Degree College Classes: ಅಕ್ಟೋಬರ್1 ರಿಂದ ಪ್ರಥಮ ವರ್ಷದ ಪದವಿ‌ ವಿದ್ಯಾರ್ಥಿಗಳಿಗೆ ತರಗತಿ ಆರಂಭ: ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ ನಾರಾಯಣ ಮಾಹಿತಿ

| Updated By: guruganesh bhat

Updated on: Jul 16, 2021 | 6:55 PM

ಜುಲೈ 26 ರಿಂದ 28ರವರೆಗೆ ಡಿಪ್ಲೊಮಾ ಪ್ರಾಕ್ಟಿಕಲ್ ಪರೀಕ್ಷೆ ನಡೆಯಲಿದ್ದು, ಅಗಸ್ಟ್ 2 ರಿಂದ ಅಗಸ್ಟ್ 21ರವರೆಗೆ ಥಿಯರಿ ಡಿಪ್ಲೊಮಾ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದರು.

Degree College Classes: ಅಕ್ಟೋಬರ್1 ರಿಂದ ಪ್ರಥಮ ವರ್ಷದ ಪದವಿ‌ ವಿದ್ಯಾರ್ಥಿಗಳಿಗೆ ತರಗತಿ ಆರಂಭ: ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ ನಾರಾಯಣ ಮಾಹಿತಿ
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ಅಗಸ್ಟ್ 1 ರಿಂದ ಪ್ರಥಮ ವರ್ಷದ ಪದವಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ಅಕ್ಟೋಬರ್1 ರಿಂದ ಪ್ರಥಮ ವರ್ಷದ ಪದವಿ‌ ವಿದ್ಯಾರ್ಥಿಗಳಿಗೆ(Degree College Classes) ತರಗತಿ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ತಿಳಿಸಿದರು. ಈಗಾಗಲೇ ಕೆಲವು ವಿಶ್ವವಿದ್ಯಾಲಯಗಳು Odd ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಿದ್ದು, ಪರೀಕ್ಷೆ ನಡೆಸದ ಬೆಂಗಳೂರು ವಿವಿ, ಗುಲ್ಬರ್ಗ ವಿವಿ, ಕರ್ನಾಟಕ ವಿವಿಗಳಿಗೆ ಅಗಸ್ಟ್ 15 ರೊಳಗೆ ಬಾಕಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಪದವಿಯ Even ಸೆಮಿಸ್ಟರ್ ಪರೀಕ್ಷೆಗಳು ಅಕ್ಟೋಬರ್ 15 ರೊಳಗೆ ನಡೆಸಲು ಸೂಚನೆ ನೀಡಲಾಗಿದೆ. ಸದ್ಯ ವರ್ಚುವಲ್ ತರಗತಿಗಳನ್ನು ನಡೆಸಲಾಗುತ್ತಿದ್ದು, Even ಸೆಮಿಸ್ಟರ್ ತರಗತಿ ಮೇ ತಿಂಗಳಿಂದಲೇ ಆರಂಭವಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಜುಲೈ 26 ರಿಂದ 28ರವರೆಗೆ ಡಿಪ್ಲೊಮಾ ಪ್ರಾಕ್ಟಿಕಲ್ ಪರೀಕ್ಷೆ ನಡೆಯಲಿದ್ದು, ಅಗಸ್ಟ್ 2 ರಿಂದ ಅಗಸ್ಟ್ 21ರವರೆಗೆ ಥಿಯರಿ ಡಿಪ್ಲೊಮಾ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದರು.

SSLC Exam 2021: ಜುಲೈ 19 ಹಾಗೂ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಕೊರೊನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exams 2021) ಜುಲೈ 19 ಹಾಗೂ 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಕೆಎಸ್​ಆರ್​ಟಿಸಿ (KSRTC) ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಪರೀಕ್ಷೆಯ ದಿನಗಳಂದು ಅಂದರೆ ಜುಲೈ 19 ಹಾಗೂ ಜುಲೈ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು (Free Service) ಅವಕಾಶ ಮಾಡಿಕೊಡುವುದಾಗಿ ತಿಳಿಸಿದೆ.

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದ್ದು, ಪರೀಕ್ಷಾ ಪ್ರಮಾಣ ಪತ್ರ ತೋರಿಸುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ರಾಜ್ಯಾದ್ಯಂತ ಎಲ್ಲಾ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದ್ದು, ಪರೀಕ್ಷಾ ಕೇಂದ್ರದ ತನಕ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಈ ವಿಚಾರದ ಕುರಿತು ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ್​ ಆದೇಶ ಹೊರಡಿಸಿದ್ದು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಜುಲೈ 19 ಹಾಗೂ ಜುಲೈ 22ರಂದು ತಾವು ವಾಸಿಸುವ ಪ್ರದೇಶದಿಂದ ಪರೀಕ್ಷಾ ಕೇಂದ್ರದ ತನಕ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣ ಬೆಳೆಸಬಹುದಾಗಿದೆ. ಪರೀಕ್ಷಾ ಪ್ರಮಾಣ ಪತ್ರ ತೋರಿಸಿದರೆ ಸಾಕು ಯಾವುದೇ ರೀತಿಯ ಶುಲ್ಕ ತೆರಬೇಕಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಸಾಮಾನ್ಯ ಹಾಗೂ ವೇಗದೂತ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ ಮುಗಿಸಿ ವಾಪಾಸು ಮನೆಗೆ ಬರುವಾಗಲೂ ಇದು ಅನ್ವಯವಾಗಲಿದೆ. ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹಾಗೂ ಪರೀಕ್ಷಾ ಕೇಂದ್ರದಿಂದ ಮರಳಿ ಮನೆಗೆ ಬರುವಾಗ ಪರೀಕ್ಷಾ ಪ್ರಮಾಣ ಪತ್ರ ತೋರಿಸಿ ಉಚಿತ ಪ್ರಯಾಣ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ರೀತಿಯಲ್ಲೂ ಕೊರೊನಾ ನಿಯಮಾವಳಿಗಳನ್ನು ಪಾಲಿಸುವುದು ಅಗತ್ಯವಾಗಿದೆ.

ಇದನ್ನೂ ಓದಿ: 

JEE Main 2021: ಜು.20ರಿಂದ ನಡೆಯಲಿರುವ ಜೆಇಇ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್​ಲೋಡ್ ಮಾಡಿಕೊಳ್ಳಿ..

NEET UG 2021 Registration: ನೀಟ್​ ಪರೀಕ್ಷೆಗೆ ನೋಂದಣಿ ಇಂದಿನಿಂದಲೇ ಪ್ರಾರಂಭ; ಸಿಂಪಲ್​ ಆಗಿ ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ..

(DCM Higher Education Minister Dr Ashwath Narayan says Karnataka Degree first year classes starts from October 1)