ನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

Karnataka Bandh; ನಾಳೆ ಸಾವರ್ಜನಿಕರಿಗೆ ರಕ್ಷಣೆ ಕೊಟ್ಟೇ ಕೊಡುತ್ತೇವೆ. ಸುಪ್ರೀಂ ಕೋರ್ಟ್,‌ ಹೈಕೋರ್ಟ್ ಬಂದ್ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ನೀಡಿವೆ,‌ ಅವನ್ನು ಪಾಲಿಸಬೇಕು. ದಯವಿಟ್ಟು ಕಾನೂನು ಪಾಲಿಸಿ, ಬಂದ್ ಮಾಡದೆ ಪ್ರತಿಭಟನೆ ಮಾಡಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜನರಲ್ಲಿ ಮನವಿ ಮಾಡಿದರು.

ನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us
TV9 Web
| Updated By: Ganapathi Sharma

Updated on: Sep 28, 2023 | 4:06 PM

ಬೆಂಗಳೂರು, ಸೆಪ್ಟೆಂಬರ್ 28: ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ. ಆದರೆ ಬಂದ್ (Karnataka Bandh) ಮಾಡಲು ಅವಕಾಶವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಗುರುವಾರ ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದರ ವಿರುದ್ಧ ವಿವಿಧ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ನಾಳೆ ಸಾವರ್ಜನಿಕರಿಗೆ ರಕ್ಷಣೆ ಕೊಟ್ಟೇ ಕೊಡುತ್ತೇವೆ. ಸುಪ್ರೀಂ ಕೋರ್ಟ್,‌ ಹೈಕೋರ್ಟ್ ಬಂದ್ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ನೀಡಿವೆ,‌ ಅವನ್ನು ಪಾಲಿಸಬೇಕು. ದಯವಿಟ್ಟು ಕಾನೂನು ಪಾಲಿಸಿ, ಬಂದ್ ಮಾಡದೆ ಪ್ರತಿಭಟನೆ ಮಾಡಿ ಎಂದು ಜನರಲ್ಲಿ ಮನವಿ ಮಾಡಿದರು.

ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಾಳೆ

ನಾಳೆ ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಗೆ ಆನ್‌ಲೈನ್ ಬದಲಿಗೆ ಖುದ್ದಾಗಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ತಮಿಳುನಾಡಿನವರು 11,000 ಸಾವಿರ ಕ್ಯೂಸೆಕ್​ ನೀರಿಗೆ ಬೇಡಿಕೆ ಇಟ್ಟಿದ್ದು, ರಾಜ್ಯದ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಲಿದ್ದಾರೆ. ರಾಜ್ಯದ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದ್ದಾರೆ. ಈಗ ಸಹಜವಾಗಿ 2,000 ಕ್ಯೂಸೆಕ್ ನೀರು ಹೋಗುತ್ತಿರಬಹುದು ಎಂದು ಅವರು ತಿಳಿಸಿದರು.

ಹಿರಿಯ ಕೃಷಿ ತಜ್ಞರು, ನೀರಾವರಿ ತಂತ್ರಜ್ಞರ ಸಭೆ ಕರೆದಿದ್ದು ಅಲ್ಲಿ ಚರ್ಚೆ ಮಾಡಲಾಗುವುದು. ಯಾರು ಭಾಗವಹಿಸುತ್ತಾರೆ ಎಂದು ಹೆಸರು ಬಹಿರಂಗಪಡಿಸಲು ಆಗುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

ನಾಳಿನ ಬೆಳವಣಿಗೆ ನೋಡಿಕೊಂಡು ನ್ಯಾಯಾಲಯಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ, ಈಗಾಗಲೇ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ತಾಂತ್ರಿಕ ಸಮಿತಿಯವರು 3,000 ಕ್ಯೂಸೆಕ್ ನೀರು ಬಿಡುಗಡೆಗೆ ಶಿಫಾರಸ್ಸು ಮಾಡಿದ್ದಾರೆ. ನಾಳೆ ಪ್ರಾಧಿಕಾರದವರು ಏನು ಸೂಚನೆ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕು ಎಂದು ತಿಳಿಸಿದರು.

ಎಂಎಲ್‌ಸಿ, ಲೋಕಸಭಾ ಚುನಾವಣೆಗೆ ತಯಾರಿ

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಶೀಘ್ರ ಆಯ್ಕೆ ಮಾಡಲು ಸಲಹೆ ಪಡೆಯಲಾಗುತ್ತಿದೆ. ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ ಸೇರಿದಂತೆ ಎಲ್ಲಾ ಭಾಗದ ನಾಯಕರ ಜತೆ ಎಂಎಲ್‌ಸಿ ಚುನಾವಣೆ ಬಗ್ಗೆ ಚರ್ಚೆ ನಡಸಲಾಗುತ್ತಿದೆ ಎಂದು ಅವರು ಹೇಳಿದರು.

ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಮಾಜಿ ಶಾಸಕರು ಭೇಟಿಯಾಗಿದ್ದರು ಎನ್ನುವ ಪ್ರಶ್ನೆಗೆ, ಮೈತ್ರಿ ವಿಚಾರವಾಗಿ ಬಹಳಷ್ಟು ಜನರಿಗೆ ಸಿಟ್ಟಿದೆ. ಸಿಎಂ ಹಾಗೂ ನಾನು ನಾಳೆ ಈ ವಿಚಾರವಾಗಿ ಮಾತನಾಡುತ್ತೇವೆ ಎಂದರು.

ಇದನ್ನೂ ಓದಿ: Karnataka Bandh: ನಾಳೆ ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿಲ್ಲ? ಇಲ್ಲಿದೆ ವಿವರ

ಹರಿಪ್ರಸಾದ್ ಹಾಗೂ ಮುನಿಯಪ್ಪ ಅವರ ಭೇಟಿ ಬಗ್ಗೆ ಕೇಳಿದಾಗ, ಬಿ.ಕೆ.ಹರಿಪ್ರಸಾದ್ ಮತ್ತು ಮುನಿಯಪ್ಪ ಅವರು ಲೋಕಸಭೆ ಚುನಾವಣೆಯ ವಿಚಾರವಾಗಿ ಚರ್ಚೆ ನಡೆಸಲು ಬಂದಿದ್ದರು. ಇದೇ ವೇಳೆ ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಿ ಎಂದು ಮುನಿಯಪ್ಪ ಅವರು ಸಲಹೆ ನೀಡಿದರು ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ