AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಂಗತ ರಾಜೀವ್ ಗಾಂಧಿಯವರ 80ನೇ ಜನ್ಮ ವಾರ್ಷಿಕೋತ್ಸವ, ಪ್ರತಿಮೆಗೆ ಡಿಕೆ ಶಿವಕುಮಾರ್ ಪುಷ್ಪಾರ್ಚನೆ

ದಿವಂಗತ ರಾಜೀವ್ ಗಾಂಧಿಯವರ 80ನೇ ಜನ್ಮ ವಾರ್ಷಿಕೋತ್ಸವ, ಪ್ರತಿಮೆಗೆ ಡಿಕೆ ಶಿವಕುಮಾರ್ ಪುಷ್ಪಾರ್ಚನೆ

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 20, 2024 | 11:34 AM

Share

ಇಂಡಿಯನ್ ಏರ್ ಲೈನ್ಸ್ ನಲ್ಲಿ ಪೈಲಟ್ ಆಗಿದ್ದ ರಾಜೀವ್ ಗಾಂಧಿ ರಾಜಕಾರಕ್ಕೆ ಬಂದಿದ್ದು ಆಕಸ್ಮಿಕ. ಕಾಂಗ್ರೆಸ್ ಪಕ್ಷದ ಯುವ ನಾಯಕನಾಗಿ ಗುರುತಿಸಿಕೊಂಡಿದ್ದ ಅವರ ಕಿರಿಯ ಸಹೋದರ ಸಂಜಯ್ ಗಾಂಧಿ 1980ರಲ್ಲಿ ವಿಮಾನ ಅಪಘಾತವೊಂದರಲ್ಲಿ ದುರ್ಮರಣಕ್ಕೀಡಾದಾಗ, ಬದರೀನಾಥ್ ಸಂತರಾಗಿದ್ದ ಶಂಕರಾಚಾರ್ಯ ಶ್ರೀ ಸ್ವರೂಪಾನಂದ ಅವರು ರಾಜಕೀಯ ಸೇರುವಂತೆ ರಾಜೀವ್ ಗಾಂಧಿಗೆ ಸಲಹೆ ನೀಡಿದ್ದರು.

ಬೆಂಗಳೂರು: ಇಂದು ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿಯವರ 81 ನೇ ಜನ್ಮ ವಾರ್ಷಿಕೋತ್ಸವ, ಅವರ ಜನ್ಮದಿನಾಚರಣೆಯನ್ನು ಸದ್ಭಾವನಾ ದಿನವನ್ನಾಗಿ ಆಚರಿಸಲಾಗುತ್ತದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಗರದ ಶೇಷಾದ್ರಿಪುರಂನಲ್ಲಿರುವ ರಾಜೀವ್ ಪ್ರತಿಮೆ ಬಳಿ ಫೋಟೋಗೆ ಹೂಮಾಲೆ ತೊಡಿಸಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಶಿವಕುಮಾರ್ ಅವರೊಂದಿಗಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಹಲವಾರು ಕಾಂಗ್ರೆಸ್ ಮುಖಂಡರು ರಾಜೀವ್ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ದಿವಂಗತ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ 1984 ರಲ್ಲಿ ಪ್ರಧಾನಿಯಾದ ರಾಜೀವ್ ಗಾಂಧಿ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನ ಮಂತ್ರಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 1984 ರಿಂದ 1989ರವರೆಗೆ ಅವರು ಅಧಿಕಾರದಲ್ಲಿದ್ದರು. 1991 ರಲ್ಲಿ ಮಧ್ಯಂತರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಅವರು ತಮಿಳುನಾಡಿನ ಶ್ರೀಪೆರಂಬೂದುರ್ ನಲ್ಲಿ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ಎಲ್​ಟಿಟಿಈ ಆತ್ಮಾಹುತಿ ದಾಳಿಗೆ ಬಲಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Rajiv Gandhi Assassination Case: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು