AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಭಾವನೆ, ಧ್ವನಿಗೆ ಶಕ್ತಿಯಾದ ವಾಹಿನಿ ಟಿವಿ 9: ಸಚಿವ ಅಶ್ವತ್ಥ ನಾರಾಯಣ್

ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ, ಅವರ ಸಾಧನೆಗೆ ಮನ್ನಣೆ ನೀಡುವ ಕಾರ್ಯವನ್ನು ಟಿವಿ 9 ಮಾಡುತ್ತಿದೆ. ಸಾಧಕರ ಸಾಧನೆಗೆ ಮೆಚ್ಚುಗೆಯನ್ನು, ಗೌರವನ್ನು ನೀಡಬೇಕು ಎಂಬ ಏಕೈಕ ಉದ್ದೇಶದಿಂದ ಈ ನವನಕ್ಷತ್ರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.

ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಭಾವನೆ, ಧ್ವನಿಗೆ ಶಕ್ತಿಯಾದ ವಾಹಿನಿ ಟಿವಿ 9: ಸಚಿವ ಅಶ್ವತ್ಥ ನಾರಾಯಣ್
ಡಿಸಿಎಂ ಅಶ್ವತ್ಥ ನಾರಾಯಣ್​
TV9 Web
| Updated By: Lakshmi Hegde|

Updated on:Jan 05, 2022 | 7:33 AM

Share

ಟಿವಿ 9 ಸುದ್ದಿ ದೃಶ್ಯ ಮಾಧ್ಯಮ ಇಂದು ವ್ಯಾಪಕವಾಗಿ ಬೆಳೆದು ಮನೆಮನೆಗೂ ತಲುಪಿದೆ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಅವರು ಹೇಳಿದರು. ಟಿವಿ 9, ದೃಶ್ಯ ಸುದ್ದಿ ಮಾಧ್ಯಮ ಪ್ರಾರಂಭವಾಗಿ 15 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಾಹಿನಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನವನಕ್ಷತ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಟಿವಿ9 ಕಾರ್ಯವನ್ನು ಶ್ಲಾಘಿಸಿದರು.

ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ, ಅವರ ಸಾಧನೆಗೆ ಮನ್ನಣೆ ನೀಡುವ ಕಾರ್ಯವನ್ನು ಟಿವಿ 9 ಮಾಡುತ್ತಿದೆ. ಸಾಧಕರ ಸಾಧನೆಗೆ ಮೆಚ್ಚುಗೆಯನ್ನು, ಗೌರವನ್ನು ನೀಡಬೇಕು ಎಂಬ ಏಕೈಕ ಉದ್ದೇಶದಿಂದ ಈ ನವನಕ್ಷತ್ರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಟಿವಿ9 ಸಂಸ್ಥೆಯವರು ಹೇಗೆ ಬೆಳೆದರೋ, ಹಾಗೇ, ಇನ್ನೊಂದು ಕ್ಷೇತ್ರದಲ್ಲಿ ಅವರಂತೆ ಬೆಳೆದು ಸಾಧನೆ ಮಾಡಿದವರನ್ನು, ಸಮಾಜಕ್ಕೆ ಪೂರಕವಾಗಿ ಕೆಲಸ ಮಾಡಿದವರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡುತ್ತಿರುವುದು ನಿಜಕ್ಕೂ ಒಳ್ಳೆಯ ಕೆಲಸ ಎಂದು ಶ್ಲಾಘಿಸಿದರು. ಒಳ್ಳೆಯ ಕೆಲಸ, ಸಾಧನೆ ಮಾಡಿದವರನ್ನು ಬೆನ್ನು ತಟ್ಟುವಂಥ ಕೆಲಸ ಮಾಡಿದಾಗ ಸಮಾಜದಲ್ಲಿ ಒಂದು ಸಂಚಲನ ಮೂಡಿಸಿದಂತಾಗುತ್ತದೆ. ಅಂತೆಯೇ ಈ ನವನಕ್ಷತ್ರ ಕಾರ್ಯಕ್ರಮ ನಮ್ಮ ಸಮಾಜದಲ್ಲಿ ಒಂದು ಸಂಚಲನ ಮೂಡಿಸುತ್ತದೆ ಎಂದು ಅಶ್ವತ್ಥ ನಾರಾಯಣ್ ಹೇಳಿದರು.

ಸರ್ಕಾರಗಳ ಮೂಲಕ, ಕಾರ್ಯಾಂಗ, ನ್ಯಾಯಾಂಗಗಳ ಮೂಲಕ ಹಲವು ಹಂತದ ಕಾರ್ಯಗಳು ಆಗುತ್ತಿರುತ್ತವೆ. ಇವೆಲ್ಲವುಗಳ ಮಧ್ಯೆ ಸಾಕಷ್ಟು ಸವಾಲುಗಳು, ಸುಧಾರಣೆಗಳು, ಗೊಂದಲಗಳು ಉಂಟಾಗುತ್ತವೆ. ಇವುಗಳನ್ನು ಬಹಳಷ್ಟು ಪರಿಣಾಮಕಾರಿಯಾಗಿ ಪ್ರತಿಯೊಬ್ಬ ವ್ಯಕ್ತಿಗೂ ತಲುಪಿಸುವ ಕೆಲಸವನ್ನು ಟಿವಿ 9 ಅತ್ಯುತ್ತಮವಾಗಿ ಮಾಡುತ್ತಿದೆ. ನಮ್ಮ ಸಮಾಜದ ಪ್ರತಿಯೊಬ್ಬ ವ್ಯಕ್ತಿಯ, ಜನರ ಭಾವನೆ ಮತ್ತು ಧ್ವನಿಗೆ ಶಕ್ತಿಯನ್ನು ಕೊಟ್ಟು, ಪ್ರಜಾಪ್ರಭುತ್ವವನ್ನು ಬಹಳ ಉತ್ತಮವಾಗಿ ಬೆಳೆಯಲು ಮೂಲ ಕಾರಣವಾಗಿದ್ದು ಟಿವಿ 9. ಹೀಗಿರುವ ಟಿವಿ 9 ಬಗ್ಗೆ ನಮಗೆ ನಿಜಕ್ಕೂ ಹೆಮ್ಮೆಯಿದೆ. ಇದರ ಸಾಧನೆ ಮತ್ತು ಕಾರ್ಯ ಇನ್ನೂ ಹೆಚ್ಚಿನ ರೀತಿಯಲ್ಲಿ, ಪ್ರಜಾಪ್ರಭುತ್ವಕ್ಕೆ ಪೂರಕವಾಗಿ ಮುನ್ನಡೆಯಲಿ ಎಂದು ಅಶ್ವತ್ಥ್ ನಾರಾಯಣ್ ಹಾರೈಸಿದರು.

ಇದನ್ನೂ ಓದಿ: Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ

Published On - 5:09 pm, Tue, 4 January 22

‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?