ಬಿಬಿಎಂಪಿ ವಲಯದಲ್ಲಿ ನಂಬಿಕೆ ನಕ್ಷೆ ಯೋಜನೆಗೆ ಡಿಸಿಎಂ ಡಿಕೆ ಶಿವಕುಮಾರ್​ ಚಾಲನೆ

ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಡಿಸಿಎಂ ಡಿ.ಕೆ. ಶಿವಕುಮಾರ್, ಬಿಡಿಎ, ಗೃಹ ನಿರ್ಮಾಣ ಸಂಘದವರು 50/80 ವಿಸ್ತೀರ್ಣದ ವರೆಗಿನ ನಿವೇಶನಗಳನ್ನೇ ಹೆಚ್ಚಾಗಿ ಅಭಿವೃದ್ಧಿಪಡಿಸಿರುತ್ತಾರೆ. ಇಷ್ಟು ವಿಸ್ತೀರ್ಣದ ನಿವೇಶನದಲ್ಲಿ ಮನೆ ನಿರ್ಮಾಣ ಹಾಗೂ ನವೀಕರಣಕ್ಕೆ ಜನರು ಯಾವುದೇ ತೊಂದರೆಯಿಲ್ಲದೇ ಮುಂದಾಗಬಹುದು. ಪಾಲಿಕೆಯ ಎಂಜಿನಿಯರ್​ಗಳು ಪರಿಶೀಲನೆ ನಡೆಸುತ್ತಾರೆ ಎಂದಿದ್ದಾರೆ.

ಬಿಬಿಎಂಪಿ ವಲಯದಲ್ಲಿ ನಂಬಿಕೆ ನಕ್ಷೆ ಯೋಜನೆಗೆ ಡಿಸಿಎಂ ಡಿಕೆ ಶಿವಕುಮಾರ್​ ಚಾಲನೆ
ಬಿಬಿಎಂಪಿ ವಲಯದಲ್ಲಿ ನಂಬಿಕೆ ನಕ್ಷೆ ಯೋಜನೆಗೆ ಡಿಸಿಎಂ ಡಿಕೆ ಶಿವಕುಮಾರ್​ ಚಾಲನೆ
Follow us
ಗಂಗಾಧರ​ ಬ. ಸಾಬೋಜಿ
|

Updated on: Sep 02, 2024 | 3:28 PM

ಬೆಂಗಳೂರು, ಸೆಪ್ಟೆಂಬರ್​ 02: ಕಟ್ಟಡ ನಕ್ಷೆ ಮಂಜೂರಾತಿ ವಿಚಾರದಲ್ಲಿ ಬೆಂಗಳೂರು ನಗರದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ‘ನಂಬಿಕೆ ನಕ್ಷೆʼ ಯೋಜನೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಜನರೇ ತಮ್ಮ ಕಟ್ಟಡ ನಕ್ಷೆಯನ್ನು ಅನುಮೋದಿತ ಕಟ್ಟಡ ವಿನ್ಯಾಸಕಾರರು ಅಥವಾ ಎಂಜಿನಿಯರ್​ಗಳ ಬಳಿ ಅನುಮೋದಿಸಿಕೊಂಡು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳುವ ಯೋಜನೆ ಇದಾಗಿದೆ. 50/80 ವಿಸ್ತೀರ್ಣದವರೆಗಿನ ನಿವೇಶನಗಳಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಡಿಸಿಎಂ ಡಿ.ಕೆ. ಶಿವಕುಮಾರ್, ಬಿಡಿಎ, ಗೃಹ ನಿರ್ಮಾಣ ಸಂಘದವರು 50/80 ವಿಸ್ತೀರ್ಣದ ವರೆಗಿನ ನಿವೇಶನಗಳನ್ನೇ ಹೆಚ್ಚಾಗಿ ಅಭಿವೃದ್ಧಿಪಡಿಸಿರುತ್ತಾರೆ. ಇಷ್ಟು ವಿಸ್ತೀರ್ಣದ ನಿವೇಶನದಲ್ಲಿ ಮನೆ ನಿರ್ಮಾಣ ಹಾಗೂ ನವೀಕರಣಕ್ಕೆ ಜನರು ಯಾವುದೇ ತೊಂದರೆಯಿಲ್ಲದೇ ಮುಂದಾಗಬಹುದು. ಅನುಮೋದಿತ ಲೆಕ್ಕ ಪರಿಶೋದಕರಂತೆ ಅನುಮೋದಿತ ಎಂಜಿನಿಯರ್​ಗಳು ಹಾಗೂ ಕಟ್ಟಡ ವಿನ್ಯಾಸಕಾರರ ಮೂಲಕ ತಾತ್ಕಾಲಿಕ ಕಟ್ಟಡ ನಕ್ಷೆಗೆ ಅನುಮತಿ ನೀಡಲಾಗುವುದು. ನಂತರ ಪಾಲಿಕೆಯ ಎಂಜಿನಿಯರ್​ಗಳು ಪರಿಶೀಲನೆ ನಡೆಸುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಕಾಲುವೆಗಳ ಅಕ್ಕ-ಪಕ್ಕದಲ್ಲಿ ರಸ್ತೆ ನಿರ್ಮಾಣ: ಡಿಕೆ ಶಿವಕುಮಾರ್

ಸದ್ಯ ಬಿಬಿಎಂಪಿಯ 2 ವಲಯಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಯಶಸ್ವಿಯಾಗಿ ಜಾರಿಯಾದ ಈ ಯೋಜನೆಯ ಸಾಧಕ ಭಾದಕಗಳನ್ನು ಸರಿಪಡಿಸಿ ಪ್ರಸ್ತುತ ಬಿಬಿಎಂಪಿಯ ಎಲ್ಲಾ ವಲಯಗಳಿಗೆ ವಿಸ್ತರಿಸಲಾಗುತ್ತಿದೆ. ಇದರಿಂದ ಜನರು ಪಾಲಿಕೆಗೆ ಅಲೆಯುವುದು ತಪ್ಪುತ್ತದೆ ಎಂದು ತಿಳಿಸಿದ್ದಾರೆ.

ನಗರದಾದ್ಯಂತ 2,795 ರಸ್ತೆಗುಂಡಿಗಳು: ಪ್ರಮುಖ ರಸ್ತೆಗಳ ದುರಸ್ತಿಗೆ ರೂ. 660 ಕೋಟಿ

ಬಿಬಿಎಂಪಿ ವಲಯದಲ್ಲಿ 2,795 ರಸ್ತೆಗುಂಡಿಗಳನ್ನು ಗುರುತಿಸಲಾಗಿದ್ದು, ಎಲ್ಲಾ ರಸ್ತೆ ಗುಂಡಿಗಳನ್ನು ಮುಂದಿನ 15 ದಿನಗಳಲ್ಲಿ ಸಂಪೂರ್ಣವಾಗಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರೂ. 660 ಕೋಟಿ ವೆಚ್ಚದಲ್ಲಿ ಪ್ರಮುಖ ರಸ್ತೆಗಳನ್ನು ದುರಸ್ತಿ ಕೆಲಸ ಕೈಗೆತ್ತಿಕೊಳ್ಳಲಾಗುವುದು ಎಂದಿದ್ದಾರೆ.

ರಸ್ತೆಗಳ ವೀಕ್ಷಣೆಗೆ ಎಂದೇ ನನ್ನ ಹಳೆಯ ಬೈಕ್ ಸಿದ್ಧ

ರಸ್ತೆಗುಂಡಿ ಸಮಸ್ಯೆ ಹೆಚ್ಚಾಗುತ್ತಿರುವ ಬಗ್ಗೆ ಕೇಳಿದಾಗ ಸಾರ್ವಜನಿಕರಿಗಾಗಿ ‘ರಸ್ತೆ ಗುಂಡಿ ಗಮನ’ ಎನ್ನುವ ಆ್ಯಪ್​ಅನ್ನು ಪರಿಚಯಿಸಿದ್ದು ಅದರಲ್ಲಿ ಗುಂಡಿಗಳ ಫೋಟೋ ತೆಗೆದು ಅಪ್​ ಲೋಡ್ ಮಾಡುವ ವ್ಯವಸ್ಥೆ ರೂಪಿಸಲಾಗಿದೆ. ರಸ್ತೆಗಳ ವೀಕ್ಷಣೆಗೆ ಎಂದೇ ನನ್ನ ಹಳೆಯ ಬೈಕ್ ದುರಸ್ತಿ ಮಾಡಿಸಿದ್ದೇನೆ. ಅಧಿಕಾರಿಗಳು ಮುಖ್ಯರಸ್ತೆಗಳನ್ನು ಮಾತ್ರ ತೋರಿಸುತ್ತಾರೆ. ಅದಕ್ಕೆ ಒಳ ರಸ್ತೆಗಳನ್ನು ಬೈಕ್ ಅಲ್ಲಿ ಓಡಾಡಿ ವೀಕ್ಷಿಸುತ್ತೇನೆ. ಜೊತೆಗೆ ಕಮಿಷನರ್ ಕೂರಿಸಿಕೊಂಡು ಒಂದು ಸುತ್ತು ಹೋಗುತ್ತೇನೆ ಎಂದಿದ್ದಾರೆ.

ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದಾಗ ಮುಖ್ಯರಸ್ತೆಗಳನ್ನು ಬಿಟ್ಟು ಒಳ ರಸ್ತೆಗಳಲ್ಲಿ ಓಡಾಡಿದೆ. ಅವರಿಗಿಂತ ನಾವೇ ಎಷ್ಟೋ ಮುಂದಿದ್ದೇವೆ. ಅವರನ್ನು ಟೀಕೆ ಮಾಡುತ್ತಿಲ್ಲ, ಅಲ್ಲಿನ ಪರಿಸ್ಥಿತಿ ಬೇರೆ ಇರಬಹುದು ಎಂದು ಹೇಳಿದ್ದಾರೆ. ಮಳೆ ಬಂದ ತಕ್ಷಣ ನಗರದಾದ್ಯಂತ ಎಲ್ಲೆಲ್ಲಿ ನೀರು ನಿಲ್ಲುತ್ತಿತ್ತು, ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಜನರಿಗೆ ತೊಂದರೆ ಉಂಟಾಗುತ್ತಿತ್ತು. ಅವುಗಳನ್ನು ಭಾಗಶಃ ಸರಿ ಪಡಿಸಲಾಗಿದೆ. ಇದಕ್ಕಾಗಿ ಅಧಿಕಾರಿಗಳಿಗೆ ಅಭಿನಂದನೆಗಳು ತಿಳಿಸಿದ್ದಾರೆ.

ರಾಜಕಾಲುವೆಯ 50 ಮೀ. ಸುತ್ತಳತೆಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಮಾಡುವಂತಿಲ್ಲ ಎಂದು ಎನ್​​​ಜಿಟಿಯ ನಿಯಮಗಳು ಸೇರಿದಂತೆ ಒಂದಷ್ಟು ನಿಯಮಗಳಿಗೆ ಪ್ರಸ್ತುತ 300 ಕಿ.ಮೀ ಅನ್ನು ಗುರುತಿಸಿ 30 ಅಡಿ ರಸ್ತೆ ನಿರ್ಮಾಣ ಮಾಡಲಾಗುವುದು. ಭೂಮಿ ಬಿಟ್ಟುಕೊಡುವ ಖಾಸಗಿ ಜಮೀನುಗಳ ಮಾಲೀಕರಿಗೆ ಪರಿಹಾರವಾಗಿ ಟಿಡಿಆರ್ ನೀಡಲಾಗುವುದು. ಅದನ್ನು ಅವರು ಮಾರಾಟ ಮಾಡಿಕೊಳ್ಳಬಹುದು ಎಂದಿದ್ದಾರೆ.

ಹೆಬ್ಬಾಳ, ನಾಗಾವರ, ಬೆಳ್ಳಂದೂರು ಅಕ್ಕಪಕ್ಕ, ಬೆಂಗಳೂರು ದಕ್ಷಿಣ ಭಾಗದಲ್ಲಿ ಒಂದಷ್ಟು ಕಡೆ ಭೂಮಿ ಗುರುತಿಸಲಾಗಿದೆ. ಮೊದಲ ಹಂತದಲ್ಲಿ 100 ಕಿ.ಮೀ ದೂರ ಕೆಲಸ ಮಾಡಲಾಗುವುದು. ಇದಕ್ಕಾಗಿ ರೂ. 200 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ. ಈ ವಿಚಾರವನ್ನು ಕ್ಯಾಬಿನೆಟ್, ಸಚಿವರ ಸಭೆ ಹಾಗೂ ವಿರೋಧ ಪಕ್ಷಗಳ ನಾಯಕರೊಟ್ಟಿಗೆ ನಡೆದ ಸಭೆಗಳಲ್ಲೂ ಪ್ರಾಸ್ತಪಿಸಲಾಗಿದೆ. ಈ ರಸ್ತೆಗಳಲ್ಲಿ ಬಸ್ ಓಡಾಟಕ್ಕೆ ಅವಕಾಶವಿಲ್ಲ. ಬದಲಾಗಿ ಶಾಲಾ, ನಾಗರಿಕರ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಹೈಕೋರ್ಟ್​ನಲ್ಲಿ ವಿರುದ್ಧ ತೀರ್ಪು ಬಂದರೆ ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳೇನು?

ಬಿಬಿಎಂಪಿ ಗುತ್ತಿಗೆದಾರರು ಬಿಲ್ ಬಾಕಿ ಬಗ್ಗೆ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ಗುತ್ತಿಗೆದಾರರ ನೋವು ನನಗೂ ಅರ್ಥವಾಗುತ್ತದೆ. ಶೇ.50 ರಷ್ಟಿದ್ದ ಬಿಲ್ ಬಾಕಿಯನ್ನು ಶೇ.75 ಕ್ಕೆ ಇಳಿಸಿದ್ದೇನೆ. ಒಂದಷ್ಟು ಭಾಗ ಆಯೋಗದ ಮುಂದಿದೆ. ಇದು ಇತ್ಯರ್ಥವಾದ ನಂತರ ಕಾನೂನಾತ್ಮಕವಾಗಿ ಹೇಗೆ ಸಹಾಯ ಮಾಡಲಾಗುವುದೋ ಆ ರೀತಿ ಅವರ ನೆರವಿಗೆ ನಿಲ್ಲಲಾಗುವುದು ಎಂದಿದ್ದಾರೆ.

ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತೇನೆ. ಕೆಲಸ ಮಾಡುವುದಿಲ್ಲ ಎಂದರೆ ಮತ್ತೊಬ್ಬ ಬಂದು ಕೆಲಸ ನಿರ್ವಹಿಸುತ್ತಾನೆ. ಇವರು ಮಾಡುವುದಿಲ್ಲ ಎಂದರೆ ಮತ್ತೊಬ್ಬ. ಸರ್ಕಾರವನ್ನು ಬ್ಲಾಕ್ ಮೇಲ್ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ.

ಕೆ.ಆರ್.ಪುರಂ ವಾರ್ಡಿನಲ್ಲಿ ನೀರಿನ ಸಮಸ್ಯೆ ಬಗೆಹರಿದಿಲ್ಲ ಎನ್ನುವುದರ ಬಗ್ಗೆ ಕೇಳಿದಾಗ “ಇನ್ನೊಂದು ವಾರದಲ್ಲಿ ಐದನೇ ಹಂತದ ನೀರು ಸರಬರಾಜು ಯೋಜನೆ ಪ್ರಾರಂಭ ಮಾಡಲಾಗುವುದು. ಇದರ ಬಗ್ಗೆ ಆ ಭಾಗದ ಶಾಸಕರು ಗಮನ ಸೆಳೆದಿದ್ದಾರೆ. ಆದಷ್ಟು ಬೇಗ ಬಗೆಹರಿಸಲಾಗುವುದು ಎಂದರು.

ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ 100 ವರ್ಷ: ಶಾಲಾ ಮಕ್ಕಳಿಂದ ಸ್ವಚ್ಚತೆ ಬಗ್ಗೆ ಅರಿವು

ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಕರ್ನಾಟಕದಲ್ಲಿ ಅಧಿಕಾರ ವಹಿಸಿಕೊಂಡು 100 ವರ್ಷಗಳು ಸಂದಿವೆ. ಇದಕ್ಕಾಗಿ ನಗರದಾದ್ಯಂತ ಸ್ವಚ್ಚತಾ ಅಭಿಯಾನ ಹಮ್ಮಿಕೊಳ್ಳಲಾಗುವುದು. ಇದೇ ವೇಳೆ ಒಂದು ಸಾವಿರ ಶಾಲಾ ಮಕ್ಕಳು ಆನ್ ಲೈನ್ ಮೂಲಕ ಪ್ರತಿಜ್ಞಾವಿಧಿ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ರಸ್ತೆ ಬದಿ ಹಾಗೂ ರಸ್ತೆಗಳಲ್ಲಿ ಕಸ ಎಸೆಯುವುದರ ವಿರುದ್ಧ ಜಾಗೃತಿ ಮೂಡಿಲಾಗುವುದು. ಮಕ್ಕಳಿಂದ ಕಸ ಎಸೆಯುವವರಿಗೆ ತಿಳಿಹೇಳುವ ಕೆಲಸ ಮಾಡಲಾಗುವುದು. ಅಕ್ಟೋಬರ್ 2 ರಂದು ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.