AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವಿಎಂ ಮಿಷನ್ ಮೇಲಿನ ಅನುಮಾನ: ಎಲಾನ್ ಮಸ್ಕ್ ಬೆಂಬಲಿಸಿ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (ಇವಿಎಂ) ಅನ್ನು ತಿರುಚಲು ಸಾಧ್ಯವೆಂದು ಹೇಳಿಕೆ ನೀಡಿದ ಎಲಾನ್ ಮಸ್ಕ್ ಅಭಿಪ್ರಾಯವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಇವಿಎಂ ಮಿಷನ್ ಮೇಲಿನ ಎಲಾನ್ ಮಸ್ಕ್ ಅನುಮಾನ ಬೆಂಬಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇವಿಎಂ ಮಿಷನ್ ಮೇಲಿನ ಅನುಮಾನ: ಎಲಾನ್ ಮಸ್ಕ್ ಬೆಂಬಲಿಸಿ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಎಲನ್ ಮಸ್ಕ್-ಡಿಕೆ ಶಿವಕುಮಾರ್
ರಮೇಶ್ ಬಿ. ಜವಳಗೇರಾ
|

Updated on: Jun 17, 2024 | 8:06 PM

Share

ಬೆಂಗಳೂರು, (ಜೂನ್ 17): ಇವಿಎಂಗಳ ಮೇಲೆ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ ಎಂದು ಡಿಕೆಶಿ, ಮಸ್ಕ್​​ ಅನುಮಾನವನ್ನು ಬೆಂಬಲಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಡಿಕೆ ಶಿವಕುಮಾರ್, ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ! ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್‌ ಮಸ್ಕ್‌ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ ಎಂದಿದ್ದಾರೆ.

ಎಲಾನ್‌ ಮಸ್ಕ್‌ ಏನು ಹೇಳಿದ್ದೇನು?

ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿದ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಕೂಡ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂದು ಹೇಳಿದ್ದರು. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕೂಡ ವಿದ್ಯುನ್ಮಾನ ಮತಯಂತ್ರಗಳ ಕಾರ್ಯದಕ್ಷತೆ ಬಗ್ಗೆ ಅನುಮಾನ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.