ಮಲ್ಲೇಶ್ವರ ಐತಿಹಾಸಿಕ ಕಲ್ಲುಕಟ್ಟಡ ಜೀರ್ಣೋದ್ಧಾರ: ಪರಿಶೀಲನೆ ನಡೆಸಿದ ಡಿಸಿಎಂ ಅಶ್ವತ್ಥನಾರಾಯಣ

ಮಾಧ್ಯಮಗಳ ಜತೆ ಮಾತನಾಡಿದ ಡಾ.ಅಶ್ವತ್ಥನಾರಾಯಣ, ಈ ಕಟ್ಟಡ ಬೆಂಗಳೂರು ಮಾತ್ರವಲ್ಲದೆ ಇಡೀ ನಾಡಿನ ಹೆಮ್ಮೆ. ಇದೊಂದು ಅಪರೂಪದ, ಸಂರಕ್ಷಣೆ ಮಾಡಿಕೊಳ್ಳಲೇಬೇಕಾದ ಕಟ್ಟಡ. ಇದನ್ನು ಸಂರಕ್ಷಣೆ ಮಾಡಿ ಜೀರ್ಣೋದ್ಧಾರ ಮಾಡಲು ಜೈನ್ ಶಿಕ್ಷಣ ಸಂಸ್ಥೆ ಮುಂದೆ ಬಂದಿರುವುದು ಸಂತಸದ ಸಂಗತಿ ಎಂದು ತಿಳಿಸಿದರು.

ಮಲ್ಲೇಶ್ವರ ಐತಿಹಾಸಿಕ ಕಲ್ಲುಕಟ್ಟಡ ಜೀರ್ಣೋದ್ಧಾರ: ಪರಿಶೀಲನೆ ನಡೆಸಿದ ಡಿಸಿಎಂ ಅಶ್ವತ್ಥನಾರಾಯಣ
ಪರಿಶೀಲನೆ ನಡೆಸಿದ ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ಮಲ್ಲೇಶ್ವರ 18ನೇ ಅಡ್ಡರಸ್ತೆಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ಐತಿಹಾಸಿಕ ಕಲ್ಲು ಕಟ್ಟಡ ನವೀಕರಣ ಸಂಬಂಧ ಕ್ಷೇತ್ರದ ಶಾಸಕರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶನಿವಾರ ಪರಿಶೀಲನೆ ನಡೆಸಿದರು. ತಮ್ಮ ಕೋರಿಕೆಯ ಮೇಲೆ ಕಟ್ಟಡದ ನವೀಕರಣ ಮಾಡಲು ಮುಂದೆ ಬಂದಿರುವ ಜೈನ್ ಶಿಕ್ಷಣ ಸಮೂಹದ ಅಧ್ಯಕ್ಷ ಚೆನ್​ರಾಜ್​ ರಾಯ್ಚಂದ್ ಹಾಗೂ ಸಂಸ್ಥೆಯ ಇತರೆ ಪ್ರತಿನಿಧಿಗಳು, ತಜ್ಞರು ಡಿಸಿಎಂ ಜತೆಯಲ್ಲಿದ್ದರು. ಈ ವೇಳೆ ಕಟ್ಟಡವನ್ನು ಯಾವ ರೀತಿಯಲ್ಲಿ ಅಭಿವೃದ್ಧಿಪಡಿಸಬಹುದು ಎನ್ನುವ ಬಗ್ಗೆ ಡಿಸಿಎಂ ಚರ್ಚೆ ನಡೆಸಿದರು.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಾ.ಅಶ್ವತ್ಥನಾರಾಯಣ, ಈ ಕಟ್ಟಡ ಬೆಂಗಳೂರು ಮಾತ್ರವಲ್ಲದೆ ಇಡೀ ನಾಡಿನ ಹೆಮ್ಮೆ. ಇದೊಂದು ಅಪರೂಪದ, ಸಂರಕ್ಷಣೆ ಮಾಡಿಕೊಳ್ಳಲೇಬೇಕಾದ ಕಟ್ಟಡ. ಇದನ್ನು ಸಂರಕ್ಷಣೆ ಮಾಡಿ ಜೀರ್ಣೋದ್ಧಾರ ಮಾಡಲು ಜೈನ್ ಶಿಕ್ಷಣ ಸಂಸ್ಥೆ ಮುಂದೆ ಬಂದಿರುವುದು ಸಂತಸದ ಸಂಗತಿ ಎಂದು ತಿಳಿಸಿದರು.

ಕೆಲ ದಿನಗಳ ಹಿಂದೆ ಜೈನ್ ಸಂಸ್ಥೆಯ 30ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆ. ಆ ಸಂದರ್ಭದಲ್ಲಿ ಈ ಕಟ್ಟಡವೂ ಸೇರಿ ಹಾಗೂ ರೇಸ್​ಕೋರ್ಸ್​ ರಸ್ತೆಯಲ್ಲಿರುವ ಕಲ್ಲು ಕಟ್ಟಡದ ಅಭಿವೃದ್ಧಿ ಮಾಡಿಕೊಡುವಂತೆ ಕೋರಿಕೆ ಸಲ್ಲಿಸಿದೆ. ಸಂಸ್ಥೆಯ ಅಧ್ಯಕ್ಷರು ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಿದರಲ್ಲದೆ, ಇವತ್ತು ಕಟ್ಟಡ ವೀಕ್ಷಿಸಲು ಬಂದಿದ್ದಾರೆ ಎಂದು ಡಿಸಿಎಂ ಹೇಳಿದರು.

ಇನ್ನೂ ನೂರಾರು ವರ್ಷ ಈ ಐತಿಹಾಸಿಕ ಕಟ್ಟಡವನ್ನು ಉಳಿಸಿಕೊಳ್ಳಬೇಕಾಗಿದೆ. ಇದು ನಮ್ಮ ಪರಂಪರೆಯ ಹೆಗ್ಗುರುತು. ಇಡೀ ಕಟ್ಟಡವನ್ನು ಜೈನ್ ಸಮೂಹ ತಮ್ಮ ಸ್ವಂತ ವೆಚ್ಚದಲ್ಲಿ ಅಭಿವೃದ್ಧಿಪಡಿಸುತ್ತಿದೆ. ಜೊತೆಗೆ ಇದೇ ರೀತಿ ಮತ್ತೊಂದು ಕಟ್ಟಡ ಆಗಿರುವ ರೇಸ್​ಕೋರ್ಸ್ ರಸ್ತೆಯ ಆರ್.ಸಿ.ಕಾಲೇಜು ಕಲ್ಲು ಕಟ್ಟಡವನ್ನು ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಲಾಗಿದೆ. ಅದಕ್ಕೂ ಜೈನ್ ಸಮೂಹ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಡಿಸಿಎಂ ಅಭಿಪ್ರಾಯಪಟ್ಟರು.

ರೀಬಿಲ್ಡ್ ಎನ್ನುವ ಸಂಸ್ಥೆ ಈಗ ಯಾವ ರೀತಿ ಈ ಕಟ್ಟಡವನ್ನು ರಕ್ಷಿಸಬೇಕು ಮತ್ತು ಅಭಿವೃದ್ಧಿಪಡಿಸಬೇಕು ಎಂದು ಪರಿಶೀಲನೆ ಮಾಡುತ್ತಿದೆ. ಈ ಕ್ಷೇತ್ರದಲ್ಲಿ ಆ ಸಂಸ್ಥೆ ಬಹಳಷ್ಟು ಪರಿಣಿತಿ ಹೊಂದಿದೆ. ಈಗಾಗಲೇ 13ನೇ ಕ್ರಾಸ್​ನಲ್ಲಿ ಇದೇ ರೀತಿಯ ಪಾರಂಪರಿಕ ಕಟ್ಟಡವನ್ನೂ ಅಭಿವೃದ್ಧಿಪಡಿಸಲಾಗುತ್ತಿದೆ. ಯಶಸ್ವಿನಿ ಎಂಬ ಆರ್ಕಿಟೆಕ್ಟ್ ಇದ್ದಾರೆ. ಅವರು ಈ ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ ಅಂತ ಅಶ್ವತ್ಥನಾರಾಯಣ ತಿಳಿಸಿದರು.

ಇದನ್ನೂ ಓದಿ

ರಾಯಚೂರಿನ ರಿಮ್ಸ್ ವೈದ್ಯರ ಮೇಲೆ ಹಲ್ಲೆ ಖಂಡಿಸಿ ಧರಣಿ; ಚಿಕಿತ್ಸೆಗೆ ರೋಗಿಗಳ ಪರದಾಟ

ಕೋಡಿಹಳ್ಳಿ ವಿರುದ್ದ ತಿರುಗಿ ಬಿದ್ದ ಸಾರಿಗೆ ನೌಕರರು: ಇನ್ನು ಮುಂದೆ ಮುಷ್ಕರ ಮಾಡೋದಿಲ್ಲ ಎಂದು ಸ್ಪಷ್ಟನೆ

(DCM Ashwaththa Narayana inspects the historic stone building of malleshwaram)