ಮಧುಗಿರಿಯಲ್ಲಿ ಕಾಂಗ್ರೆಸ್ ಜನಧ್ವನಿ ಯಾತ್ರೆ; ಕಾಂಗ್ರೆಸ್ ನಾಯಕತ್ವ ಅನಿವಾರ್ಯವಾಗಿದೆ ಎಂದ ಜಿ.ಪರಮೇಶ್ವರ್

ಮಧುಗಿರಿಯಲ್ಲಿ ಕಾಂಗ್ರೆಸ್ ಜನಧ್ವನಿ ಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೇಶದಲ್ಲಿರುವ ಬಡತನ ನಿರ್ಮೂಲನೆ ಆಗಬೇಕಾದರೆ, ಕಾಂಗ್ರೆಸ್ ನಾಯಕತ್ವ ಅನಿವಾರ್ಯವಾಗಿದೆ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಮಧುಗಿರಿಯಲ್ಲಿ ಕಾಂಗ್ರೆಸ್ ಜನಧ್ವನಿ ಯಾತ್ರೆ; ಕಾಂಗ್ರೆಸ್ ನಾಯಕತ್ವ ಅನಿವಾರ್ಯವಾಗಿದೆ ಎಂದ  ಜಿ.ಪರಮೇಶ್ವರ್
ಮಾಜಿ ಡಿಸಿಎಂ ಜಿ.ಪರಮೇಶ್ವರ್
Follow us
shruti hegde
| Updated By: ರಶ್ಮಿ ಕಲ್ಲಕಟ್ಟ

Updated on: Mar 07, 2021 | 6:27 PM

ತುಮಕೂರು: ಮಧುಗಿರಿಯಲ್ಲಿ ಕಾಂಗ್ರೆಸ್ ಜನಧ್ವನಿ ಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ದೇಶದಲ್ಲಿರುವ ಬಡತನ ನಿರ್ಮೂಲನೆ ಆಗಬೇಕಾದರೆ, ಕಾಂಗ್ರೆಸ್ ನಾಯಕತ್ವ ಅನಿವಾರ್ಯವಾಗಿದೆ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ 7 ವರ್ಷಗಳಿಂದ ಏನಾಗ್ತಿದೆ, ಬಿಜೆಪಿ ಏನ್ ಮಾಡ್ತಿದೆ? ಜನರ ಬಡತನ ನಿರ್ಮೂಲನೆ ಮಾಡುತ್ತಾರೆಂದು ನಂಬಿದ್ದರು. ಉದ್ಯೋಗ ಸೃಷ್ಟಿ ಮಾಡುತ್ತಾರೆಂದು ಕೂಡ ಭಾವಿಸಿದ್ದರು. ಆದರೆ ಈಗ ಏನಾಗಿದೆ? ವ್ಯವಸ್ಥೆಗೆ ಬೆಂಕಿ ಬಿದ್ದು ಹೋಗಿದೆ. ದೇಶದ ಅರ್ಥವ್ಯವಸ್ಥೆಯೂ ಕುಸಿದಿದೆ. ಇನ್ನು, ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇಂಧನದ ಮೇಲೆ ಅತಿ ಹೆಚ್ಚು ತೆರಿಗೆ ಹಾಕ್ತಿದ್ದಾರೆ. ಇಡೀ ವಿಶ್ವದಲ್ಲೇ ಭಾರತದಲ್ಲಿ ಅತಿ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಶೇ. 69ರಷ್ಟು ತೆರಿಗೆ ಹಾಕುವ ಅಗತ್ಯವಿದೆಯಾ? ಎಂದು ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ತೆರಿಗೆ ರೂಪದಲ್ಲಿ ಸಂಗ್ರಹಿಸಿದ ಹಣ ಏನು ಮಾಡುತ್ತಿದ್ದಾರೆ. ಇವರು ಯಾವುದಾದರು ಹೊಸ ಯೋಜನೆ ತಂದಿದ್ದಾರಾ? ದೇಶದಲ್ಲಿ ಸಾಮಾನ್ಯ ಜನರು ಪರದಾಡುವ ಸ್ಥಿತಿ ಬಂದಿದೆ. ಅತ್ಯಂತ ಕೆಟ್ಟ ಸರ್ಕಾರ ಇದೆ ಅಂದರೆ ಅದು ಬಿಜೆಪಿ ಸರ್ಕಾರ. ಒಂದೆಡೆ ಪಾಕಿಸ್ತಾನ, ಚೀನಾ ದೇಶಗಳು ದಬ್ಬಾಳಿಕೆ ಮಾಡುತ್ತಿವೆ. ನಿಮ್ಮ ವಿದೇಶಾಂಗ ನೀತಿ ಏನಾಯ್ತು, ಅದನ್ನ ಸರಿಪಡಿಸಿದ್ದೀರಾ? ಕೇಂದ್ರ ಬಿಜೆಪಿ ಸರ್ಕಾರಕ್ಕೆ ನೇರ ಪ್ರಶ್ನೆ ಕೇಳಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನದ ಬಗ್ಗೆ ಬದ್ಧತೆ ಗೌರವ ಇದೆ. ಬಿಜೆಪಿಗೆ ಸಂವಿಧಾನದ ಬಗ್ಗೆ ಗೌರವ ಬದ್ಧತೆ ಇಲ್ಲ. ಯಾಕೆಂದರೆ ಬಿಜೆಪಿಗೆ ಪ್ರಸ್ತುತ ವ್ಯವಸ್ಥೆಗೆ ಪೂರಕವಾಗಿದ್ದಾರೆ. ಬಡವರು ಬಡವರಾಗಿರೋದು ಜೊತೆಗೆ ಶ್ರೀಮಂತರು ಶ್ರೀಮಂತರಾಗಿರೋದು ಬಿಜೆಪಿಗೆ ಇಷ್ಟ. ಈ ಕುರಿತು ಬದಲಾವಣೆ ಅವರಿಗೆ ಇಷ್ಟ ಇಲ್ಲ. ‘ಏನ್ಲಾ ಇಷ್ಟು ಎತ್ತರಕ್ಕೆ ಬೆಳೆದು ಬಿಟ್ಟೆ’ ಎಂದು ಹಳ್ಳಿಗಳಲ್ಲಿ ಹೇಳುತ್ತಾರೆ. ಕೆಲವು ವರ್ಗದವರು ಬೆಳೆಯೋದು ಕೆಲವರಿಗೆ ಇಷ್ಟ ಇಲ್ಲ. ಅನಂತಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾಡೋ ಮಾತಾಡುತ್ತಾರೆ. ಸಂವಿಧಾನಕ್ಕೆ ತದ್ವಿರುದ್ದವಾದವರು ದುರದೃಷ್ಟವಶಾತ್ ಎರಡೂ ಕಡೆ ಅಧಿಕಾರದಲ್ಲಿ ಇದ್ದಾರೆ. ಯಡಿಯೂರಪ್ಪ ಹಿಂಬಾಗಿಲಿನಿಂದ ಮುಖ್ಯಮಂತ್ರಿ ಆಗಿದ್ದಾರೆ ಎಂದಿದ್ದಾರೆ.

ಈ ಕುರಿತಂತೆ ಮಾತನಾಡುತ್ತಾ, ಜನರಿಂದ ಲೂಟಿ ಮಾಡಿರೋ ದುಡ್ಡಿನಿಂದ ಅವರು ಮುಖ್ಯಮಂತ್ರಿ ಆಗಿದ್ದಾರೆ. ಶಾಸಕರನ್ನು ಖರೀದಿ ಮಾಡಿದ್ರು. ಲಜ್ಜೆಗೆಟ್ಟು ಮುಖ್ಯಮಂತ್ರಿ ಆದವರಿಗೆ ಮಾನ ಮರ್ಯಾದೆ ಇರಲು ಸಾದ್ಯನಾ? ಬಡವರ ಅಭಿವೃದ್ಧಿ ಮಾಡಲು ಸಾಧ್ಯನಾ? ನಾನು ಅಕ್ಕಿಯನ್ನು ನನ್ನಪ್ಪನ ಮನೆಯಿಂದ ಕೊಟ್ಟಿಲ್ಲ. ನಿಮ್ಮ ದುಡ್ಡು ನಿಮಗೆ ಕೊಟ್ಟಿದ್ದೇನೆ. ಈಗ ಅನ್ನಭಾಗ್ಯ ಅಕ್ಕಿ 3 ಕೆಜಿಗೆ ಇಳಿಸ್ತೀನಿ ಅಂತಾರೆ ಎಂದಿದ್ದಾರೆ.

ಇದನ್ನೂ ಓದಿ: ದೂರು ಹಿಂಪಡೆದಂತೆ ಟಿವಿಯಲ್ಲಿ ಪ್ರಸಾರವಾಗಿದ್ದನ್ನು ಹಿಂಪಡೆಯಲು ಸಾಧ್ಯವೇ: ಸಿದ್ದರಾಮಯ್ಯ ವ್ಯಂಗ್ಯ

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡೆತ್ತುಗಳಲ್ಲ, ಗುದ್ದಾಡುವ ಹೋರಿಗಳು: ಬಿ.ಶ್ರೀರಾಮುಲು

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ