ಬೆಂಗಳೂರು, (ಜೂನ್ 17): ಇವಿಎಂಗಳ ಮೇಲೆ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ ಎಂದು ಡಿಕೆಶಿ, ಮಸ್ಕ್ ಅನುಮಾನವನ್ನು ಬೆಂಬಲಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಡಿಕೆ ಶಿವಕುಮಾರ್, ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ! ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್ ಮಸ್ಕ್ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ ಎಂದಿದ್ದಾರೆ.
I welcome the Union Education Minister’s acknowledgment of irregularities in the conduct of the NEET Exam 2024 and the Supreme Court’s order for a re-examination for 1,500 students. The incompetence of the National Testing Agency has caused despair and hopelessness among the…
— DK Shivakumar (@DKShivakumar) June 17, 2024
ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಳಸಿ ಇವಿಎಂಗಳನ್ನು ಹ್ಯಾಕ್ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಹೇಳಿದ ಬೆನ್ನಲ್ಲೇ ರಾಹುಲ್ ಗಾಂಧಿ ಅವರು ಕೂಡ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್ ಬಾಕ್ಸ್ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್ ಇರುವ ಎಲೆಕ್ಟ್ರಾನಿಕ್ ಡಿವೈಸ್) ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂದು ಹೇಳಿದ್ದರು. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕೂಡ ವಿದ್ಯುನ್ಮಾನ ಮತಯಂತ್ರಗಳ ಕಾರ್ಯದಕ್ಷತೆ ಬಗ್ಗೆ ಅನುಮಾನ ಹೊರಹಾಕಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.