ಆಸ್ಪತ್ರೆಯಲ್ಲಿರುವ ಪರಮೇಶ್ವರ್​​ಗೆ ಏನಾಯ್ತು? ಈಗ ಹೇಗಿದ್ದಾರೆ? ಇಲ್ಲಿದೆ ಡಾಕ್ಟರ್ ರಿಪೋರ್ಟ್

ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್​​ ಅವರು ಅನಾರೋಗ್ಯದಿಂದ ಬಳಲಿದ್ದು, ಕೂಡಲೇ ಆಪ್ತ ಸಹಾಯಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರಮೇಶ್ವರ್‌ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಸಚಿವರು ಆಸ್ಪತ್ರೆಗೆ ದೌಡಾಯಿಸಿದ್ದು, ಎಲ್ಲರಲ್ಲೂ ಆತಂಕ ಮನೆ ಮಾಡಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.ಹಾಗಾದ್ರೆ, ಪರಮೇಶ್ವರ ಅವರಿಗೆ ಏನಾಗಿತ್ತು? ಈಗ ಅವರ ಆರೋಗ್ಯ ಹೇಗಿದೆ ಎನ್ನುವುದನ್ನು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಯಲ್ಲಿರುವ ಪರಮೇಶ್ವರ್​​ಗೆ ಏನಾಯ್ತು? ಈಗ ಹೇಗಿದ್ದಾರೆ? ಇಲ್ಲಿದೆ ಡಾಕ್ಟರ್ ರಿಪೋರ್ಟ್
Dr Srinivas And Dr G Parameshwar
Edited By:

Updated on: Oct 27, 2026 | 4:23 PM

ಬೆಂಗಳೂರು, ಅಕ್ಟೋಬರ್ 27): ಹಠಾತ್ ಆರೋಗ್ಯ ಏರುಪೇರಾದ ಕಾರಣ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್​​ ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಡಾ. ವಿಕೆ ಶ್ರೀನಿವಾಸ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಡಿಸಿಎಂ ಪರಮೇಶ್ವರ್ ಆರೋಗ್ಯವಾಗಿದ್ದಾರೆ. ಈಗ ಊಟ ಮಾಡುತ್ತಿದ್ದಾರೆ. ಹಾರ್ಟ್ ರೇಟ್ ಜಾಸ್ತಿ ಆಗಿದ್ದರಿಂದ ಆಸ್ಪತ್ರೆಗೆ ಬಂದ್ರು. ಈಗ ನಾರ್ಮಲ್ ಆಗಿದ್ದಾರೆ. ಇಸಿಜಿ ಎಲ್ಲ ನಾರ್ಮಲ್ ಇದೆ. ಇನ್ನು ಎರಡು ಗಂಟೆಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಪರಮೇಶ್ವರ್ ಅವರಿಗೆ ಇವತ್ತು ಬೆಳಗ್ಗೆ ಎದೆ ಬಡಿತ ಹೆಚ್ಚಾಗಿದ್ದು, ಅವರು ಆಸ್ಪತ್ರೆಗೆ ಬಂದಾಗ ಹಾರ್ಟ್ ರೇಟ್ ಜಾಸ್ತಿ ಆಗಿತ್ತು. ನಾವು ಅದನ್ನು ಇನ್ವೆಸ್ಟಿಕೇಟ್ ಮಾಡಿ ಅವರಿಗೆ ಚಿಕಿತ್ಸೆ ನೀಡಿದ್ದೇವೆ. ಇವಾಗ ಸ್ಟೇಬಲ್ ಇದ್ದಾರೆ. ಇನ್ನೊಂದು ಎರಡು ಗಂಟೆಗಳಲ್ಲಿ ಡಿಸ್ಚಾರ್ಜ್ ಮಾಡುತ್ತೇವೆ . ಅವರು ಬಂದಾಗ ನಡೆದುಕೊಂಡೆ ಬಂದಿದ್ದು, ಆ ವೇಳೆ ಅವರ ಹಾರ್ಟ್​ ರೇಟ್ 180 ಮೇಲೆ ಇತ್ತು. ಹಾರ್ಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ರೀತಿ‌ ಆಗುತ್ತೆ. ಅದು ಆದಾಗ ಇದಕ್ಕಿಂದ ಹಾಗೆ ಎದೆ ಬಡಿತ ಹೆಚ್ಚಾಗುತ್ತೆ. ಅದು ನಾರ್ಮಲ್ ಆಗಿ ಎಲ್ಲರಿಗೂ ಆಗುತ್ತೆ. ಮತ್ತೆ ಕೆಲವರಿಗೆ ಗೊತ್ತಾಗಲ್ಲ. ಸ್ವಲ್ಪ ಸೂಕ್ಷ್ಮ ದವರಿಗೆ ಗೊತ್ತಾಗುತ್ತೆ ಎಂದು ಹೇಳಿದರು.

ಇದನ್ನೂ ಓದಿ: ಡಿಸಿಎಂ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಡಾ.ಜಿ. ಪರಮೇಶ್ವರ್​​ ದಾಖಲು

ಪರಮೇಶ್ವರ್ ಆರೋಗ್ಯ ವಿಚಾರಿಸಿದ ಕಾರಜೋಳ

ಇನ್ನು ಪರಮೇಶ್ವರ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ಸಂಸದ ಗೋವಿಂದ್ ಕಾರಜೋಳ, ಪರಮೇಶ್ವರ್ ಅವರನ್ನು ಭೇಟಿ‌ ಮಾಡಿ ಬಂದೆ. ಅವರು ಆರೋಗ್ಯವಾಗಿ ಇದ್ದಾರೆ. ಪರಮೇಶ್ವರ ಅವರು ಇವತ್ತು ಸಂಜೆಯೇ ಮನೆಗೆ ಹೋಗ ಬಹುದು ಅಂತ ಡಾಕ್ಟರ್ ಹೇಳಿದ್ದಾರೆ. ಅವರು ವಿಶ್ರಾಂತಿಯಲ್ಲಿ ಇದ್ರು . ಅವರ ಮನೆಯವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದರು.ಆದ್ದರಿಂದ ಯಾರು ಕೂಡ ಅವರ ಆರೋಗ್ಯದ ಬಗ್ಗೆ ಯಾರು ಚಿಂತೆ ಮಾಡ ಬಾರದು ಕೋರುತ್ತೇನೆ.

ಕಾರ್ಯಕ್ರಮದಲ್ಲೇ ಸುಸ್ತಾಗಿದ್ದ ಡಿಸಿಎಂ

ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಇಂದು ಬೆಂಗಳೂರಿನಲ್ಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ‘ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್–2026’ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ ಚಾಲನೆ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಬಳಲಿದಂತೆ ಕಂಡುಬಂದ ಕಾರಣ ಆಪ್ತ ಸಹಾಯಕರು, ಭದ್ರತಾ ಸಿಬ್ಬಂದಿ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:48 pm, Tue, 27 October 26

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us