ಕರ್ನಾಟಕದ ತೆರಿಗೆದಾರರು ಗೃಹಲಕ್ಷ್ಮಿ ಯೋಜನೆಯಡಿ 2000 ರೂ. ಕೇಳುತ್ತಿಲ್ಲ; ಡಿಕೆ ಶಿವಕುಮಾರ್

ಐಟಿ ರಿಟರ್ನ್ಸ್ ಸಲ್ಲಿಸುವ ಜನರು ಅದನ್ನು ಕೇಳುತ್ತಿಲ್ಲ. 2000 ರೂಪಾಯಿ ಬೇಡ ಎಂದು ಹಲವರು ಪತ್ರ ಬರೆದಿದ್ದಾರೆ. ಆ ವ್ಯಕ್ತಿಗಳ ಹೆಸರನ್ನು ನಾನು ಬಹಿರಂಗಪಡಿಸಲಾರೆ. ನಾವು ಸರ್ಕಾರ ನಡೆಸುತ್ತಿದ್ದೇವೆ ಮತ್ತು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕದ ತೆರಿಗೆದಾರರು ಗೃಹಲಕ್ಷ್ಮಿ ಯೋಜನೆಯಡಿ 2000 ರೂ. ಕೇಳುತ್ತಿಲ್ಲ; ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us
Ganapathi Sharma
|

Updated on: Jun 07, 2023 | 4:44 PM

ಬೆಂಗಳೂರು: ‘ಗೃಹಲಕ್ಷ್ಮಿ’ ಯೋಜನೆಗೆ (Gruha Lakshmi) ಹಲವು ಷರತ್ತುಗಳನ್ನು ವಿಧಿಸಿರುವ ಕರ್ನಾಟಕ ಸರ್ಕಾರದ ಕ್ರಮವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಮರ್ಥಿಸಿಕೊಂಡಿದ್ದಾರೆ. ಪ್ರತಿ ಮನೆಯ ಯಜಮಾನಿಗೆ 2,000 ರೂ. ನೀಡುವ ಈ ಯೋಜನೆಯನ್ನು ಬಡವರನ್ನು ಗಮನದಲ್ಲಿಟ್ಟುಕೊಂಡು ಹಮ್ಮಿಕೊಳ್ಳಲಾಗದೆಯೇ ವಿನಃ ಆದಾಯ ತೆರಿಗೆ ಪಾವತಿಸುವವರಿಗಲ್ಲ ಎಂದು ಅವರು ಹೇಳಿದ್ದಾರೆ. ಬೆಂಗಳೂರಿನ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ದಾರೆ.

ಪ್ರತಿ ರೂಪಾಯಿಗೆ ಉತ್ತರದಾಯಿತ್ವ ಇರಬೇಕು. ಬಡವರಿಗೆ ಅನುಕೂಲ ಮಾಡಿಕೊಡಲು ನಿರ್ಧರಿಸಿದ್ದೇವೆ. ಐಟಿ ರಿಟರ್ನ್ಸ್ ಸಲ್ಲಿಸುವ ಜನರು ಅದನ್ನು ಕೇಳುತ್ತಿಲ್ಲ. 2000 ರೂಪಾಯಿ ಬೇಡ ಎಂದು ಹಲವರು ಪತ್ರ ಬರೆದಿದ್ದಾರೆ. ಆ ವ್ಯಕ್ತಿಗಳ ಹೆಸರನ್ನು ನಾನು ಬಹಿರಂಗಪಡಿಸಲಾರೆ. ನಾವು ಸರ್ಕಾರ ನಡೆಸುತ್ತಿದ್ದೇವೆ ಮತ್ತು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಏತನ್ಮಧ್ಯೆ, ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಕ್ಷವು ಜನರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿದ್ದಾರೆ.

‘ಗೃಹ ಲಕ್ಷ್ಮಿ’ ಯೋಜನೆಗೆ ಷರತ್ತುಗಳನ್ನು ವಿಧಿಸಿರುವ ಕುರಿತು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಗ್ಗೆ ಕೇಳಿದಾಗ, ವಿರೋಧ ಪಕ್ಷಗಳು ಅಸೂಯೆ ಪಟ್ಟಿವೆ ಎಂದು ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ನಮ್ಮ ಮೇಲೆ ಅಸೂಯೆ ಹೊಂದಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿವೆ. ಅಸೂಯೆಗೆ ಔಷಧಿ ಇಲ್ಲ. ಬಿಜೆಪಿ ನಾಯಕರು ಆತಂಕದಲ್ಲಿದ್ದಾರೆ. ಅವರು 15 ಲಕ್ಷ ರೂಪಾಯಿ ನೀಡುವ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ಈಡೇರಿಸುವತ್ತ ಗಮನ ಹರಿಸಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: Gruha Lakshmi Scheme: ಗೃಹ ಲಕ್ಷ್ಮಿ ಯೋಜನೆ ಜಾರಿ ಯಾವಾಗ? ಯಾರು ಅರ್ಜಿ ಸಲ್ಲಿಸಬಹುದು? ಅರ್ಹತೆ ಮತ್ತು ಇತರ ವಿವರ ಇಲ್ಲಿದೆ

‘ಗೃಹ ಲಕ್ಷ್ಮಿ’ ಯೋಜನೆ ಜಾರಿಗೊಳಿಸಲು ಮಂಗಳವಾರ ರಾತ್ರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತ್ತು.

ಹಲವಾರು ಬಿಜೆಪಿ ನಾಯಕರು ‘ಗೃಹ ಲಕ್ಷ್ಮಿ’ಗೆ ವಿಧಿಸಿರುವ ಷರತ್ತುಗಳ ಬಗ್ಗೆ ಸರ್ಕಾರದ ವಿರುದ್ಧ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರದ ವಿರುದ್ಧ ಪ್ರತಿಭಟಿಸುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ