ವಿಶೇಷ ಆಹ್ವಾನದ ಮೇರೆಗೆ ಅಮೆರಿಕಾಕ್ಕೆ ಹೊರಟ ಡಿಕೆ ಶಿವಕುಮಾರ್: ಏನು ವಿಶೇಷ?

ಅಮೇರಿಕಾದಲ್ಲಿ ಅಧ್ಯಕ್ಷೀಯ ಚುನಾವಣಾ ಕಣ ರಂಗೇರಿದೆ. ಭಾರತೀಯ ಮೂಲದ ಕಮಲಾ ಹ್ಯಾರಿಸ್‌ ಅವರು ಸದ್ಯ ಅಮೆರಿಕದ ಉಪಾಧ್ಯಕ್ಷೆಯಾಗಿದ್ದು, ಈ ಬಾರಿಯ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಇತ್ತ ಡಿಸಿಎಂ ಡಿ.ಕೆ.ಶಿವಕುಮಾರ್‌ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಟ್ರಬಲ್‌ ಶೂಟರ್‌ ಎಂದೇ ಕರೆಸಿಕೊಂಡಿದ್ದಾರೆ. ಹೀಗಿರುವಾಗ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರು ಡಿಕೆಶಿಗೆ ಆಹ್ವಾನ ನೀಡಿದ್ದಾರೆ.

ವಿಶೇಷ ಆಹ್ವಾನದ ಮೇರೆಗೆ ಅಮೆರಿಕಾಕ್ಕೆ ಹೊರಟ ಡಿಕೆ ಶಿವಕುಮಾರ್: ಏನು ವಿಶೇಷ?
ಡಿಕೆ ಶಿವಕುಮಾರ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Sep 08, 2024 | 9:10 PM

ಬೆಂಗಳೂರು, (ಸೆಪ್ಟೆಂಬ್ 08): ಅಮೆರಿಕಾದಲ್ಲಿ ಅಧ್ಯಕ್ಷೀಯ ಚುನಾವಣಾ ರಂಗೇರಿದೆ. ಇದರ ಮಧ್ಯ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರು ಡಿಕೆ ಶಿವಕುಮಾರ್​​ಗೆ ವಿಶೇಷ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ(ಸೆ.09) ಕೋರ್ಟ್​ನಲ್ಲಿ ಮುಡಾ ಹಗರಣದ ಮಹತ್ವದ ವಿಚಾರಣೆ ಮಧ್ಯ ಡಿಕೆ ಶಿವಕುಮಾರ್ ಯುಎಸ್​ ಪ್ರವಾಸ ಕೈಗೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಡಿಕೆ ಶಿವಕುಮಾರ್ ಅವರು ಇಂದು(ಭಾನುವಾರ) ರಾತ್ರಿ ಬೆಂಗಳೂರಿನಿಂದ ಅಮೆರಿಕಾಕ್ಕೆ ತೆರಳಲಿದ್ದು, ಒಂದು ಕರ್ನಾಟಕದಲ್ಲಿ ಇರುವುದಿಲ್ಲ. ಫ್ಯಾಮಿಲಿ ಅಮೆರಿಕದ ನಾರ್ಥ್ ಕ್ಯಾರೋಲಿನಾದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಸೆಪ್ಟೆಂಬರ್ 14 ರಂದು ಸ್ವದೇಶಕ್ಕೆ ವಾಪಸ್ ಆಗಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಡಿಕೆಶಿ ಡೆಡ್​​ಲೈನ್: ಇಲ್ಲದಿದ್ದರೆ ಸಸ್ಪೆಂಡ್​ ಫಿಕ್ಸ್​ ಎಂದ ಡಿಸಿಎಂ

ರಾಜ್ಯದಲ್ಲಿ ಮುಡಾ ಹಗರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಮಧ್ಯ ಸಿಎಂ ಕುರ್ಚಿ ಕಾಳಗ ಶುರುವಾಗಿದೆ. ಇದೆಲ್ಲದರ ಬೆಳವಣಿಗೆಗಳ ಮಧ್ಯ ಡಿಕೆ ಶಿವಕುಮಾರ್ ಅಮೆರಿಕಾಕ್ಕೆ ತೆರಳಲಿದ್ದಾರೆ. ಈ ಸಂಬಂಧ ಇಂದು (ಸೆಪ್ಟೆಂಬರ್ 09) ಬೆಳಗ್ಗೆ ಸಿಎಂ ಸಿದ್ದರಾಮಯ್ಯನವರನ್ನ ಭೇಟಿ ಮಾಡಿ ಯುಎಸ್​ ಪ್ರವಾಸದ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ನಾಳೆ ಕೋರ್ಟ್​ನಲ್ಲಿ ಮುಡಾ ಹಗರಣದ ವಿಚಾರಣೆಯ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ.

ಅಧ್ಯಕ್ಷೀಯ ಚುನಾವಣೆ ಮಧ್ಯ ಡಿಕೆಶಿ ಅಮೆರಿಕಾ ಪ್ರವಾಸ

ಅಮೆರಿಕಾದಲ್ಲಿ ಚುನಾವಣೆ ರಂಗೇರಿದ್ದು ಅಭ್ಯರ್ಥಿಗಳು ಗೆಲ್ಲಲು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಭಾರತ ಮೂಲದ ಕಮಲಾ ಹ್ಯಾರಿಸ್ ಅವರು ಈ ಬಾರಿ ಡೆಮಾಕ್ರಟಿಕ್ ಪಕ್ಷದಿಂದ ಅಮೆರಿಕ ಅಧ್ಯಕ್ಷ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ 2ನೇ ಬಾರಿಗೆ ಅಧ್ಯಕ್ಷರಾಗುವ ಕನಸು ಕಾಣುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಮೆರಿಕಾದಿಂದ ಆಹ್ವಾನ ಬಂದಿದೆ. ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಆಹ್ವಾನದ ಮೇರೆಗೆ ಡಿ.ಕೆ ಶಿವಕುಮಾರ್ ಅವರು ತಮ್ಮ ಕುಟುಂಬ ಸಮೇತ ಇಂದು ರಾತ್ರಿ ಅಮೆರಿಕ ಫ್ಲೈಟ್​ ಹತ್ತಲಿದ್ದಾರೆ.

ಇನ್ನು ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆಶಿ, ನಾನು ಒಂದು ವಾರ ಇರಲ್ಲ, ಅಮೆರಿಕ ಪ್ರವಾಸ ಕೈಗೊಂಡಿದ್ದೇನೆ. ಅಮೆರಿಕಾದಲ್ಲಿ ಖಾಸಗಿ ಕಾರ್ಯಕ್ರಮವಿದೆ, ಯಾರನ್ನೂ ಭೇಟಿ ಆಗಲ್ಲ. ವಿಶೇಷ ಫ್ಯಾಮಿಲಿ ಟ್ರಿಪ್ ಇದು, ಕುಟುಂಬ ಸಮೇತ ಹೋಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು. ಆದ್ರೆ, ಯಾವ ಕಾರ್ಯಕ್ರಮ ಏನು ಎನ್ನುವ ಬಗ್ಗೆ ಹೇಳದೇ ಗೌಪ್ಯತೆ ಕಾಪಾಡಿಕೊಂಡಿದ್ದಾರೆ.

ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿರುವ ಡಿಕೆ ಶಿವಕುಮಾರ್​, ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:32 pm, Sun, 8 September 24