AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Good News: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ: ಸಿಎಂ ಬೊಮ್ಮಾಯಿ

DA Hike for Government Employees: ತುಟ್ಟಿಭತ್ಯೆ ಹೆಚ್ಚಳಕ್ಕಾಗಿ ಸರ್ಕಾರವು ₹ 1447 ಕೋಟಿ ವಾರ್ಷಿಕ ವೆಚ್ಚ ಭರಿಸಲಿದೆ. ಈ ಸಂಬಂಧ ಶೀಘ್ರ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Good News: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ: ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Apr 05, 2022 | 12:45 PM

ಬೆಂಗಳೂರು: ಎಲ್ಲ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1ರಿಂದ ಜಾರಿಗೆ ಬರುವಂತೆ ಶೇ 2.75ರಷ್ಟು ತುಟ್ಟಿಭತ್ಯೆ (Dearness Allowance) ಹೆಚ್ಚಿಸಲು ನಿರ್ಧರಿಸಲಾಗಿದೆ. ತುಟ್ಟಿಭತ್ಯೆ ಹೆಚ್ಚಳಕ್ಕಾಗಿ ಸರ್ಕಾರವು ₹ 1447 ಕೋಟಿ ವಾರ್ಷಿಕ ವೆಚ್ಚ ಭರಿಸಲಿದೆ. ಈ ಸಂಬಂಧ ಶೀಘ್ರ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತಿಳಿಸಿದ್ದಾರೆ.

ತುಟ್ಟಿಭತ್ಯೆಯನ್ನು ಶೇ 5ರಷ್ಟು ಹೆಚ್ಚಿಸಬೇಕು ಎಂದು ಸರ್ಕಾರಿ ನೌಕರರು ಮನವಿ ಮಾಡಿದ್ದರು. ಆದರೆ ಸರ್ಕಾರವು ಶೇ 2.75ರಷ್ಟು ತುಟ್ಟಿಭತ್ಯೆಗೆ ಸಮ್ಮತಿಸಿದೆ. ಈ ಹಿಂದಿನ ಮೂರು ಅವಧಿಗಳ ಹೆಚ್ಚಳದ ಲೆಕ್ಕಾಚಾರದಂತೆ ತುಟ್ಟಿಭತ್ಯೆ ಶೇ 11ರಷ್ಟು ಹೆಚ್ಚಾಗಿತ್ತು. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಮೂಲ ವೇತನ ₹ 17,000ರಿಂದ ₹ 67,550 ತನಕ ಇದೆ.

ಕೇಂದ್ರ ಸರ್ಕಾರವು ಕಳೆದ ಮಾರ್ಚ್ 30ರಂದು ತನ್ನ ನೌಕರರಿಗೆ ಶೇ 4ರಷ್ಟು ತುಟ್ಟಿಭತ್ಯೆ ಘೋಷಿಸಿತ್ತು. ಇದರಿಂದ 1.16 ಕೋಟಿ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಲಾಭವಾಗಿತ್ತು. ಕೇಂದ್ರ ಸರ್ಕಾರಿ ನೌಕರರ ಮೂಲವೇತನದ ಶೇ 31ರಷ್ಟು ತುಟ್ಟಿಭತ್ಯೆಯು ಇದೀಗ ಶೇ 34ಕ್ಕೆ ಏರಿಕೆಯಾಗಿತ್ತು. ಜುಲೈ 1, 2021ರಿಂದ ಪೂರ್ವನ್ವಯವಾಗುವಂತೆ ಕೇಂದ್ರ ಸರ್ಕಾರ ಈ ತುಟ್ಟಿಭತ್ಯೆ ಘೋಷಿಸಿತ್ತು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ₹ 9,544.50 ಕೋಟಿ ಹೊರೆ ಬೀಳಲಿದೆ ಹಣಕಾಸು ಇಲಾಖೆ ತಿಳಿಸಿತ್ತು.

ಕೇಂದ್ರ ಸರ್ಕಾರದ ಘೋಷಣೆಯ ನಂತರ ರಾಜ್ಯ ಸರ್ಕಾರವೂ ನೌಕರರ ವೇತನ ಹೆಚ್ಚಿಸಬೇಕು ಎಂಬ ಬೇಡಿಕೆ ಪ್ರಬಲವಾಗಿ ಕೇಳಿಬಂದಿತ್ತು. ರಾಜ್ಯ ಸರ್ಕಾರಿ ನೌಕರರ ಪರಿಷ್ಕರಣೆಗಾಗಿ ಆಯೋಗ ರಚಿಸಬೇಕೆಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದರು. ಕಳೆದ ಹಲವು ವರ್ಷಗಳಿಂದ ರಾಜ್ಯ ಸರ್ಕಾರಿ ನೌಕರರು ಈ ಬಗ್ಗೆ ಪ್ರಸ್ತಾಪಿಸುತ್ತಲೇ ಇದ್ದರು.

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ, 7ನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಸಮಿತಿ ರಚಿಸಲಾಗುವುದು ಎಂದು ಭರವಸೆ ನೀಡಿದ್ದರು. ಮುಖ್ಯಮಂತ್ರಿಗಳ ನಿರ್ಧಾರವನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಸ್ವಾಗತಿಸಿತ್ತು.

ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳದ ಪ್ರಕ್ರಿಯೆ ಆರಂಭವಾದ ಬೆನ್ನಿಗೇ ಬಾಕಿ ಇರುವ ತುಟ್ಟಿಭತ್ಯೆಯ ಪಾವತಿ (DA arrears) ಬಗ್ಗೆ ಚರ್ಚೆ ಆರಂಭವಾಗಿತ್ತು. ತುಟ್ಟಿಭತ್ಯೆ ಬಾಕಿ ಪಾವತಿಯ ಕುರಿತು ಸರ್ಕಾರ ಶೀಘ್ರ ಆದೇಶ ಹೊರಡಿಸಲಿದೆ ಎಂಬ ಮಾತುಗಳ ಸರ್ಕಾರಿ ನೌಕರರ ವಲಯದಲ್ಲಿದೆ. ಈ ಅದೇಶದ ಅನ್ವಯ ಪ್ರತಿ ನೌಕರರಿಗೆ ಸರಾಸರಿ ₹ 2 ಲಕ್ಷದಷ್ಟು ಬಾಕಿ ಮೊತ್ತ ಸಿಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರವೂ ಇಂಥದ್ದೇ ನಿರ್ಧಾರ ತೆಗೆದುಕೊಳ್ಳಬೇಕೆಂದು ಸರ್ಕಾರಿ ನೌಕರರು ಆಗ್ರಹಿಸುತ್ತಿದ್ದರು.

ತುಟ್ಟಿಭತ್ಯೆ ಲೆಕ್ಕಾಚಾರ

ತುಟ್ಟಿಭತ್ಯೆಯು ಒಬ್ಬ ನೌಕರನ ಸಂಬಳದ ಭಾಗವಾಗಿರುತ್ತದೆ. ಮೂಲ ಸಂಬಳದ ಮೇಲೆ ಶೇಕಡಾವಾರು ಲೆಕ್ಕ ಆಧರಿಸಿ ತುಟ್ಟಿಭತ್ಯೆಯ ಲೆಕ್ಕ ಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ನೌಕರರಿಗೆ ಪಾವತಿಸಲಾಗುತ್ತದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಗ್ರಾಹಕ ದರ ಸೂಚಿ (Consumer Price Index – CPI) ಆಧರಿಸಿ ಲೆಕ್ಕ ಹಾಕಲಾಗುತ್ತದೆ.

ಇದನ್ನೂ ಓದಿ: ಹೋಲಿಕೆಯೇ ಅಸಂಬದ್ಧ: ಬೆಂಗಳೂರು ಬಿಟ್ಟು ಹೈದರಾಬಾದ್​ಗೆ ಬರಲು ಉದ್ಯಮಿಗಳನ್ನು ಆಹ್ವಾನಿಸಿದ್ದಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು

ಇದನ್ನೂ ಓದಿ:  ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ: ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದ ಆಸೆ

Published On - 12:05 pm, Tue, 5 April 22

ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್