ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ, ಸಿಎಂ ಜೊತೆ ಬಜೆಟ್ ಪೂರ್ವಭಾವಿ ಚರ್ಚೆ

ಅರುಣ್​ ಕುಮಾರ್​ ಬೆಳ್ಳಿ

Updated on: Feb 07, 2025 | 6:10 PM

ಈ ಬಾರಿಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಳ ಎಚ್ಚರಿಕೆಯಿಂದ ತಯಾರಿಸಬೇಕಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಳು ನಿಂತಿವೆ ಅಂತ ವಿರೋಧ ಪಕ್ಷದ ನಾಯಕರೇನು ಖುದ್ದು ಆಡಳಿತ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ವಿರೋಧ ಪಕ್ಷಗಳ ಟೀಕೆಗಳಿಂದ ಬಚಾವಾಗಬೇಕಾದರೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗಾಗಿ ಹಣ ಬಿಡುಗಡೆ ಮಾಡಲೇಬೇಕು.

ಬೆಂಗಳೂರು: ನಟಿ, ನಿರ್ಮಾಪಕಿ, ಮಾಜಿ ವಿಧಾನ ಪರಿಷತ್ ಸದಸ್ಯೆ ಮತ್ತ ಮಾಜಿ ಸಚಿವೆ ಜಯಮಾಲಾ ಮಗಳು ಮತ್ತು ಚಿತ್ರನಟಿ ಸೌಂದರ್ಯ ಮದುವೆಯಲ್ಲಿ ಭಾಗಿಯಾಗಿದ್ದ ಡಿಸಿಎಂ ಡಿಕೆ ಶಿವಕುಮಾರ್ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ತೆರಳಿದರು. ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿದ್ದ ಸಿದ್ದರಾಮಯ್ಯ ಅವತು ಬಜೆಟ್ 2025 ತಯಾರಿಯಲ್ಲಿ ತೊಡಗಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಸಿಎಂ ಬೇರೆ ಬೇರೆ ಖಾತೆಗಳ ಸಚಿವರೊಂದಿಗೆ ಸಭೆ ನಡೆಸುತ್ತಿದ್ದು ಜಲ ಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ತಮ್ಮ ಖಾತೆಯ ಪ್ರಸ್ತಾವನೆಗಳನ್ನು ಸಲ್ಲಿಸಲು ಮುಖ್ಯಮಂತ್ರಿಯವರ ನಿವಾಸಕ್ಕೆ ತೆರಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜಯಮಾಲಾ ಮಗಳು ಸೌಂದರ್ಯ ಮದುವೆಗೆ ಪತ್ನಿಯೊಂದಿಗೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.