Covid Vaccine: ಇನ್ನೂ 10 ದಿನದೊಳಗೆ ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಲಸಿಕೆ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

| Updated By: guruganesh bhat

Updated on: Jun 29, 2021 | 8:12 PM

ಅಗಸ್ಟ್ 28 ಹಾಗೂ 29ಕ್ಕೆ ಸಿಇಟಿ ಪರೀಕ್ಷೆ ನಡೆಯಲಿರುವ ಕಾರಣ ಸಿಇಟಿ ವಿದ್ಯಾರ್ಥಿಗಳಿಗೆ ರೈನ್‌ ಬೋ ಆಸ್ಪತ್ರೆ ಮತ್ತು ಎಇಎಸ್‌ ಸಂಸ್ಥೆಯಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ 2 ಲಕ್ಷ ಸರ್ಜಿಕಲ್‌ ಮಾಸ್ಕ್ ವಿತರಿಸಲಾಗುವುದು ಎಂದು ಡಿಸಿಎಂ ಡಾ. ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

Covid Vaccine: ಇನ್ನೂ 10 ದಿನದೊಳಗೆ ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಲಸಿಕೆ: ಡಿಸಿಎಂ ಡಾ.ಅಶ್ವತ್ಥ ನಾರಾಯಣ
ಡಿಸಿಎಂ ಅಶ್ವತ್ಥನಾರಾಯಣ
Follow us on

ಬೆಂಗಳೂರು: ಸದ್ಯ ರಾಜ್ಯದಲ್ಲಿ ಉನ್ನತ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳಿಕೆ ಲಸಿಕೆ ನೀಡಲಾಗುತ್ತಿದ್ದು, ಇನ್ನೂ 10 ದಿನದೊಳಗೆ ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಲಸಿಕೆ ವಿತರಿಸಲಾಗುವುದು ಎಂದು ಉಪ ಮುಖ್ಯಮಂತ್ರಿಯೂ ಆದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ವಿಕಾಸಸೌಧದಲ್ಲಿ ತಿಳಿಸಿದರು. ಪಾಲಿಟೆಕ್ನಿಕ್, ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಸೇರಿ ಎಲ್ಲಾ ನೋಂದಾಯಿತ ವಿದ್ಯಾರ್ಥಿಗಳಿಗೆ ತ್ವರಿತವಾಗಿ ಲಸಿಕೆ ನೀಡುತ್ತೇವೆ. ಜೂನ್ ತಿಂಗಳಲ್ಲಿ ಒಟ್ಟಾರೆ 60 ಲಕ್ಷದಷ್ಟು ಲಸಿಕೆ ನೀಡಲಾಗಿದೆ. ಲಸಿಕೆ ಕೋಟಾ ಹೆಚ್ಚಿಸಿಕೊಂಡು ತ್ವರಿತವಾಗಿ ಆದ್ಯತೆ ನೀಡುತ್ತೇವೆ. ಲಸಿಕೆ ನೀಡುವುದರಲ್ಲಿ ವಿಶ್ವದಲ್ಲೇ ಭಾರತ 3ನೇ ಸ್ಥಾನದಲ್ಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.

ಆರೋಗ್ಯ ಇಲಾಖೆಯಿಂದ 250 ಮೆಟ್ರಿಕ್ ಟನ್,​ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ 400 ಮೆಟ್ರಿಕ್​ ಟನ್ ಸೇರಿ​ ಒಟ್ಟಾರೆ 650 ಮೆಟ್ರಿಕ್​ ಟನ್ ಆಕ್ಸಿಜನ್ ಉತ್ಪಾದನೆಯಾಗುತ್ತಿದೆ. ಅಗಸ್ಟ್​ ಒಳಗೆ 187 ಆಕ್ಸಿಜನ್ ಜನರೇಟರ್​ ಸಿದ್ಧವಾಗಲಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ 2-3 ಕೋಟಿ ನೆರವು ನೀಡಲಾಗುತ್ತೇವೆ. ಈ ಎಲ್ಲವನ್ನೂ ಅಗಸ್ಟ್​ ತಿಂಗಳೊಳಗೆ ಕಾರ್ಯರೂಪಕ್ಕೆ ತರುತ್ತೇವೆ ಎಂದು ಅವರು ವಿವರಿಸಿದರು.

1600 ಮೆಟ್ರಿಕ್ ಟನ್​ ಆಕ್ಸಿಜನ್ ಸಂಗ್ರಹಕ್ಕೆ ಸಿದ್ಧತೆ ನಡೆದಿದ್ದು, ವೈದ್ಯಕೀಯ ಶಿಕ್ಷಣ ಇಲಾಖೆಯ ವತಿಯಿಂದ ಸಂಗ್ರಹವಾಗಲಿದೆ. ಲಿಕ್ಟಿಡ್​ ಆಕ್ಸಿಜನ್​ ಸ್ಟೋರೇಜ್​ಗಾಗಿ ಜಾಗತಿಕ ಟೆಂಡರ್​ ಕರೆದು ಸಂಗ್ರಹ ಸಾಮರ್ಥ್ಯ ಹೆಚ್ಚಳ ಮಾಡುತ್ತೇವೆ. ಜಿಲ್ಲಾಸ್ಪತ್ರೆಗಳಲ್ಲಿ ಕನಿಷ್ಠ 20ಮೆಟ್ರಿಕ್ ಟನ್ ಆಕ್ಸಿಜನ್ ಸಂಗ್ರಹಿಸಿ ಒಟ್ಟಾರೆ 2000-2800 ಮೆಟ್ರಿಕ್ ಟನ್​ ಆಕ್ಸಿಜನ್ ಸಂಗ್ರಹಿಸಿಕೊಳ್ಳಲಾಗುವುದು. ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು. ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಖಾಸಗಿ ಆಸ್ಪತ್ರೆಗೆ ಸೂಚಿಸಿದ್ದೇವೆ. ಜಂಬೋ ಸಿಲಿಂಡರ್​ ಮೂಲಕ 45ಮೆಟ್ರಿಕ್​ ಟನ್​ ಆಕ್ಸಿಜನ್​ ರೀಫಿಲ್ಲಿಂಗ್ ವ್ಯವಸ್ಥೆಯಿಲ್ಲದ 9 ಜಿಲ್ಲೆಗಳಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.

ಅಗಸ್ಟ್ 28 ಹಾಗೂ 29ಕ್ಕೆ ಸಿಇಟಿ ಪರೀಕ್ಷೆ ನಡೆಯಲಿರುವ ಕಾರಣ ಸಿಇಟಿ ವಿದ್ಯಾರ್ಥಿಗಳಿಗೆ ರೈನ್‌ ಬೋ ಆಸ್ಪತ್ರೆ ಮತ್ತು ಎಇಎಸ್‌ ಸಂಸ್ಥೆಯಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ 2 ಲಕ್ಷ ಸರ್ಜಿಕಲ್‌ ಮಾಸ್ಕ್ ವಿತರಿಸಲಾಗುವುದು ಎಂದು ಡಿಸಿಎಂ ಡಾ. ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಪರೀಕ್ಷೆ ನಿರ್ಧಾರ ಸರಿ ಇದೆ
ಎಸ್​ಎಸ್​ಎಲ್​ಸಿ ಪರೀಕ್ಷೆ ಬಗ್ಗೆ ಯಾವುದೇ ಗೊಂದಲವಿಲ್ಲ. ಇಬ್ಬರೂ ಸಚಿವರು ಮಕ್ಕಳ ಹಿತದ ಬಗ್ಗೆ ಮಾತ್ರ ಆಲೋಚನೆ ಮಾಡಿದ್ದಾರೆ, ಪರೀಕ್ಷೆ ಕೂಡ ಮುಖ್ಯ. ಯಾವ ಸಂದರ್ಭದಲ್ಲಿ‌ ಆಗಬೇಕಿರುವುದು ಆಗಲೇಬೇಕು. ಈಗ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆಗಳನ್ನ ಕೈಗೊಂಡು ಪರೀಕ್ಷೆ ನಡೆಸಿದರೆ ತಪ್ಪಿಲ್ಲ ಎಂದು ಡಿಸಿಎಂ ಡಾ.ಅಶ್ವತ್ಥ ನಾರಾಯಣ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 

Covid Vaccine: ರಾಜ್ಯದಲ್ಲಿ ಕೊವಿಡ್ ಲಸಿಕೆಯ ಕೊರತೆ ಇಲ್ಲ: ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟನೆ

Big Update: ರಾಜ್ಯದಲ್ಲಿ ಕೊವಿಡ್ 3ನೇ ಅಲೆ ಎದುರಿಸಲು ಹೊಸ ಸಮಿತಿ ರಚನೆಗೆ ತೀರ್ಮಾನ

(DCM Dr Ashwath Narayan says Covid Vaccine for all higher education students within 10 days)

Published On - 7:48 pm, Tue, 29 June 21