AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳಿಗೆ ಸಮುದಾಯ ಬಂಡವಾಳ ನಿಧಿಯಡಿ 149 ಕೋಟಿ ಪ್ರೋತ್ಸಾಹ ನಿಧಿ ಬಿಡುಗಡೆ

500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇರುವೆಡೆ ಕಾಲೇಜುಗಳಲ್ಲೇ ಕೊವಿಡ್ ಲಸಿಕೆ ನೀಡಲಾಗುತ್ತದೆ. ರಾಜ್ಯದಲ್ಲಿ ದಿನಕ್ಕೆ ಕನಿಷ್ಠ 1 ಲಕ್ಷ ಡೋಸ್ ಲಸಿಕೆ ನೀಡುತ್ತಿದ್ದೇವೆ. 10 ದಿನಗಳ ಕಾಲ ಇದಕ್ಕಾಗಿಯೇ ನಿಗದಿ ಮಾಡಲಾಗುತ್ತದೆ. ಸಂಬಂಧಪಟ್ಟ ವಿವಿಗಳಿಗೂ ಲಸಿಕೆ ಹಂಚಿಕೆ ಬಗ್ಗೆ ತಿಳಿಸಲಾಗಿದೆ. ಆದ್ಯತೆ ಮೇರೆಗೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.

ಡಿಸಿಎಂ ಅಶ್ವತ್ಥನಾರಾಯಣ
TV9 Web
| Updated By: guruganesh bhat|

Updated on: Jul 01, 2021 | 9:11 PM

Share

ಬೆಂಗಳೂರು: ಗ್ರಾಮ ಪಂಚಾಯತ ಮಟ್ಟದ ಸಂಜೀವಿನಿ ಒಕ್ಕೂಟಗಳಿಗೆ ಸಮುದಾಯ ಬಂಡವಾಳ ನಿಧಿಯಡಿ ಏಕಕಾಲಕ್ಕೆ 149 ಕೋಟಿ ಪ್ರೋತ್ಸಾಹ ನಿಧಿ ಬಿಡುಗಡೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ, ಹಾಗೂ ಜೀವನೋಪಾಯ ಇಲಾಖೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ ಅವರು, ಜತೆಗೆ ಸ್ವ ಸಹಾಯ ಸಂಘಗಳಿಗೆ ರಾಷ್ಟ್ರೀಯ ಮಟ್ಟದಲ್ಲಿ ರೇಣುಕಾದೇವಿ ಸ್ವ ಸಹಾಯ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು ಒಂದು ಲಕ್ಷ ನಗದು ಕೂಡ ಬಹುಮಾನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಸ್ವ ಸಹಾಯ ಸಂಘವನ್ನು ಕಡಿಮೆ ಹಣದಿಂದ ಪ್ರಾರಂಭ ಮಾಡಿ ತುಂಬಾ ದೊಡ್ಡ ಮಟ್ಟಕ್ಕೆ ಬೆಳೆಸಲಾಗಿದೆ. ಸಂಘದ ಮೂಲಕ ಬಾಲ್ಯವಿವಾಹ ತಡೆದಿದ್ದಾರೆ, ಸಾರಾಯಿ ಅಂಗಡಿಗಳನ್ನು ಮುಚ್ಚಿಸಿದ್ದಾರೆ, ಚರಂಡಿ ನಿರ್ಮಾಣ, ಕೊವಿಡ್​ ಲಸಿಕೆ ನೀಡುವ ಕೆಲಸ ಕೂಡ ಮಾಡಿದ್ದಾರೆ. ಆಸ್ತಿ ಹಂಚಿಕೆ ವಿಚಾರದಲ್ಲಿ ಕೂಡ ಇವರು ನ್ಯಾಯ ಕೊಡಿಸಿದ್ದಾರೆ. ಈ ಎಲ್ಲ ಕಾರ್ಯಗಳೂ ಸಹ ಮಾದರಿ ಎನಿಸಿವೆ ಎಂದು ತಿಳಿಸಿದರು.

500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇರುವೆಡೆ ಕಾಲೇಜುಗಳಲ್ಲೇ ಕೊವಿಡ್ ಲಸಿಕೆ ನೀಡಲಾಗುತ್ತದೆ. ರಾಜ್ಯದಲ್ಲಿ ದಿನಕ್ಕೆ ಕನಿಷ್ಠ 1 ಲಕ್ಷ ಡೋಸ್ ಲಸಿಕೆ ನೀಡುತ್ತಿದ್ದೇವೆ. 10 ದಿನಗಳ ಕಾಲ ಇದಕ್ಕಾಗಿಯೇ ನಿಗದಿ ಮಾಡಲಾಗುತ್ತದೆ. ಸಂಬಂಧಪಟ್ಟ ವಿವಿಗಳಿಗೂ ಲಸಿಕೆ ಹಂಚಿಕೆ ಬಗ್ಗೆ ತಿಳಿಸಲಾಗಿದೆ. ಆದ್ಯತೆ ಮೇರೆಗೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: 

ಕೊವಿಡ್ ಪರಿಹಾರ ಪಡೆಯಲು ಮನೆ ಕೆಲಸದವರಿಂದ ಕಮಿಷನ್:​ ಹೈಕೋರ್ಟ್ ಆಕ್ಷೇಪ

ಗ್ರಾಮ ಪಂಚಾಯತಿ ಮಟ್ಟದ ನೌಕರರ ಕಾಯಮಾತಿ ಇಲ್ಲ, ಕೊವಿಡ್​ನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ; ಸಚಿವ ಈಶ್ವರಪ್ಪ

(DCM Dr Ashwath Narayan says 149 crore incentive fund released to community level self help groups)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ