ಬೆಡ್ಗಳು ಖಾಲಿ ಇದ್ದರೂ ರೋಗಿಗಳು ಏಕೆ ಬರುತ್ತಿಲ್ಲ? ಬಿಮ್ಸ್ ನಿರ್ದೇಶಕರಿಗೆ ಡಿಸಿಎಂ ಲಕ್ಷ್ಮಣ ಸವದಿ ತರಾಟೆ
ಈ ಮಾಹಿತಿ ತಿಳಿದು ಕೋಪಗೊಂಡ ಡಿಸಿಎಂ ಸವದಿ, ನೀವು ಜನರ ಜೀವ ತಿನ್ನುತ್ತೀರಲ್ರಿ.. ನಿಮಗೆ ದೊಡ್ಡ ನಮಸ್ಕಾರ. ನಿಮ್ಮಿಂದ ಸರ್ಕಾರಕ್ಕೆ ಒಳ್ಳೇ ಹೆಸರು ಬರ್ತಿದೆ ಎಂದು ವ್ಯಂಗ್ಯವಾಗಿ ಗರಂ ಆದರು.
ಬೆಳಗಾವಿ: ಬೆಳಗಾವಿಯಲ್ಲಿ ಕೊರೊನಾ ನಿರ್ವಹಣೆ ಕುರಿತು ಡಿಸಿಎಂ ಲಕ್ಷ್ಮಣ ಸವದಿ ಸಭೆ ನಡೆಸಿ ಬಿಮ್ಸ್ ನಿರ್ದೇಶಕ ಬಿಮ್ಸ್ ನಿರ್ದೇಶಕ ವಿನಯ್ ದಾಸ್ತಿಕೊಪ್ಪಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಐಸಿಯು ಬೆಡ್, ಆಕ್ಸಿಜನ್ ಬೆಡ್‌ಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಬಿಮ್ಸ್ ನಿರ್ದೇಶಕ ವಿನಯ್ ದಾಸ್ತಿಕೊಪ್ಪ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇರುವ ಬಗ್ಗೆ ಮಾಹಿತಿ ನೀಡಿದರು.
ಈ ಮಾಹಿತಿ ತಿಳಿದು ಕೋಪಗೊಂಡ ಡಿಸಿಎಂ ಸವದಿ, ನೀವು ಜನರ ಜೀವ ತಿನ್ನುತ್ತೀರಲ್ರಿ.. ನಿಮಗೆ ದೊಡ್ಡ ನಮಸ್ಕಾರ. ನಿಮ್ಮಿಂದ ಸರ್ಕಾರಕ್ಕೆ ಒಳ್ಳೇ ಹೆಸರು ಬರ್ತಿದೆ ಎಂದು ವ್ಯಂಗ್ಯವಾಗಿ ಗರಂ ಆದರು. ಬೆಡ್ಗಳು ಖಾಲಿ ಇದ್ದರೂ ರೋಗಿಗಳು ಏಕೆ ಬರುತ್ತಿಲ್ಲ? ತಾಲೂಕು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಸಿಗುತ್ತಿಲ್ಲ. ಆದರೆ ಜಿಲ್ಲಾಸ್ಪತ್ರೆಗೆ ರೋಗಿಗಳು ಯಾಕೆ ಬರುತ್ತಿಲ್ಲ? ಬಿಮ್ಸ್ ಆಸ್ಪತ್ರೆ ಅಂದ್ರೆ ಅಸ್ತವ್ಯಸ್ತ ಆಸ್ಪತ್ರೆ ಅಂತಿದ್ದಾರೆ. ಬಿಮ್ಸ್ಗೆ ಹೋದರೆ ಜೀವಂತವಾಗಿ ಬರಲ್ಲ ಅಂತಿದ್ದಾರೆ. ಬಿಮ್ಸ್ ಆಸ್ಪತ್ರೆ ಬಗ್ಗೆ ಜನ ಈ ರೀತಿ ಮಾತಾಡ್ತಿದ್ದಾರೆ ಎಂದು ಪ್ರಶ್ನೆಗಳ ಸುರಿಮಳೆಗೈದರು.
ಕರ್ನಾಟಕ ಕೊರೊನಾ ಲೆಕ್ಕಾಚಾರ ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿನ ಅಂಕಿಗಳು ಬುಧವಾರ ಮತ್ತೊಂದು ದಾಖಲೆ ಬರೆದಿವೆ. ರಾಜ್ಯದಲ್ಲಿ ಒಟ್ಟು 39,047 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 229 ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 22,596 ಜನರಿಗೆ ಸೋಂಕು ದೃಢಪಟ್ಟಿದ್ದು, 137 ಜನರು ಸಾವನ್ನಪ್ಪಿದ್ದಾರೆ.
ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 14,39,822ಕ್ಕೆ (14.39 ಲಕ್ಷ) ಏರಿಕೆಯಾಗಿದೆ. ಈ ಪೈಕಿ 10,95,883 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 229 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 15,036ಕ್ಕೆ ಏರಿಕೆಯಾಗಿದೆ. 3,28,884 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಲ್ಲಿ ಇಂದು ಒಂದೇ ದಿನ 22,596 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 7,10,347ಕ್ಕೆ ಏರಿಕೆಯಾಗಿದೆ. ಈ ಪೈಕಿ 4,80,055 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 137 ಜನರ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ ಸತ್ತವರ ಒಟ್ಟು ಸಂಖ್ಯೆ 6,139ಕ್ಕೆ ಏರಿಕೆಯಾಗಿದೆ. 224152 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಹೊಸದಾಗಿ 39,047 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 22,596 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಉಳಿದಂತೆ 5 ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೈಸೂರು 1759, ಕೋಲಾರ 1194, ತುಮಕೂರು 1174, ಬಳ್ಳಾರಿ 1106, ಹಾಸನ 1001 ಜನರಲ್ಲಿ ಸೋಂಕು ದೃಢಪಟ್ಟಿದೆ.
ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಇಂದು 39,047 ಜನರಿಗೆ ಕೊರೊನಾ ಸೋಂಕು, 137 ಸಾವು
(DCM Laxman Savadi arrogance about BIMS hospital Belagavi)