AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ಇರುವ ಪಟಾಕಿ ಅಂಗಡಿ ಪರಿಶೀಲನೆಗೆ ಡಿಕೆ ಶಿವಕುಮಾರ್​​ ಸೂಚನೆ

ಇನ್ಮುಂದೆ ಈ ರೀತಿ ಘಟನೆ ಆಗದಂತೆ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಪ್ರಕರಣದ ಕುರಿತು ಜಿಲ್ಲಾಧಿಕಾರಿ, ಎಸ್​ಪಿ ಜತೆ ಮಾತನಾಡಿದ್ದೇನೆ. ಪಟಾಕಿ ಅಂಗಡಿಗಳನ್ನು ಪರಿಶೀಲನೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ರಾಜ್ಯಾದ್ಯಂತ ಇರುವ ಪಟಾಕಿ ಅಂಗಡಿ ಪರಿಶೀಲನೆಗೆ ಡಿಕೆ ಶಿವಕುಮಾರ್​​ ಸೂಚನೆ
ಡಿಸಿಎಂ ಡಿಕೆ ಶಿವಕುಮಾರ್​
Anil Kalkere
| Edited By: |

Updated on:Oct 08, 2023 | 12:51 PM

Share

ಬೆಂಗಳೂರು ಅ.08: ಗಣೇಶ ಚತುರ್ಥಿ, ದೀಪಾವಳಿ ಸಾಲು ಸಾಲು ಹಬ್ಬ ಹಿನ್ನೆಲೆಯಲ್ಲಿ ಗೋದಾಮಿನಲ್ಲಿ ಪಟಾಕಿ (Firecrackers) ಸಂಗ್ರಹಿಸಲು ಮಾಲಿಕರು ಶರುಮಾಡಿಕೊಂಡಿದ್ದಾರೆ. ಆದರೆ ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಪಟಾಕಿ ಗೋಡೌನ್​​ಗಳಲ್ಲಿ ಅಗ್ನಿ ಅವಘಡ ಸಂಭವಿಸುತ್ತಿವೆ. ಈ ಹಿಂದೆ ಹಾವೇರಿ (Haveri) ಹೊರವಲಯದ ಸಾತೇನಹಳ್ಳಿ ಬಳಿ ಕುಮಾರ್​ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನಲ್ಲಿ (Firecracker Godown) ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದರು. ಘಟನೆ ನಡೆದು ಎರಡುವರೆ ತಿಂಗಳಲ್ಲಿ ಅತ್ತಿಬೆಲೆ ಬಾಲಾಜಿ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 14 ಜನ ಸಾವಿಗೀಡಾಗಿದ್ದಾರೆ. ಇದರಿಂದ ಎಚ್ಚತ್ತ ರಾಜ್ಯ ಸರ್ಕಾರ ರಾಜ್ಯಾದ್ಯಂತ ಇರುವ ಪಟಾಕಿ ಅಂಗಡಿಗಳನ್ನು ಪರಿಶೀಲಿಸುವಂತೆ ಸೂಚನೆ ನೀಡಿದೆ.

ಪಟಾಕಿ ಗೋಡೌನ್​ ಅಗ್ನಿ ದುರಂತದ ಬಗ್ಗೆ ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮಾತನಾಡಿ ಇನ್ಮುಂದೆ ಈ ರೀತಿ ಘಟನೆ ಆಗದಂತೆ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಪ್ರಕರಣದ ಕುರಿತು ಜಿಲ್ಲಾಧಿಕಾರಿ, ಎಸ್​ಪಿ ಜತೆ ಮಾತನಾಡಿದ್ದೇನೆ. ಪಟಾಕಿ ಅಂಗಡಿಗಳನ್ನು ಪರಿಶೀಲನೆ ಮಾಡಲು ಸೂಚನೆ ನೀಡಿದ್ದೇನೆ. ಘಟನೆ ಹೇಗಾಯ್ತು ಅಂತ ತನಿಖೆ ಮಾಡುತ್ತೇವೆ. ಪ್ರಾಣ ಕಳೆದುಕೊಂಡವರೆಲ್ಲ ಯುವಕರು ಇದ್ದಾರೆ. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿಗಳ ಜೊತೆ ನಾನು ಕೂಡ ಹೋಗುತ್ತಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರು ಪಟಾಕಿ ಅಗ್ನಿ ದುರಂತ: ಮೃತರ ಗುರುತು ಪತ್ತೆ, ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ

ಎಫ್​​ಎಸ್​​ಎಲ್ ವರದಿ ಆಧಾರದ ಮೇಲೆ ತನಿಖೆ: ಐಜಿಪಿ ರವಿಕಾಂತೇಗೌಡ

ಅಗ್ನಿಶಾಮಕದಳ, ಎಫ್​​ಎಸ್​​ಎಲ್ ವರದಿ ಆಧಾರದ ಮೇಲೆ ತನಿಖೆ ನಡೆಯುತ್ತದೆ. ಗೋಡೌನ್​ ಮಾಲೀಕ, ಆತನ ಪುತ್ರ ಮತ್ತು ಜಾಗ ಕೊಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಕಡೆಯೂ ಪಟಾಕಿ ಗೋದಾಮು ಪರಿಶೀಲನೆ ಮಾಡಲು ಕ್ರಮ ವಹಿಸಲಾಗುವುದು ಎಂದು ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಹೇಳಿದರು.

ಮೇಲ್ನೋಟಕ್ಕೆ ಅಗ್ನಿಶಾಮಕ ವಸ್ತುಗಳನ್ನು ಇಟ್ಟುಕೊಂಡಿರಲಿಲ್ಲ ಎಂಬುವುದು ಪ್ರಾಥಮಿಕ ಅಂಶದಲ್ಲಿ ತಿಳಿದುಬಂದಿದೆ. ಪ್ರಥಮ ವರ್ತಮಾನ ವರದಿಯನ್ನು ಕಠಿಣ ಕಾನೂನಿಗೆ ಅನ್ವಯ ಮಾಡಿದ್ದೇವೆ. ನರಹತ್ಯೆ, ಕೊಲೆಯಲ್ಲದ ನರಹತ್ಯೆ ಅಡಿ ಪ್ರಕರಣ ದಾಖಲಿಸಿದ್ದೇವೆ. ಘಟನೆ ಬಗ್ಗೆ ತಜ್ಞರು ವರದಿ ಕೊಡುತ್ತಾರೆ. 13 ಮೃತ ದೇಹಗಳ ಹೆಸರು ಗೊತ್ತಾಗಿದೆ. ಸಂಬಂಧಿಕರು ಬಂದು ನೋಡುತ್ತಿದ್ದಾರೆ. ಇದು ಬಹಳ ಕೆಟ್ಟ ದುರಂತ ಎಂದು ಹೇಳಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Sun, 8 October 23

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್