ಯಾರಿಗೆ ಯಾವ ರೀತಿ ಉತ್ತರ ಕೊಡಬೇಕೋ ಕೊಡುತ್ತೇನೆ: ಕೋರ್ಟ್ ಮೆಟ್ಟಿಲೇರಿದ ಯತ್ನಾಳ್​ಗೆ ಡಿಕೆ ಶಿವಕುಮಾರ್​ ಟಾಂಗ್

ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ವಾಪಸ್ ಪಡೆದ ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಟಾಂಗ್ ಕೊಟ್ಟ ಡಿಕೆ ಶಿವಕುಮಾರ್, ಯಾವಾಗ ಹೇಗೆ ಉತ್ತರ ಕೊಡಬೇಕೋ ಕೊಡುತ್ತೇನೆ ಎಂದಿದ್ದಾರೆ.

ಯಾರಿಗೆ ಯಾವ ರೀತಿ ಉತ್ತರ ಕೊಡಬೇಕೋ ಕೊಡುತ್ತೇನೆ: ಕೋರ್ಟ್ ಮೆಟ್ಟಿಲೇರಿದ ಯತ್ನಾಳ್​ಗೆ ಡಿಕೆ ಶಿವಕುಮಾರ್​ ಟಾಂಗ್
ಡಿಕೆ ಶಿವಕುಮಾರ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್
Follow us
ಬಿ ಮೂರ್ತಿ, ನೆಲಮಂಗಲ
| Updated By: Rakesh Nayak Manchi

Updated on: Nov 28, 2023 | 9:09 PM

ನೆಲಮಂಗಲ, ನ.28: ಯಾರಿಗೆ ಯಾವ ರೀತಿ ಉತ್ತರ ಕೊಡಬೇಕೋ ಕೊಡುತ್ತೇನೆ ಎಂದು ಹೇಳುವ ಮೂಲಕ ತನ್ನ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ (Basangouda Patil Yatnal) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಟಾಂಗ್ ಕೊಟ್ಟರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಅವರು ಮಾತನಾಡಿದರು.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಸರ್ಕಾರ ಅನುಮತಿ ನೀಡಿತ್ತು. ಇದನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಅನುಮತಿಯನ್ನು ಹಿಂಡೆಯುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ: ಶಿವಕುಮಾರ್ ಅಕ್ರಮ ಆದಾಯ ಪ್ರಕರಣದಲ್ಲಿ ನಮ್ಮ ಸರ್ಕಾರದ ನಿರ್ಧಾರ ನ್ಯಾಯಾಲಯದಲ್ಲಿ ಪ್ರಶ್ನಿಸಲು ಯತ್ನಾಳ್ ಸ್ವತಂತ್ರರು: ಸಿದ್ದರಾಮಯ್ಯ

ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಕೋರ್ಟ್​ಗೆ ಹೋಗುವುದಾಗಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು. ಇಂದು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸುವ ಮೂಲಕ ಯತ್ನಾಳ್ ನುಡಿದಂತೆ ನಡೆದರು. ವಿಚಾರಣೆಗೆ ಬಾಕಿ ಇರುವಾಗ ಮೇಲ್ಮನವಿಯಲ್ಲೇ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದ್ದು, ಹೈಕೋರ್ಟ್ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಅಲ್ಲದೆ, ಸಿಬಿಐ ತನಿಖೆ‌ ಬಹುತೇಕ ಮುಕ್ತಾಯದ ಹಂತದಲ್ಲಿದೆ‌. ಈ ಹಂತದಲ್ಲಿ ಸರ್ಕಾರದ ಕ್ರಮ ಕಾನೂನುಬಾಹಿರವಾಗಿದ್ದು, ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪದ ಯತ್ನ ನಡೆದಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದ ಆಲಿಸಲು ಯತ್ನಾಳ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಯುವ ನಿಧಿ ಪ್ರಚಾರಕ್ಕೆ ಅಂತರ್ಜಾಲದಿಂದ ಯುವಕನ ಫೋಟೋ ಬಳಕೆ: ಯತ್ನಾಳ್ ಕಿಡಿ

ಇನ್ನೊಂದೆಡೆ, ಸಂಪುಟದ ನಡೆಯನ್ನು ಖಂಡಿಸಿದ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಸಿದ್ದರಾಮಯ್ಯರನ್ನೂ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಈ ನಿರ್ಧಾರ ಸಿದ್ದರಾಮಯ್ಯ ಅವರ ಆಡಳಿತಕ್ಕೆ ಕಪ್ಪು ಚುಕ್ಕೆ ಎಂದು ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ