ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ದೂರವಾಣಿ ಕರೆ, ಕುಂದುಕೊರತೆ ವಿಚಾರಣೆ

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜೊತೆ ದೂರವಾಣಿ ಮೂಲಕ ಕುಂದುಕೊರತೆಗಳನ್ನು ಆಲಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಮಸ್ಯೆ ಇತ್ಯರ್ಥಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಬಗ್ಗೆ ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ದೂರವಾಣಿ ಕರೆ, ಕುಂದುಕೊರತೆ ವಿಚಾರಣೆ
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ದೂರವಾಣಿ ಕರೆ
Follow us
Anil Kalkere
| Updated By: Rakesh Nayak Manchi

Updated on: Nov 06, 2023 | 6:57 PM

ಬೆಂಗಳೂರು, ನ.6: ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದರೂ ಅದರ ಲಾಭ ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿವೆ. ಈ ನಡುವೆ ಫಲಾನುಭವಿಗಳಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar), ಕುಂದುಕೊರತೆಗಳನ್ನು ವಿಚಾರಿಸಿದರು.

ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಫಲಾನುಭವಿಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಅರ್ಹ ಫಲಾನುಭವಿ ಒಬ್ಬರಿಗೆ ಗ್ಯಾರಂಟಿ ಯೋಜನೆ ಲಾಭ ಸಿಗದ ಹಿನ್ನೆಲೆ ಸಮಸ್ಯೆ ಇತ್ಯರ್ಥಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ನಾನು ಯಾವುದಕ್ಕೂ ಅರ್ಜೆಂಟ್​ನಲ್ಲಿ ಇಲ್ಲ: ಸಿಎಂ ಸ್ಥಾನದ ಬಗ್ಗೆ ಮಾರ್ಮಿಕವಾಗಿ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್​​

ಈ ಕುರಿತು ಟ್ವಿಟರ್‌ನಲ್ಲಿ ಡಿ.ಕೆ.ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಕುಂದುಕೊರತೆಗಳನ್ನು ವಿಚಾರಿಸುವ ಸಲುವಾಗಿ ಇಂದು ಫಲಾನುಭವಿಗಳಿಗೆ ಕರೆಮಾಡಿ ನೇರವಾಗಿ ಮಾತನಾಡಿದೆ. ಯೋಜನೆ ಸಿಗದ ಫಲಾನುಭವಿಯೊಬ್ಬರ ಸಮಸ್ಯೆ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ