AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ವಿಸ್ತೃತ ಪೀಠಕ್ಕೆ ವಿಚಾರಣೆ ವರ್ಗಾವಣೆ

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​ಗೆ ಸಂಬಂಧಿಸಿದಂತೆ ಶಾಸಕ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿರುವ ರಿಟ್ ಅರ್ಜಿ  ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠದಿಂದ ಶುಕ್ರವಾರ ಆದೇಶ ಹೊರಡಿಸಲಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ವಿಸ್ತೃತ ಪೀಠಕ್ಕೆ ವಿಚಾರಣೆ ವರ್ಗಾವಣೆ
ಡಿಸಿಎಂ ಡಿ.ಕೆ.ಶಿವಕುಮಾರ್
ರಮೇಶ್​ ಎಮ್​.
| Edited By: |

Updated on:Jan 05, 2024 | 6:04 PM

Share

ಬೆಂಗಳೂರು, ಜನವರಿ 05: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​ಗೆ ಸಂಬಂಧಿಸಿದಂತೆ ಶಾಸಕ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿರುವ ರಿಟ್ ಅರ್ಜಿ  ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠದಿಂದ ಶುಕ್ರವಾರ ಆದೇಶ ಹೊರಡಿಸಲಾಗಿದೆ. ಜೊತೆಗೆ ಸಿಬಿಐ ಅರ್ಜಿ ಸಂಬಂಧ ಡಿಕೆ ಶಿವಕುಮಾರ್​ಗೆ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿಗಳಿಗೆ ಸೂಕ್ತವೆನಿಸಿದ ವಿಸ್ತೃತ ಪೀಠ ರಚಿಸಬಹುದು. ಯುದ್ಧೋಪಾದಿಯಲ್ಲಿ ಪ್ರಕರಣದ ವಿಚಾರಣೆಗೆ ವಕೀಲರ ಮನವಿ ಮಾಡಿದ್ದು, ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ಹಿಂಪಡೆದಿರುವುದನ್ನು ಪ್ರಶ್ನಿಸಲಾಗಿದೆ. ಬಹಳ ಪ್ರಮುಖವಾಗಿರುವ ಅಂಶಗಳನ್ನು ವಕೀಲರು ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​ ವಿರುದ್ಧ ಆಸ್ತಿ ಗಳಿಕೆ ಕೇಸ್​: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಿಬಿಐ ಅರ್ಜಿ

ಕೋಲ್ಕತ್ತಾ ಹೈಕೋರ್ಟ್, ಸುಪ್ರೀಂಕೋರ್ಟ್​ನ ತೀರ್ಪುಗಳನ್ನು ಉಲ್ಲೇಖಿಸಿದ್ದಾರೆ. ಅಡ್ವೊಕೇಟ್ ಜನರಲ್ ಸಿಬಿಐ ಹಾಗೂ ಶಾಸಕ ಯತ್ನಾಳ್ ವಾದ ವಿರೋಧಿಸಿದ್ದಾರೆ. ಸಮ್ಮತಿ ನೀಡಿದ ನಂತರ ಹಿಂಪಡೆಯುವಂತಿಲ್ಲವೆಂದು ಸಿಬಿಐ ವಾದ ಮಂಡಿಸಿದೆ. ಎರಡೂ ಕಡೆ ವಾದ ಕೇಳಿದ ನಂತರ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.

ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಕೂಡ ಅರ್ಜಿ ಸಲ್ಲಿಸಿದೆ. ಸಿಬಿಐಗೆ ನೀಡಿದ ಸಮ್ಮತಿ ಹಿಂಪಡೆಯಲು ಸರ್ಕಾರಕ್ಕೆ ಅಧಿಕಾರವಿದೆಯೇ? ಪೂರ್ವಾನ್ವಯವಾಗಿ ತನಿಖೆಗೆ ನೀಡಿದ ಸಮ್ಮತಿ ಹಿಂಪಡೆಯಬಹುದೇ ಎಂದು ಸರ್ಕಾರಕ್ಕೆ ನ್ಯಾ.ಕೃಷ್ಣ ದೀಕ್ಷಿತ್​ರಿದ್ದ ಪೀಠ ಪ್ರಶ್ನೆ ಮಾಡಿತ್ತು. ಸರ್ಕಾರದ ನಿರ್ಧಾರವನ್ನು ಸಿಬಿಐ ಪ್ರಶ್ನಿಸುವಂತಿಲ್ಲ. ಸರ್ಕಾರದ ಕ್ರಮದಿಂದ ಸಿಬಿಐ ಬಾದಿತವಾಗಿಲ್ಲವೆಂದು ವಾದ ಮಂಡಿಸಲಾಗಿದೆ.

ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್ ಹೂಡಿಕೆ ವಿವರ ಕೇಳಿ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್

ರಾಜ್ಯದಲ್ಲಿ ಈ ರೀತಿಯ ಮೊದಲ ಪ್ರಕರಣವಿದು. ಹಿಂದಿನ ಸರ್ಕಾರ ನೀಡಿದ ಸಮ್ಮತಿಯನ್ನು ಹೊಸ ಸರ್ಕಾರ ಹಿಂಪಡೆಯಬಹುದೇ? ಸರ್ಕಾರದ ನಿರಂತರತೆಯ ಬಗ್ಗೆಯೂ ಉತ್ತರಿಸಬೇಕಿದೆ. ಗಂಭೀರ ವಿಚಾರವಾಗಿರುವುದರಿಂದ ವಿಸ್ತೃತ ಪೀಠಕ್ಕೆ ಕೇಸ್ ವರ್ಗಾಯಿಸುವ ಇಂಗಿತವನ್ನು ಹೈಕೋರ್ಟ್ ವ್ಯಕ್ತಪಡಿಸಿತ್ತು.

ರಾಜಕೀಯ ನಡಿತಾ ಇದೆ, ಏನೂ ಮಾಡಲು ಆಗಲ್ಲ ಎಂದ ಡಿಕೆ ಶಿವಕುಮಾರ್

ಹೈಕೋರ್ಟ್​​ಗೆ ಸಿಬಿಐ ಅರ್ಜಿ ಸಲ್ಲಿಕೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ರಾಜಕೀಯ ನಡಿತಾ ಇದೆ, ಏನೂ ಮಾಡಲು ಆಗಲ್ಲ. ಕೆಲವು ಅಧಿಕಾರಿಗಳು ರಾಜಕೀಯ ಮಾಡುತ್ತಿದ್ದಾರೆ. ನಾನು ನಂಬಿದ ದೇವರು, ನ್ಯಾಯ ಇದೆ. ಕಾಲ ಚಕ್ರ ತಿರುಗುತ್ತಿರುತ್ತದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:57 pm, Fri, 5 January 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ