AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಖಾಲಿ ಟ್ರಂಕ್, ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂದ ಡಿಕೆ ಶಿವಕುಮಾರ್

ಧರ್ಮಸ್ಥಳ ಶವ ಹೂತಿಟ್ಟ (Dharmasthala Mass Burial) ಆರೋಪ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಹೇಳಿದಂತೆ ಉತ್ಖನನದಲ್ಲಿ ಯಾವುದೇ ಕುರುಹು ಸಿಕ್ಕಿಲ್ಲ. ಮಾಸ್ಕ್ ಮ್ಯಾನ್(ಭೀಮ) ತೋರಿಸಿದ ಜಾಗಗಳಲ್ಲಿ ಅಗೆದು ಪರಿಶೀಲನೆ ಮಾಡಲಾಗಿದ್ದು, 6ನೇ ಸ್ಥಳದಲ್ಲಿ ಮಾತ್ರ ಅಸ್ಥಿಪಂಜರ ದೊರೆತಿದೆ. ಇನ್ನುಳಿದಂತೆ ಯಾವುದೇ ಕಳೇಬರಹಗಳು ಸಿಕ್ಕಿಲ್ಲ. ಇನ್ನು ಈ ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೊನೆಗೂ ಮಾತನಾಡಿದ್ದು, ಇದೊಂದು ಖಾಲಿ ಟ್ರಂಕ್ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇದು ಖಾಲಿ ಟ್ರಂಕ್, ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂದ ಡಿಕೆ ಶಿವಕುಮಾರ್
Dk Shivakumar
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Aug 14, 2025 | 6:03 PM

Share

ಬೆಂಗಳೂರು, ಆಗಸ್ಟ್ 14): “ಧರ್ಮಸ್ಥಳ ವಿಚಾರದಲ್ಲಿ (Dharmasthala Mass Burial) ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ಅವರು, “ನಾನು ಧರ್ಮಸ್ಥಳ ಕ್ಷೇತ್ರ ಹಾಗೂ ಆ ದೇವಸ್ಥಾನದ ಮೇಲೆ ನಂಬಿಕೆ ಇರುವವನು. ನನಗೆ ಧರ್ಮಾಧಿಕಾರಿಗಳ ಮೇಲೂ ನಂಬಿಕೆ ಇದೆ. ಅವರ ಆಚಾರ ವಿಚಾರಗಳ ಬಗ್ಗೆ ಅರಿವಿದೆ. ಈ ಪ್ರಕರಣದಲ್ಲಿ ಪರಿಸ್ಥಿತಿ ಏನಿದೆ ಎಂದು ಗೃಹ ಸಚಿವರು ವಿವರಣೆ ನೀಡುತ್ತಾರೆ ಎಂದರು.

ನಮಗೆ ಈ ಪ್ರಕರಣದ ವಿಚಾರ ಗೊತ್ತಿದೆ. ಆದರೆ ಸರ್ಕಾರ ಎಸ್ಐಟಿ ರಚಿಸಲು ಕಾರಣವೇನು ಎಂಬುದನ್ನು ವಿವರಿಸುತ್ತಾರೆ. ಈ ವಿಚಾರವಾಗಿ ಇಲ್ಲಿ ನಾವು ನಾಲ್ಕು ಜನ ಮಾತನಾಡುವುದಷ್ಟೇ ಅಲ್ಲ. ಲಕ್ಷಾಂತರ ಭಕ್ತಾದಿಗಳು ಈ ಕ್ಷೇತ್ರ ನಂಬಿದ್ದಾರೆ. ದೇಶದಲ್ಲಿ ಅನ್ನ ದಾಸೋಹ ಆರಂಭವಾಗದೇ ಇದ್ದ ಕಾಲದಲ್ಲೇ ಈ ಕ್ಷೇತ್ರದಲ್ಲಿ ಇದನ್ನು ಆರಂಭಿಸಲಾಗಿತ್ತು. ಈ ವಿಚಾರವನ್ನು ನೀವು ರಾಜಕೀಯವಾಗಿ ತಿರುಗಿಸಬೇಡಿ” ಎಂದು ಹೇಳಿದರು.

ಇದನ್ನೂ ಓದಿ: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಎಸ್ಐಟಿ ತಂಡದ ದಿನದ ಖರ್ಚು ಎಷ್ಟು ಗೊತ್ತಾ?

“ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಹೈಕಮಾಂಡ್ ಎಂದು ಎಳೆದು ತರಬೇಡಿ. ಈ ಪ್ರಕರಣದಲ್ಲಿ ಕಾಂಗ್ರೆಸ್ ಯಾಕೆ ಹಸ್ತಕ್ಷೇಪ ಮಾಡುತ್ತದೆ. ಅಲ್ಲಿನ ಆಂತರಿಕ ಸಮಸ್ಯೆಯಿಂದ ಯಾವನೋ ಒಬ್ಬ ಬಂದು ಆರೋಪ ಮಾಡಿದ್ದಾನೆ. ನಿಮಗಿಂತ ಹೆಚ್ಚಾಗಿ ನಮ್ಮ ಪಕ್ಷದಲ್ಲೇ ಶಿವಲಿಂಗೇಗೌಡರು, ಅಶೋಕ್ ರೈ ಸೇರಿದಂತೆ ಅನೇಕ ಶಾಸಕರು ಧರ್ಮಸ್ಥಳ ಕ್ಷೇತ್ರದ ಬಗ್ಗೆ ಧ್ವನಿ ಎತ್ತಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ ನಂಬಿಕೆ ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಭಕ್ತ ಹಾಗೂ ಭಗವಂತನ ನಡುವಣ ಸಂಬಂಧ ನಾಶವಾಗಬಾರದು. ಧರ್ಮಾಧಿಕಾರಿಗಳು ಮೊದಲಿನಿಂದಲೂ ಸಾಮಾಜಿಕ ಸೇವೆ, ಧಾರ್ಮಿಕ ಸೇವೆ ಮಾಡಿಕೊಂಡು ಬರುತ್ತಿದ್ದು, ಅವರ ಮೇಲೆ ನಮಗೆ ಯಾವುದೇ ಅನುಮಾನವಿಲ್ಲ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಅವರ ಧಾರ್ಮಿಕ ಕೆಲಸಗಳ ಬೆನ್ನಿಗೆ ನಿಲ್ಲಲು ಬದ್ಧವಾಗಿದೆ. ಕೆಲವರು ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಗೃಹ ಸಚಿವರಾಗಲಿ, ಸರ್ಕಾರವಾಗಲಿ ಸುಮ್ಮನೆ ಕೂರಲು ಸಾಧ್ಯವೇ? ಇದೆಲ್ಲವನ್ನು ಗೃಹ ಸಚಿವರು ವಿವರಿಸುತ್ತಾರೆ. ಧರ್ಮಸ್ಥಳದ ವಿರೇಂದ್ರ ಹೆಗಡೆ, ಅವರ ಪರಂಪರೆ, ದೇವಸ್ಥಾನ, ಧರ್ಮ, ಧಾರ್ಮಿಕ ವಿಚಾರದ ಬಗ್ಗೆ ನಮಗೆ ನಿಮಗಿಂತಲೂ ಹೆಚ್ಚು ಕಾಳಜಿ ನಮಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ
Image
ಧರ್ಮಸ್ಥಳ: ಧಾರ್ಮಿಕ ಭಾವನೆಗಳಿಗೆ ಧಕ್ಕೆ, ರಾಜ್ಯದಾದ್ಯಂತ ಪ್ರತಿಭಟನೆಗಳು
Image
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
Image
ಇವು ಧರ್ಮಸ್ಥಳದಲ್ಲಿ ಸಿಕ್ಕ ಅಸ್ತಿಪಂಜರಗಳೇ?: ವೈರಲ್ ಫೋಟೋದ ಸತ್ಯ ಇಲ್ಲಿದೆ
Image
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ

ನಂತರ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ “ನೂರಾರು ವರ್ಷದಿಂದ ಬಂದ ಪರಂಪರೆ ನಾಶ ಮಾಡಲು ಹೊರಟಿದ್ದಾರೆ. ಯಾರನ್ನೇ ಆಗಲಿ ಅನಗತ್ಯವಾಗಿ ತೇಜೋವಧೆ ಮಾಡುವುದು ಸರಿಯಲ್ಲ. ನಮಗೆ ನಮ್ಮದೇ ಆದ ನಂಬಿಕೆ ಇದೆ. ನಾವು ಸರ್ಕಾರದ ವತಿಯಿಂದ ಧಾರ್ಮಿಕ ದತ್ತಿ ಇಲಾಖೆ ನಡೆಸುತ್ತಿದ್ದೇವೆ. ಅವನ್ಯಾರೋ ಮುಸುಕುಧಾರಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ಪರಿಣಾಮ ಇದೆಲ್ಲ ಆಗಿದೆ” ಎಂದರು.

“ನಮ್ಮ ಶಾಸಕಾಂಗ ಸಭೆಯಲ್ಲಿ ನಮ್ಮ ನಾಯಕರಾದ ಶಿವಲಿಂಗೇಗೌಡರು, ಬೇಳೂರು ಗೋಪಾಲಕೃಷ್ಣ, ಅಶೋಕ್ ರೈ ಸೇರಿ ಎಲ್ಲವೂ ಈ ವಿಚಾರವಾಗಿ ಮಾತನಾಡಿದ್ದಾರೆ. ಈ ವಿಚಾರದಲ್ಲಿ ಅಪಪ್ರಚಾರ ಮಾಡಿ ದಾರಿ ತಪ್ಪಿಸುತ್ತಿದ್ದಾರೋ ಅವರ ವಿರುದ್ಧ ತನಿಖೆ ಮಾಡಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದೇನೆ. ಮುಖ್ಯಮಂತ್ರಿಗಳು ಕೂಡ ಇಂತಹವರ ಮೇಲೆ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ಗೃಹ ಸಚಿವರು ಸದನದಲ್ಲಿ ವಿವರ ನೀಡುತ್ತಾರೆ” ಎಂದು ಹೇಳಿದರು.

ಇದು ಖಾಲಿ ಟ್ರಂಕ್ ಎಂದ ಡಿಕೆಶಿ

“ಈ ಪ್ರಕರಣ ಸಂಪೂರ್ಣ ಮಾಹಿತಿ ನನಗೂ ಗೊತ್ತಿದೆ. ಇದು ಖಾಲಿ ಟ್ರಂಕ್. ಹೀಗಾಗಿ ಸದ್ದು ಜಾಸ್ತಿ ಮಾಡುತ್ತಿದೆ ಅಷ್ಟೇ. ಯಾವುದೇ ಧರ್ಮದ ಭಾವನಗೆ ಚ್ಯುತಿ ಬರಬಾರದು. ಯಾರು ತಪ್ಪು ಮಾಡುತ್ತಾರೋ ಅವರಿಗೆ ಶಿಕ್ಷೆ ಆಗಬೇಕು. ತಪ್ಪುಮಾಡಿದವರ ರಕ್ಷಣೆ ಮಾಡುವುದಿಲ್ಲ. ಏನೂ ಇಲ್ಲದೇ ಈ ರೀತಿ ಸೃಷ್ಟಿ ಮಾಡಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿ ಬಂದ ನಂತರ ಇದನ್ನು ಸರಿಯಾದ ರೀತಿಯಲ್ಲಿ ತನಿಖೆ ಮಾಡಬೇಕು ಎಂದು ಎಸ್ಐಟಿ ರಚಿಸಿ ತನಿಖೆ ಮಡಿಸಲಾಗಿದೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವರದೇ ಆದ ವ್ಯಾಖ್ಯಾನ ಮಾಡಿದ್ದಾರೆ. ಈ ವಿಚಾರದಲ್ಲಿ ಧರ್ಮಾಧಿಕಾರಿಗಳಿಗೆ ಅನ್ಯಾಯ ಆಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು/

ಧರ್ಮಸ್ಥಳ ಕ್ಷೇತ್ರಕ್ಕೆ ಮಸಿ ಬಳಿಯಲು ಪ್ರಯತ್ನಿಲಾಗುತ್ತಿದೆ ಎಂದು ಬಿಜೆಪಿಯವರು ಕಾಂಗ್ರೆಸ್ ಮೇಲೆ ಆರೋಪ ಮಾಡಿರುವ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷ ಯಾವುದೇ ಸಂದರ್ಭದಲ್ಲಿ ಧರ್ಮಸ್ಥಳ ಅಥವಾ ಇತರೆ ಧಾರ್ಮಿಕ ಕ್ಷೇತ್ರಗಳ ಗೌರವ, ಸ್ವಾಭಿಮಾನ, ನಂಬಿಕೆಗೆ ಧಕ್ಕೆಯಾಗಲು ಅವಕಾಶ ನೀಡುವುದಿಲ್ಲ. ನ್ಯಾಯ, ಧರ್ಮದ ವಿಚಾರದಲ್ಲಿ ನಾವು ಎಲ್ಲರನ್ನು ಸರಿಸಮನಾಗಿ ನೋಡುತ್ತೇವೆ” ಎಂದು ತಿಳಿಸಿದರು.

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವ ಬಗ್ಗೆ ಕೇಳಿದಾಗ, “ನನಗೆ ಈಗಷ್ಟೇ ಈ ವಿಚಾರ ತಿಳಿಯಿತು. ಮುಖ್ಯಮಂತ್ರಿಗಳು ಸದನದ ವೇಳೆ ಈ ವಿಚಾರ ತಿಳಿಸಿದರು. ನನಗೆ ಶಾಕ್ ಆಯಿತು. ನ್ಯಾಯಾಲಯದ ತೀರ್ಪಿನ ಬಗ್ಗೆ ನಾವು ಮಾತನಾಡಲು ಬರುವುದಿಲ್ಲ” ಎಂದರು.