ಖುದ್ದು ಪ್ರಧಾನಿ ಮೋದಿ ಭೇಟಿಗೆ ಸಮಯ ಕೋರಿದ ಪರಮೇಶ್ವರ್, ಇಲ್ಲಿದೆ ಡಿಸಿಎಂ ಪತ್ರದ ವಿವರ
ಕರ್ನಾಟಕ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದ ತುರ್ತು ಆರ್ಥಿಕ ನೆರವಿನ ಅವಶ್ಯಕತೆ ಇದೆ. ನೆರವು ಕೋರಿ ಸಿದ್ಧಪಡಿಸಿರುವ ಮನವಿಯನ್ನು ಖುದ್ದಾಗಿ ಸಲ್ಲಿಸಲು ಸಮಯ ನೀಡಿ ತಮ್ಮನ್ನು ಭೇಟಿಯಾಗಲು ಸಮಯಾವಕಾಶ ನೀಡುವಂತೆ ಎಂದು ಡಿಸಿಎಂ ಪರಮೇಶ್ವರ್ ಅವರು ಪತ್ರ ಬರೆದಿದ್ದಾರೆ. ಜೊತೆಗೆ ಗೃಹ ಸಚಿವ ಅಮಿತ್ ಶಾ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ಗೂ ಡಿಸಿಎಂ ಪತ್ರ ಬರೆದಿದ್ದಾರೆ.

ಬೆಂಗಳೂರು (ನವೆಂಬರ್.03): ಕರ್ನಾಟಕದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಅಡಿಯಲ್ಲಿ 22,400.58 ಕೋಟಿ ಪರಿಹಾರವನ್ನು ತುರ್ತಾಗಿ ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕೋರಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ. 226 ತಾಲೂಕುಗಳಲ್ಲಿ ಬರದಿಂದ 57.93 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಇದರಿಂದ 62,481.88 ಕೋಟಿ ರೂಪಾಯಿ ನಷ್ಟವಾಗಿದೆ. ಹೀಗಾಗಿ ಪರಿಹಾರದ ಬೇಡಿಕೆ 22,400.58 ಕೋಟಿಗೆ ಹೆಚ್ಚಳ ಮಾಡಲು ಪತ್ರದಲ್ಲಿ ಮನವಿ ಮಾಡಿದ್ದಾರೆ. ಅಲ್ಲದೇ ಮೂವರ ಭೇಟಿಗೂ ಸಮಯ ಕೇಳಿದ್ದಾರೆ.
ಕರ್ನಾಟಕವು ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ಗಂಭೀರ ಕೃಷಿ ಬಿಕ್ಕಟ್ಟನ್ನು ಎದುರಿಸುತ್ತಿದೆ. ರಾಜ್ಯದ 226 ತಾಲೂಕುಗಳು ಬರದಿಂದ ಬಾಧಿತವಾಗಿದೆ. 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಅಂದಾಜು 62,481.88 ಕೋಟಿ ಆರ್ಥಿಕ ನಷ್ಟ ಸಂಭವಿಸಿದೆ. ಈ ಬಿಕ್ಕಟ್ಟಿನಿಂದ ಲಕ್ಷಾಂತರ ರೈತ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ವಿಶೇಷವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರ ಜೀವನೋಪಾಯ ಹಾಗೂ ಭವಿಷ್ಯ ಅನಿಶ್ಚಿತತೆಯಿಂದ ಕೂಡಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.
ಇದನ್ನೂ ಓದಿ: ಕಬ್ಬು ಬೆಳೆಗಾರರ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮೋದಿಗೆ ಡಿಕೆಶಿ ಮತ್ತೊಂದು ಪತ್ರ
ರಾಜ್ಯದ 226 ತಾಲ್ಲೂಕುಗಳು ಬರ ಪೀಡಿತವಾಗಿದ್ದು, 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇದರಿಂದ 62,481.88 ಕೋಟಿ ಅಂದಾಜು ಆರ್ಥಿಕ ನಷ್ಟ ಉಂಟಾಗಿದ್ದು, ನಮ್ಮ ರೈತರು ಹಿಂದೆಂದೂ ಕಾಣದಂತಹ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರವು SDRF, NDRF ಪರಿಹಾರ ಮಾನದಂಡಗಳನ್ನು ಪರಿಷ್ಕರಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಒಟ್ಟು ಬರ ಪರಿಹಾರದ ಬೇಡಿಕೆಯು 22,400.58 ಕೋಟಿಗೆ ಹೆಚ್ಚಳವಾಗಿದೆ. ಆದರೆ ಪರಿಷ್ಕೃತ ಪರಿಹಾರ ಮಾನದಂಡಗಳು ರೈತರ ನೈಜ ಕೃಷಿ ವೆಚ್ಚ ಹಾಗೂ ಅವರು ಅನುಭವಿಸಿರುವ ನಷ್ಟಕ್ಕೆ ಹೋಲಿಸಿದರೆ ಸಾಕಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪರಿಹಾರ ಮಾನದಂಡಗಳನ್ನು ಮರುಪರಿಶೀಲಿಸಬೇಕು, ಹಳೆಯ ಕೃಷಿ ಗಣತಿಯ ಬದಲು ಕರ್ನಾಟಕದ FRUITS ದತ್ತಾಂಶವನ್ನು ಬಳಸಬೇಕು ಹಾಗೂ ರಾಜ್ಯಕ್ಕೆ ಅಗತ್ಯವಿರುವ ಪರಿಹಾರದ ಮೊತ್ತವನ್ನು ತ್ವರಿತವಾಗಿ ಅನುಮೋದಿಸಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಖುದ್ದು ಭೇಟಿಗೆ ಸಮಯ ಕೇಳಿದ ಪರಂ
ರಾಜ್ಯದ ಬರ ಪರಿಸ್ಥಿತಿಯ ಗಂಭೀರತೆಯನ್ನು ಖುದ್ದಾಗಿ ವಿವರಿಸಲು ಹಾಗೂ ಪರಿಹಾರದ ಬೇಡಿಕೆಯನ್ನು ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವರು ಮತ್ತು ಕೃಷಿ ಸಚಿವರ ಭೇಟಿಗೆ ಸಮಯವಕಾಶ ಕೋರಿದ್ದಾರೆ.
I have written to Prime Minister Shri @narendramodi, Union Home Minister Shri @AmitShah and Union Agriculture Minister Shri @ChouhanShivraj, seeking urgent intervention and financial assistance for Karnataka’s drought-affected farmers.
With 226 taluks affected, crop damage across 57.93 lakh hectares and estimated economic losses of ₹62,481.88 crore, our farmers are facing an unprecedented crisis.
Following the revision of SDRF/NDRF norms, Karnataka’s drought-relief requirement has increased to ₹22,400.58 crore. However, the revised assistance norms remain inadequate when compared to the actual cost of cultivation and the magnitude of farmers’ losses.
I have urged the Union Government to reconsider these norms, adopt updated agricultural records such as Karnataka’s FRUITS database and ensure the early approval and release of the required assistance.
I have also sought appointments with Prime Minister Shri Narendra Modi, Union Home Minister Shri Amit Shah and Union Agriculture Minister Shri Shivraj Singh Chouhan to personally present Karnataka’s case.
Our farmers deserve more than incremental relief. They need timely, meaningful support to rebuild their livelihoods. Protecting their future is a shared responsibility that must rise above political differences.
— Dr. G Parameshwara (@DrParameshwara) November 3, 2026
ನಮ್ಮ ರೈತರಿಗೆ ಕೇವಲ ಅಲ್ಪ ಪ್ರಮಾಣದ ಪರಿಹಾರದ ಹೆಚ್ಚಳ ಸಾಕಾಗುವುದಿಲ್ಲ. ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಮತ್ತೆ ಆರ್ಥಿಕವಾಗಿ ಚೇತರಿಸಿಕೊಂಡು, ತಮ್ಮ ಜೀವನೋಪಾಯವನ್ನು ಕಟ್ಟಿಕೊಳ್ಳಲು ಅಗತ್ಯವಾದ ನೆರವು ಸಕಾಲದಲ್ಲಿ ದೊರೆಯಬೇಕು. ರೈತರ ಹಿತಾಸಕ್ತಿಯ ವಿಚಾರದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿಗೆ ಅವಕಾಶವಿಲ್ಲ. ಸಂಕಷ್ಟದಲ್ಲಿರುವ ರೈತರ ಬೆಂಬಲಕ್ಕೆ ನಿಲ್ಲುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಜವಾಬ್ದಾರಿಯಾಗಿದೆ ಎಂದಿದ್ದಾರೆ.




