60% Signboards in Kannada: ಶೇ.60 ರಷ್ಟು ಕನ್ನಡ ಬೋರ್ಡ್ ಅಳವಡಿಕೆಗೆ ಇದ್ದ ಗಡುವು ವಿಸ್ತರಣೆ

| Updated By: Rakesh Nayak Manchi

Updated on: Feb 29, 2024 | 10:16 AM

ರಾಜ್ಯದ ಎಲ್ಲಾ ಮಳಿಗೆಗಳಿಗೆ ಅಳವಡಿಸುವ ಬೋರ್ಡ್​ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಅದರಂತೆ, ಬೋರ್ಡ್​ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ. ಈ ನಡುವೆ ಒಂದಷ್ಟು ವ್ಯಾಪಾರಸ್ತರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದ್ದರು. ಹೀಗಾಗಿ ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಇದ್ದ ಗಡುವನ್ನು ವಿಸ್ತರಿಸಲಾಗಿದೆ.

60% Signboards in Kannada: ಶೇ.60 ರಷ್ಟು ಕನ್ನಡ ಬೋರ್ಡ್ ಅಳವಡಿಕೆಗೆ ಇದ್ದ ಗಡುವು ವಿಸ್ತರಣೆ
ಶೇ.60 ರಷ್ಟು ಕನ್ನಡ ಬೋರ್ಡ್ ಅಳವಡಿಕೆಗೆ ಇದ್ದ ಗಡುವು ಎರಡು ವಾರಗಳಿಗೆ ವಿಸ್ತರಣೆ
Image Credit source: PTI
Follow us on

ಬೆಂಗಳೂರು, ಫೆ.29: ರಾಜ್ಯದ ಎಲ್ಲಾ ಮಳಿಗೆಗಳಿಗೆ ಅಳವಡಿಸುವ ಬೋರ್ಡ್​ಗಳಲ್ಲಿ (Kannada Signboards) ಶೇ.60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಅದರಂತೆ, ಬೋರ್ಡ್​ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ. ಈ ನಡುವೆ ಒಂದಷ್ಟು ವ್ಯಾಪಾರಸ್ತರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದ್ದರು. ಹೀಗಾಗಿ ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಎರಡು ವಾರಗಳ ಕಾಲವಕಾಶ ನೀಡಲಾಗಿದೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದರು.

ಇದನ್ನೂ ಓದಿ: ಶೇ.60 ರಷ್ಟು ಕನ್ನಡ ಬೋರ್ಡ್ ಹಾಕದ ಅಂಗಡಿಗಳ ಲೈಸೆನ್ಸ್ ರದ್ದು: ಬಿಬಿಎಂಪಿ ಎಚ್ಚರಿಕೆ

ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. 2 ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌ ಎಂದು ನಿರೀಕ್ಷಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಟ್ವೀಟ್

ಕನ್ನಡ ನಾಮಫಲಕ ಹಾಕದಿದ್ದರೆ ಅಂಗಡಿಗಳನ್ನು ಬಂದ್ ಮಾಡುತ್ತೇವೆ. ಈಗಾಗಲೇ ಶೇಕಡಾ 90ರಷ್ಟು ಕನ್ನಡ ನಾಮಫಲಕ ಹಾಕಲಾಗಿದೆ. ಇನ್ನು ಉಳಿದಿರುವುದು 3 ಸಾವಿರ ನಾಮಫಲಕ ಮಾತ್ರ​. ಮತ್ತಷ್ಟು ಸಮಯ ನೀಡುವಂತೆ ಅಂತಾರಾಷ್ಟ್ರೀಯ ಕಂಪನಿಗಳು, SBI, ಕೆನರಾ ಬ್ಯಾಂಕ್ ಮನವಿ ನೀಡಿವೆ. ಈ ಬಗ್ಗೆ ಇಂದು ಸಂಜೆ ತೀರ್ಮಾನ ಮಾಡುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದ್ದರು.

ಡೆಡ್​ಲೈನ್ ಮುಕ್ತಾಯ ಹಿನ್ನೆಲೆ ಇಂದು ನಾಮಫಲಕ ಪರಿಶೀಲನೆ ನಡೆಸಲು ಮುಂದಾದ ಪಾಲಿಕೆ ಅಧಿಕಾರಿಗಳು, ಶೇಕಡಾ 60ರಷ್ಟು ಕನ್ನಡ ನಾಮಫಲಕ ಅಳವಡಿಸದಿದ್ದರೆ ಪರವಾನಗಿ ರದ್ದು ಮಾಡಿ ಬೀಗ ಜಡಿಯುವುದಾಗಿ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ವಿಕಾಸ್ ಕಿಶೋರ್ ಅವರು ಈಗಾಗಲೇ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ