಸನದಲ್ಲಿ ಇಂದು 1,933 ಜನರಿಗೆ ಸೋಂಕು ಹಾಸನ ಜಿಲ್ಲೆಯಲ್ಲಿ ಇಂದು 1,933 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಹಾಸನ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 72,242ಕ್ಕೆ ಏರಿಕೆಯಾಗಿದೆ. 72,242 ಸೋಂಕಿತರ ಪೈಕಿ 56,865 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಹಾಸನ ಜಿಲ್ಲೆಯಲ್ಲಿ 14,372 ಜನರಲ್ಲಿ ಸೋಂಕು ಸಕ್ರಿಯವಾಗಿದೆ. ಜಿಲ್ಲೆಯಲ್ಲಿ ಇಂದು ಕೊರೊನಾಗೆ 14 ಜನರ ಬಲಿಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ 905 ಜನರ ಸಾವು ಸಂಭವಿಸಿದೆ.

ಇದನ್ನೂ ಓದಿ: Corona Vaccine: ಕೊರೊನಾ ಲಸಿಕೆಯನ್ನು ಕೈಗೆ ಏಕೆ ನೀಡಲಾಗುತ್ತದೆ? ಸೊಂಟಕ್ಕೆ ಏಕಿಲ್ಲ? ಇಲ್ಲಿದೆ ಸಂಪೂರ್ಣ ವಿವರ

ಕೊರೊನಾದಿಂದ ಪತಿ ನಿಧನ; ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು

Published On - 7:07 pm, Sat, 22 May 21

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ