ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಡಿಕೆ ಶಿವಕುಮಾರ್

ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉನ್ನತ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ವಿದ್ಯಮಾನ ಮಂಗಳವಾರ ನಡೆಯಿತು.

ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us
Ganapathi Sharma
|

Updated on: May 23, 2023 | 4:17 PM

ಬೆಂಗಳೂರು: ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಉನ್ನತ ಪೊಲೀಸ್ ಅಧಿಕಾರಿಗಳನ್ನು (Police Officials) ತರಾಟೆಗೆ ತೆಗೆದುಕೊಂಡ ವಿದ್ಯಮಾನ ಮಂಗಳವಾರ ನಡೆಯಿತು. ಉನ್ನತ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ, ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕುತ್ತೀರಿ ಅಂದರೆ ಹೇಗೆ? ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡ ಬರಬೇಕಾಗಿತ್ತು. ನಮ್ಮ ಸರ್ಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ನಾವು ಬಿಡುವುದಿಲ್ಲ ಎಂದರು.

ಪಿಎಸ್​ಐ ಅಕ್ರಮದಲ್ಲಿ ಒಬ್ಬ ಎಡಿಜಿಪಿ ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ಎಂಬುದು ತಿಳಿಯುತ್ತದೆ. ಪೊಲೀಸ್ ಇಲಾಖೆ ಘನತೆಯನ್ನು ನೀವು ಹಾಳು‌ ಮಾಡಿದ್ದೀರಿ. ಇದನ್ನು ನಾವು ಸಹಿಸುವುದಿಲ್ಲ. ನಮ್ಮ ಸರ್ಕಾರದಲ್ಲಿ ಎಲ್ಲವೂ ಸ್ವಚ್ಛವಾಗಿರಬೇಕು. ಜನ ದೊಡ್ಡ ಬದಲಾವಣೆ ನಿರೀಕ್ಷೆ ಮಾಡಿದ್ದಾರೆ. ಅದರಂತೆ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಆಗಬೇಕು. ನೀವು ಯಾರೂ ನಮಗೆ ಹಣ ಕೊಡುವುದು ಬೇಡ. ಉತ್ತಮವಾಗಿ ಕೆಲಸ ಮಾಡಿದರೆ ಸಾಕು ಎಂದು ಹಿರಿಯ ಪೊಲೀಸರಿಗೆ ಡಿಕೆಶಿ ವಕುಮಾರ್ ಖಡಕ್ ಸಂದೇಶ ರವಾನಿಸಿದರು.

ಇದನ್ನೂ ಓದಿ: ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

‘ಉರಿಗೌಡ, ನಂಜೇಗೌಡ ಪ್ರಕರಣದಲ್ಲಿ ‌ಏನಾಯ್ತು ಗೊತ್ತಿದೆ’

ಕಳೆದ 4 ವರ್ಷ ನೀವು ಸರ್ಕಾರದಲ್ಲಿ ಏನು ಮಾಡಿದ್ದೀರಿ ಎಂಬುದು ಗೊತ್ತಿದೆ. ನಿಮ್ಮ ಆ ವರ್ತನೆ ನಮ್ಮ ಸರ್ಕಾರದಲ್ಲಿ ನಡೆಯಲಾರದು. ನನ್ನ,‌ ಸಿದ್ದರಾಮಯ್ಯರ ಜೊತೆ ಹೇಗೆ ನಡೆದುಕೊಂಡಿದ್ದೀರಿ ಗೊತ್ತಿದೆ. ಉರಿಗೌಡ, ನಂಜೇಗೌಡ ಪ್ರಕರಣದಲ್ಲಿ ‌ಏನಾಯ್ತು ಗೊತ್ತಿದೆ. ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಅಂದರೂ ಅವರ ಮೇಲೆ ಕೇಸ್ ಹಾಕಿಲ್ಲ ನೀವು. ಅಷ್ಟು ದೊಡ್ಡ ಪ್ರಕರಣ ಆದರೂ ಕೇಸ್ ಹಾಕದೇ ನಮ್ಮ ವಿರುದ್ಧ ನಡೆದುಕೊಂಡಿದ್ದಿರಿ. ಇವೆಲ್ಲ ನಮ್ಮ ಸರ್ಕಾರದಲ್ಲಿ ನಡೆಯಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ನಾವು ನಿಮ್ಮ ಜೊತೆ ಇರುತ್ತೇವೆ. ಈ ಸರ್ಕಾರದ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ, ಅದನ್ನ ಉಳಿಸಿಕೊಳ್ಳಿ ಎಂದು ಹಿರಿಯ ಅಧಿಕಾರಿಗಳಿಗೆ ಡಿಕೆಶಿ ಸೂಚನೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ